ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಪೋಸ್ಟ್‌ ಕಾರ್ಡ್‌ ಧರಣಿ


Team Udayavani, Sep 16, 2019, 3:00 AM IST

karmika

ಮೈಸೂರು: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಫೆಡರೇಷನ್‌ ವತಿಯಿಂದ ನಗರದ ಪ್ರಧಾನ ಅಂಚೆ ಕಚೇರಿ ಬಳಿ ಪೋರ್ಸ್‌ಕಾರ್ಡ್‌ ಸಲ್ಲಿಸುವ ಮೂಲಕ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಕಾರ್ಮಿಕರ ಪರವಾದ ಕಾಯ್ದೆಗಳನ್ನು ಮೊಟಕುಗೊಳಿಸಿ ಕಾರ್ಪೊರೇಟರ್‌ ಪರವಾಗಿ ಕಾಯಿದೆ ರೂಪಿಸುತ್ತಿದೆ ಎಂದು ಆರೋಪಿಸಿದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಕೇಂದ್ರದ ಕಾರ್ಮಿಕ ವಿರೋಧಿ ನೀತಿಯಿಂದ ಕೋಟ್ಯಂತರ ಕಟ್ಟಡ ಕಾರ್ಮಿಕರು ಬೀದಿಗೆ ಬೀಳುವಂತಾಗಲಿದೆ ಎಂದು ಆರೋಪಿಸಿ, ಕೇಂದ್ರ ಸರ್ಕಾರ ಕೂಡಲೆ ಮಸೂದೆಯನ್ನು ವಾಪಾಸ್‌ ಪಡೆದುಕೊಳ್ಳುವಂತೆ ಪ್ರಧಾನಮಂತ್ರಿಗೆ ಪೋಸ್ಟ್‌ಕಾರ್ಡ್‌ ಮೂಲಕ ಲಿಖೀತ ಮನವಿ ಸಲ್ಲಿಸಿ, ಅಂಚೆ ಪತ್ರ ಚಳವಳಿ ನಡೆಸಿದರು.

ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿರುವ ಕಾರ್ಮಿಕರ ನಿಧಿಯನ್ನು ಗುಳಂ ಮಾಡುವ ಹಿನ್ನೆಲೆಯಲ್ಲಿ ಸಾಮಾಜಿಕ ಸುರಕ್ಷತಾ ಮಸೂದೆ 2018 ಅನ್ನು ಜಾರಿ ಮಾಡಲು ಮುಂದಾಗಿದೆ. ಈಗಾಗಲೇ ವೃತ್ತಿ ಆಧಾರಿತ ಸುರಕ್ಷಾ ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿ ಕುರಿತಾದ ಮಸೂದನೆಯನ್ನು ಸಂಸತ್ತಿನಲ್ಲಿ ಮಂಡಿಸಿ ಅನುಮೋದನೆ ಪಡೆದಿದೆ. ಇದರಿಂದ 4 ಕೋಟಿ ಕಟ್ಟಡ ನಿರ್ಮಾಣ ಕಾರ್ಮಿಕರು ಈಗ ಪಡೆಯುತ್ತಿರುವ ಹಲವು ಸೌಲಭ್ಯಗಳಿಂದ ವಂಚಿತರಾಗಲಿದ್ದಾರೆ ಎಂದರು.

