“ಅಮೃತಮತಿ’ ಅವತಾರದಲ್ಲಿ ಹರಿಪ್ರಿಯಾ
ಯಶೋಧರ ಚರಿತೆ ಕಾವ್ಯವನ್ನು ಆಧರಿಸಿದ ಚಿತ್ರಕ್ಕೆ ಬರಗೂರು ರಾಮಚಂದ್ರಪ್ಪ ನಿರ್ದೇಶನ
Team Udayavani, Sep 15, 2019, 3:01 AM IST
ಇತ್ತೀಚೆಗೆ ಒಂದು ಚಿತ್ರದಿಂದ ಮತ್ತೊಂದು ಚಿತ್ರಕ್ಕೆ ಸಾಕಷ್ಟು ವಿಭಿನ್ನ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿರುವ ನಟಿ ಹರಿಪ್ರಿಯಾ ಈಗ ಸದ್ದಿಲ್ಲದೆ ಮತ್ತೊಂದು ಹೊಸ ಚಿತ್ರವನ್ನು, ಹೊಸ ಪಾತ್ರವನ್ನು ಒಪ್ಪಿಕೊಂಡಿದ್ದಾರೆ. ಅಂದಹಾಗೆ, ಈ ಬಾರಿ ಹರಿಪ್ರಿಯಾ ಹದಿಮೂರನೇ ಶತಮಾನದಲ್ಲಿ ಮಹಾಕವಿ ಜನ್ನ ಬರೆದಿರುವ ಯಶೋಧರ ಚರಿತೆ ಕಾವ್ಯವನ್ನು ಆಧರಿಸಿದ ಚಿತ್ರದ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.
ಇನ್ನು ಈ ಚಿತ್ರಕ್ಕೆ “ಅಮೃತಮತಿ’ ಎಂದು ಹೆಸರಿಡಲಾಗಿದ್ದು, ಚಿತ್ರದಲ್ಲಿ ಹರಿಪ್ರಿಯಾ ಯುವರಾಜ ಯಶೋಧರನ ಪತ್ನಿ “ಅಮೃತಮತಿ’ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಬರಗೂರು ರಾಮಚಂದ್ರಪ್ಪ ಈ ಚಿತ್ರಕ್ಕೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಅರಮನೆಯಲ್ಲಿದ್ದರೂ, ಅಷ್ಟೆ„ಶ್ವರ್ಯಗಳಿದ್ದರೂ ಅಮೃತಮತಿ ಮನಸ್ಸಿಗೆ ನೆಮ್ಮದಿ, ಖುಷಿ ಇರುವುದಿಲ್ಲ.
ಇದೇ ವೇಳೆ ಒಮ್ಮೆ ಕುದುರೆ ಲಾಯದಲ್ಲಿ ಸುಶ್ರಾವ್ಯವಾಗಿ ಹಾಡುತ್ತಿದ್ದ ಕೆಲಸದ ಆಳು ಅಷ್ಟಾವಂಕನ ಹಾಡನ್ನು ಕೇಳಿದ “ಅಮೃತಮತಿ’ ಅವನ ಪ್ರೀತಿಯಲ್ಲಿ ಬೀಳುತ್ತಾಳೆ. ಮುಂದೆ ಏನಾಗುತ್ತದೆ ಎನ್ನುವ, ಅಮೃತಮತಿಯ ಪಾತ್ರದ ಸುತ್ತ ಸಾಗುವ ಕಥೆಯನ್ನು ಬರಗೂರು ದೃಶ್ಯರೂಪದಲ್ಲಿ ತೆರೆಮೇಲೆ ತರುತ್ತಿದ್ದಾರೆ. ಸದ್ಯ ಈ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ಭರದಿಂದ ನಡೆಯುತ್ತಿದ್ದು, ಮುಂದಿನ ತಿಂಗಳ ಹೊತ್ತಿಗೆ ಚಿತ್ರ ಸೆಟ್ಟೇರುವ ಸಾಧ್ಯತೆ ಇದೆ ಎಮ್ಮಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.