ಯಲ್ಲಾಲಿಂಗ ಪ್ರಕರಣ ಸಿಬಿಐಗೆ ವಹಿಸಿ

•2005, ಜ. 11ರಂದು ಅನುಮಾನಾಸ್ಪದ ಸಾವು•ಸದ್ಯ ಸಿಐಡಿಯಿಂದ ತನಿಖೆ

Team Udayavani, Sep 15, 2019, 11:48 AM IST

Udayavani Kannada Newspaper

ಕೊಪ್ಪಳ: ಜಿಲ್ಲೆಯ ಕನಕಗಿರಿ ತಾಲೂಕಿನ ಕನಕಾಪೂರ ಗ್ರಾಮದ ವಿದ್ಯಾರ್ಥಿ ಯಲ್ಲಾಲಿಂಗ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಒತ್ತಾಯಿಸಿ ಯಲ್ಲಾಲಿಂಗನ ತಾಯಿ ಕೆಂಚಮ್ಮಾ ಅಗಸಿಮಂದಿನ್‌ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಕೊಪ್ಪಳದ ರೈಲ್ವೆ ಸ್ಟೇಷನ್‌ ಸಮೀಪ 2005, ಜ. 11ರಂದು ಯಲ್ಲಾಲಿಂಗ ದೇಹ ತುಂಡರಿಸಿದ ರೀತಿಯಲ್ಲಿ ಪತ್ತೆಯಾಗಿತ್ತು. ಉದ್ದೇಶ ಪೂರ್ವಕ ಕೊಲೆ ಮಾಡಿರುವುದಾಗಿ ಆರೋಪಿಸಿ ಸರ್ಕಾರಕ್ಕೆ ಮನವಿ ಮಾಡಿದ್ದೆವು. ಆಗ ತಾವು ನಮ್ಮ ಮನೆಗೆ ಭೇಟಿ ನೀಡಿ ಸ್ಪಂದಿಸಿ ಸರ್ಕಾರದ ಮಟ್ಟದಲ್ಲಿ ತನಿಖೆಗೆ ಒತ್ತಾಯಿಸಿದ್ದೀರಿ. ಈ ಹಿನ್ನೆಲೆಯಲ್ಲಿ ಅಂದಿನ ಸರ್ಕಾರವನ್ನು ಪ್ರಕರಣ ಸಿಐಡಿಗೆ ವಹಿಸಿತ್ತು. ಪ್ರಕರಣದಲ್ಲಿ ಒಂಬತ್ತು ಆರೋಪಿಗಳನ್ನು ಸಿಐಡಿ ತಂಡ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಅದರಲ್ಲಿ ಮೊದಲ ಆರೋಪಿ ಹನುಮೇಶ್‌ ನಾಯಕ್‌ ಜಾಮೀನು ಪಡೆದು ಹೊರ ಬಂದಿದ್ದು, ನಮ್ಮ ಕುಟುಂಬ ಮೇಲೆ ಮತ್ತೆ ದೌರ್ಜನ್ಯ ಎಸಗುತ್ತಿದ್ದಾನೆ. ಅವರ ಸಹೋದರ ರಮೇಶ ನಾಯಕ್‌ ಎಲ್ಲ ಸಾಕ್ಷಿಗಳಿಗೆ ಹಣದ ಆಮಿಷ ತೋರಿಸಿ, ಹೆದರಿಸಿ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಸಿದ್ದಾರೆ. ಇದರಿಂದ ನಮ್ಮ ಮಗನ ಸಾವಿಗೆ ನ್ಯಾಯ ಸಿಗುತ್ತಿಲ್ಲವೆಂದು ತಾಯಿ ಕೆಂಚಮ್ಮ ಸಿಎಂ ಮುಂದೆ ಅಳಲು ತೋಡಿಕೊಂಡಿದ್ದಾಳೆ.

ರಮೇಶ ಮಾನಪ್ಪ ನಾಯಕ್‌ ಅಂದಿನ ಸಚಿವರಾಗಿದ್ದ ಶಿವರಾಜ ತಂಗಡಗಿ ಅವರ ಪ್ರಭಾವ ಬಳಸಿ ಪ್ರಕರಣದಿಂದ ಹೆಸರು ತೆಗೆಸಲಾಗಿದೆ. ಉಳಿದವರು ಬೇಲ್ ಪಡೆದು ಹೊರ ಬಂದಿದ್ದಾರೆ. ಕೂಡಲೇ ಈತನನ್ನು ವಿಚಾರಣೆ ಮಾಡಬೇಕು. ಇದರಲ್ಲಿ ಈತನ ಪಾತ್ರವೂ ಇದೆ ಎಂದು ಆರೋಪಿಸಿದ ಅವರು, ಈ ಪ್ರಕರಣ ನಡೆದು ಐದು ವರ್ಷ ಗತಿಸಿದ್ದು, ಸರ್ಕಾರ ಯಾವುದೇ ಪರಿಹಾರ ಕೊಟ್ಟಿಲ್ಲ. ಹೀಗಾಗಿ ನಮ್ಮ ಕುಟುಂಬ ಬೀದಿ ಪಾಲಾಗಿದ್ದು, ಸರ್ಕಾರವು ಕೂಡಲೇ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

accident

Vitla: ರಿಕ್ಷಾ- ಬೈಕ್‌ ಢಿಕ್ಕಿ; ಮೂವರಿಗೆ ಗಾಯ

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

15-uv-fusion

Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.