“ನಾರಾಯಣ ಗುರು ನಿಗಮ ಸ್ಥಾಪನೆ ಮುಖ್ಯಮಂತ್ರಿಗೆ ಮನವಿ’
Team Udayavani, Sep 14, 2019, 5:26 AM IST
ಕಟಪಾಡಿ: ಪ್ರಪಂಚವೇ ಒಂದು ಕುಟುಂಬದಂತೆ ಶಾಂತಿ, ನೆಮ್ಮದಿ, ಸಮಾನತೆಯಿಂದ ಬದುಕಬೇಕೆಂಬ ಸಂದೇಶ ನೀಡಿರುವ ಆದರ್ಶ ಪುರುಷ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ನಿಗಮ ಸ್ಥಾಪಿಸಿ ಧ್ವನಿ ಇಲ್ಲದವರಿಗೆ ಧ್ವನಿಯಾಗಬೇಕೆಂಬ ಮನವಿಯನ್ನು ರಾಜ್ಯ ಮುಖ್ಯಮಂತ್ರಿಗಳಿಗೆ ಮನವಿಯ ಮೂಲಕ ಒತ್ತಾಯಿಸಲಾಗುತ್ತದೆ ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಸೆ.13ರಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಜಿಲ್ಲಾ ಬಿಲ್ಲವ ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ , ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.
ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಪ್ರತಿಪಾದಿಸಿದ ನಾರಾಯಣ ಗುರುಗಳ ಸಂದೇಶ ಇವತ್ತಿನ ಜಗತ್ತಿಗೆ ಅತ್ಯಂತ ಪ್ರಸ್ತುತವಾಗಿದೆ. ಇಡೀ ಪ್ರಪಂಚ ಒಂದೇ ಕುಟುಂಬದಂತೆ ಶಾಂತಿ, ಸಮಾನತೆ, ಸಹಬಾಳ್ವೆಯಿಂದ ಬದುಕಬೇಕೆಂದು ಗುರುಗಳು ಬಯಸಿದ್ದರು. ಅವರು ಜಗತ್ತಿಗೇ ಸಾರಿದ ಸಮಾನತೆಯ ಸಂದೇಶ ನಮಗೆಲ್ಲರಿಗೂ ಆದರ್ಶ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಬಲಾಡ್ಯರನ್ನು ಎದುರಿಸಿ ಅಸ್ಪೃಶ್ಯತೆ, ಜಾತೀಯತೆಯ ಆತಂಕ ನಿವಾರಿಸಿ ಶೋಷಿತರ ಧ್ವನಿಯಾಗುತ್ತಾ , ಭಾವನೆಗಳ ಭಾಷೆಯ ಮೂಲಕ ಸ್ವಾಭಿಮಾನ, ಕ್ರಾಂತಿಯ ಕಿಡಿಯನ್ನು ಹಚ್ಚಿ, ಜನರಿಗೆ ಶಕ್ತಿ ನೀಡಿದರು. ಸುಂದರ ಬದುಕು ಕಟ್ಟಿ ಕೊಡುವ ಆದರ್ಶನೀಯ ನಾರಾಯಣ ಗುರುಗಳ ತತ್ತÌದಂತೆ ಸಚಿವನಾಗಿ ಅಹರ್ನಿಶಿ ದುಡಿಯುವುದಾಗಿ ಹೇಳಿದರು.
ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರಾಡಳಿತ ಮಂಡಳಿಯ ವತಿಯಿಂದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು.
ಹಿರಿಯಡ್ಕ ಸರಕಾರಿ ಪ.ಪೂ.ಕಾಲೇಜು ಉಪನ್ಯಾಸಕಿ ನಳಿನಾದೇವಿ ಎಂ.ಆರ್ ಉಪನ್ಯಾಸ ನೀಡಿದರು. ಸಪ್ನಾ ಮತ್ತು ನಾಗರಾಜ ಶೇಟ್ ಬಳಗ ಭಜನಾ ಕಾರ್ಯಕ್ರಮ ನಡೆಸಿದರು.
ತಾಲೂಕು ಪಂಚಾಯತ್ ಅಧ್ಯಕ್ಷೆ ನೀತಾಗುರುರಾಜ್ ಪೂಜಾರಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಜನಾರ್ಧನ ತೋನ್ಸೆ, ಗೀತಾಂಜಲಿ ಎಂ. ಸುವರ್ಣ, ಶಿಲ್ಪಾ ಸುವರ್ಣ, ತಾಲೂಕು ಪಂಚಾಯತ್ ಸದಸ್ಯ ನಾಗೇಶ್ ಪೂಜಾರಿ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕಾಪು ತಹಶೀಲ್ದಾರ್ ಮೊಹಮ್ಮದ್ ಇಸಾಕ್, ಕಟಪಾಡಿ ವಿಶ್ವನಾಥ ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಬಿ.ಎನ್.ಶಂಕರ ಪೂಜಾರಿ, ಗೌ|ಪ್ರ|ಕಾರ್ಯದರ್ಶಿ ಯು. ಶಿವಾನಂದ್ ಉಪಸ್ಥಿತರಿದ್ದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕೇರಿ ಸ್ವಾಗತಿಸಿದರು. ಪೂರ್ಣಿಮಾ ವಂದಿಸಿದರು, ದಯಾನಂದ ಉಗ್ಗೆಲ್‌ಬೆಟ್ಟು ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.