ಹಿಂದಿ ದಿವಸ್ ಆಚರಣೆ; ಕನ್ನಡ ಭಾಷಾ ದಿನ ಯಾವಾಗ ಆಚರಿಸುತ್ತೀರಿ? ಎಚ್ ಡಿಕೆ ಟ್ವೀಟ್
Team Udayavani, Sep 14, 2019, 1:30 PM IST
ಬೆಂಗಳೂರು: ದೇಶಾದ್ಯಂತ ಕೇಂದ್ರ ಸರಕಾರ ಇಂದು(ಶನಿವಾರ) ಹಿಂದಿ ದಿವಸ್ ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕನ್ನಡದ ಭಾಷಾ ದಿನವನ್ನು ದೇಶಾದ್ಯಂತ ಯಾವಾಗ ಆಚರಿಸುತ್ತೀರಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.
ಹಿಂದಿ ದಿವಸ್ ಆಚರಣೆಯಲ್ಲಿ ಭಾಗವಹಿಸಿ ಮಾತನಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಭಾರತದಲ್ಲಿ ಹಿಂದಿಯೇ ರಾಷ್ಟ್ರಭಾಷೆಯಾಗಬೇಕು. ಹಿಂದಿ ಭಾಷೆಯ ಮೂಲಕವೇ ಭಾರತ ವಿಶ್ವ ಮಟ್ಟದಲ್ಲಿ ಗುರುತಿಸುವಂತಾಗಬೇಕು ಎಂದು ಅಭಿಪ್ರಾಯವ್ಯಕ್ತಪಡಿಸಿದ್ದರು.
ಇದೀಗ ಹಿಂದಿ ದಿವಸ್ ನಲ್ಲಿ ಹಿಂದಿ ಕುರಿತು ಪ್ರಸ್ತಾಪವಾಗುತ್ತಿದ್ದಂತೆಯೇ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ನಲ್ಲಿ, ಇಂದು ದೇಶಾದ್ಯಂತ ಕೇಂದ್ರ ಸರ್ಕಾರ ಹಿಂದಿ ದಿವಸ್ ಆಚರಿಸುತ್ತಿದೆ. ಸಂವಿಧಾನದಲ್ಲಿ ಹಿಂದಿಯೊಂದಿಗೆ ಅಧಿಕೃತ ಭಾಷೆ ಎನಿಸಿಕೊಂಡಿರುವ ಕನ್ನಡದ ಭಾಷಾ ದಿವಸವನ್ನು ದೇಶಾದ್ಯಂತ ಯಾವಾಗ ಆಚರಿಸುತ್ತೀರಿ ಪ್ರಧಾನಿ ನರೇಂದ್ರ ಮೋದಿಯವರೇ? ಕನ್ನಡಿಗರೂ ಈ ಒಕ್ಕೂಟ ವ್ಯವಸ್ಥೆಯ ಭಾಗವಾಗಿದ್ದಾರೆ ನೆನಪಿರಲಿ..#StopHindiImposition #HindiDiwas #ಕನ್ನಡ ದಿನ ಹ್ಯಾಶ್ ಟ್ಯಾಗ್ ಬಳಸಿಕೊಂಡಿದ್ದಾರೆ.
ಇಂದು ದೇಶದಾದ್ಯಂತ ಕೇಂದ್ರ ಸರ್ಕಾರ ‘ಹಿಂದಿ ದಿವಸ್’ ಆಚರಿಸುತ್ತಿದೆ. ಸಂವಿಧಾನದಲ್ಲಿ ಹಿಂದಿಯೊಂದಿಗೆ ಅಧಿಕೃತ ಭಾಷೆ ಎನಿಸಿಕೊಂಡಿರುವ ಕನ್ನಡದ ಭಾಷಾ ದಿವಸವನ್ನು ದೇಶಾದ್ಯಂತ ಯಾವಾಗ ಆಚರಿಸುತ್ತೀರಿ @narendramodi ಯವರೇ? ಕನ್ನಡಿಗರೂ ಈ ಒಕ್ಕೂಟ ವ್ಯವಸ್ಥೆಯ ಭಾಗವಾಗಿದ್ದಾರೆ ನೆನಪಿರಲಿ.#StopHindiImposition #HindiDiwas #ಕನ್ನಡದಿನ
— H D Kumaraswamy (@hd_kumaraswamy) September 14, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.