ಬಿಲ್ಲವರ ಭವನ: ಬ್ರಹ್ಮಶ್ರೀ ನಾರಾಯಣ ಗುರು 165ನೇ ಜನ್ಮೋತ್ಸವ
Team Udayavani, Sep 14, 2019, 2:58 PM IST
ಮುಂಬಯಿ, ಸೆ.13: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಶುಕ್ರವಾರ ಸಂಜೆ ಸಾಂತಾಕ್ರೂಜ್ ಪೂರ್ವದಲ್ಲಿನ ಬಿಲ್ಲವ ಭವನದ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಜಯಂತ್ಯೋತ್ಸವ ಸಂಭ್ರಮಿಸಿತು. ಶ್ರೀ ಮಹಾಶೇಷ ರುಂಡಮಾಲಿನಿ ದೇವಸ್ಥಾನ ಪಂಚಕುಟೀರ (ಸುವರ್ಣ ಮಂದಿರ) ಪೊವಾಯಿ ಧರ್ಮದರ್ಶಿ ಶ್ರೀ ಸುವರ್ಣ ಬಾಬಾ ಜಯಂತ್ಯುತ್ಸವವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಗೌರವಾಧ್ಯಕ್ಷ ಜಯ ಸಿ. ಸುವರ್ಣ ವಿಶೇಷ ಉಪಸ್ಥಿತಿ ಹಾಗೂ ಬಿಲ್ಲವರ ಅಸೋಸಿಯೇಶನ್‌ನ ಅಧ್ಯಕ್ಷ ಚಂದ್ರಶೇಖರ ಎಸ್. ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಸಲ್ಪಟ್ಟ ಸಮಾರಂಭದಲ್ಲಿ ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ, ಜಿಎಸ್‌ಬಿ ಸಭಾ ದಹಿಸರ್-ಬೋರಿವಲಿ ಉಪಾಧ್ಯಕ್ಷ ಸಾಣೂರು ಮನೋಹರ್ ವಿ. ಕಾಮತ್, ಶಾಫಿ ವೆಲ್ಫೇರ್ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ನ್ಯಾ| ಬಿ. ಮೊಯಿದ್ದೀನ್ ಮುಂಡ್ಕೂರು, ಪದ್ಮಶಾಲಿ ಸಮಾಜ ಸೇವಾ ಸಂಘ ಮುಂಬಯಿ ಅಧ್ಯಕ್ಷ ಉತ್ತಮ್ ಶೇರಿಗಾರ್, ಸಾಫಲ್ಯ ಸೇವಾ ಸಂಘ ಮುಂಬಯಿ ಅಧ್ಯಕ್ಷ ಶ್ರೀನಿವಾಸ ಪಿ.ಸಾಫಲ್ಯ, ರಾಮರಾಜ ಕ್ಷತ್ರೀಯ ಸೇವಾ ಸಂಘ ಮುಂಬಯಿ ಅಧ್ಯಕ್ಷ ರಾಜ್‌ಕುಮಾರ್ ಕಾರ್ನಾಡ್, ಅನ್ನು ಪೂಜಾರಿ ಮಂಗಳೂರು ಪ್ರಧಾನ ಅಭ್ಯಾಗತರಾಗಿದ್ದರು.
ಬ್ರಹ್ಮಶ್ರೀ ವರ್ಧಂತ್ಯೋತ್ಸವದ ನಿಮಿತ್ತ ಪ್ರಭಾಕರ ಸಸಿಹಿತ್ಲು ಮತ್ತು ಬಳಗ ‘ಓಂ ನಮೋ ನಾರಾಯಣಾಯ ನಮಃ ಶಿವಾಯಃ’ ಜಪಯಜ್ಞ, ಭಜನೆ ನಡೆಸಿದರು. ಅಂತೆಯೇ ಧನಂಜಯ ಎಸ್.ಶಾಂತಿ ಅವರು ತಮ್ಮ ಪೌರೋಹಿತ್ಯದಲ್ಲಿ ಗಣಹೋಮ, ನವಕ ಪ್ರಧಾನ ಕಲಶಾಬಿಷೇಕ, ಪ್ರಧಾನ ಪೂಜೆ ನೆರವೇರಿಸಿ ಮಹಾರತಿಗೈದರು. ರವೀಂದ್ರ ಎ. ಶಾಂತಿ ಮತ್ತು ಉಳ್ಳೂರು ಶೇಖರ್ ಶಾಂತಿ ಪ್ರಸಾದ ವಿತರಿಸಿ ಅನುಗ್ರಹಿಸಿದರು.
ಅಸೋಸಿಯೇಶನ್‌ನ ಉಪಾಧ್ಯಕ್ಷರಾದ ಶಂಕರ ಡಿ. ಪೂಜಾರಿ, ದಯಾನಂದ್ ಆರ್. ಪೂಜಾರಿ, ಶ್ರೀನಿವಾಸ ಆರ್. ಕರ್ಕೇರ, ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ ಎಸ್.ಶಾಂತಿ, ಗೌರವ ಪ್ರಧಾನ ಕೋಶಾಧಿಕಾರಿ ರಾಜೇಶ್ ಜೆ. ಬಂಗೇರ, ಸಾಮಾಜಿಕ-ಧಾರ್ಮಿಕ ಸಮಿತಿ ಕಾರ್ಯಾಧ್ಯಕ್ಷ ಮೋಹನ್‌ದಾಸ್ ಜಿ. ಪೂಜಾರಿ, ಗೌರವ ಕಾರ್ಯದರ್ಶಿ ರವೀಂದ್ರ ಎ. ಶಾಂತಿ ಯುವಾಭ್ಯುದಯ ಸಮಿತಿ ಕಾರ್ಯಾಧ್ಯಕ್ಷ ನಾಗೇಶ್ ಎನ್.ಕೋಟ್ಯಾನ್ ಮತ್ತಿತರ ಪದಾಧಿಕಾರಿಗಳು, ಸೇವಾದಳದ ಕಾರ್ಯಕರ್ತರು, ಭಾರತ್ ಬ್ಯಾಂಕ್‌ನ ನಿರ್ದೇಶಕರು, ಉನ್ನತಾಧಿಕಾರಿಗಳು ಸೇರಿದಂತೆ ಅಸೋಸಿಯೇಶನ್‌ನ ಸರ್ವ ಸ್ಥಳೀಯ ಸಮಿತಿಗಳ ಮುಖ್ಯಸ್ಥರು, ಸದಸ್ಯರನೇಕರು ಜನ್ಮೋತ್ಸವದಲ್ಲಿ ಪಾಲ್ಗೊಂಡು ಗುರುವರ್ಯರ ಸಂಭ್ರಮಕ್ಕೆ ಪಾತ್ರರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.