1996ರಲ್ಲಿ ಜಾರಿಯಾದ ಕಟ್ಟಡ ಕಾರ್ಮಿಕ ಕಾನೂನು ಹಾಗೂ ಸೆಸ್‌ ಕಾನೂನುಗಳೆರಡು ರದ್ದಾಗುತ್ತದೆ. ಈಗಾಗಲೇ ನೋಂದಣೆಯಾಗಿರುವ ದೇಶದ 4 ಕೋಟಿ ನೋಂದಾಯಿತ ಕಟ್ಟಡ ಕಾರ್ಮಿಕರ ಗುರುತಿನ ಚೀಟಿಗಳು ರದ್ದಾಗುತ್ತವೆ. ಅಂದರೆ ಈಗ ಕರ್ನಾಟಕದ ನೋಂದಾಯಿತ ಸುಮಾರು 6 ಲಕ್ಷ ಜನರು ವಿವಿಧ ಕಲ್ಯಾಣ ಸೌಲಭ್ಯಗಳಿಗೆ ಅರ್ಜಿ ಹಾಕಿದ್ದಾರೆ. ಅವರೆಲ್ಲರೂ 14 ಸೌಲಭ್ಯಗಳನ್ನು ಪಡೆಯಲು ಅರ್ಹರಿದ್ದಾರೆ. ಈ ಹೊಸ ಕಾನೂನು ಜಾರಿಯಾದರೆ ಸೇವೆಗಳಿಂದ ವಂಚಿತರಾಗುತ್ತಾರೆ ಎಂದರು.

ನೂತನವಾಗಿ ಪ್ರಾರಂಭವಾಗುವ ಸಲಹಾ ಮಂಡಳಿಗಳಲ್ಲಿ ಕಟ್ಟಡ ಕಾರ್ಮಿಕ ಸಂಘಟನೆಗಳಿಗೆ ಹೆಚ್ಚಿನ ಪ್ರಾತಿನಿಧ್ಯತೆ ಇರುವುದಿಲ್ಲ. ಕಲ್ಯಾಣ ಮಂಡಳಿಗಳಲ್ಲಿ ಶೇಖರಿಸಲ್ಪಟ್ಟ 70 ಸಾವಿರ ಕೋಟಿ ಹಣ ಕೇಂದ್ರ ಸರ್ಕಾರ ವಶವಾಗಲಿದೆ. ಕಾರ್ಮಿಕರ ನೋಂದಣಿ ನವೀಕರಣ ಹಾಗೂ ಸೌಲಭ್ಯಗಳ ವಿತರಣೆ ಖಾಸಗಿಯವರ ಕೈಗೆ ವಹಿಸಿ ಅವರಿಗೆ ಅನುಕೂಲ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.

ಕಟ್ಟಡ ಕಾರ್ಮಿಕ ಕಾನೂನು-1996 ಉಳಿಸಿ-ಕಟ್ಟಡ ಕಾರ್ಮಿಕ ಮಂಡಳಿ ರಕ್ಷಿಸುವಂತೆ ಚುನಾವಣೆ ಪೂರ್ವದಲ್ಲಿ ಸಂಸದರ ಮನೆ ಎದುರು ಪ್ರತಿಭಟನೆ ನಡೆಸಿದ್ದವು. ಈಗ ಸೆ. 19ರಂದು ಬೆಂಗಳೂರಿನಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳು ಜಂಟಿಯಾಗಿ ಬೃಹತ್‌ ಹೋರಾಟ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಎಐಟಿಯುಸಿ ಉಪ ಪ್ರಧಾನ ಕಾರ್ಯದರ್ಶಿ ಎಚ್‌.ಬಿ.ರಾಮಕೃಷ್ಣ, ಉಪಾಧ್ಯಕ್ಷ ಡಿ.ಜಗನ್ನಾಥ್‌, ಕಟ್ಟಡ ನಿರ್ಮಾಣ ಸಂಘಟನೆ ಅಧ್ಯಕ್ಷ ಕೆ.ಎಸ್‌.ರೇವಣ್ಣ, ಸಿದ್ದರಾಜು, ಶಿವಣ್ಣ, ವೈ.ಮಹದೇವಯ್ಯ, ಎಂ.ಮಂಜುನಾಥ್‌, ಸಿದ್ದೇಗೌಡ, ಜಿ.ಜಯರಾಂ ಇತರರಿದ್ದರು.

ಟಾಪ್ ನ್ಯೂಸ್

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

6(1

Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

5

Kundapura: ಬಸ್‌ ತಂಗುದಾಣಗಳೇ ಮಾಯ; ಜನರು ಅಯೋಮಯ!

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.