ಕೇಂದ್ರ,ರಾಜ್ಯ ಸರಕಾರದ ವೈಫಲ್ಯ:ಬೃಹತ್ ಪ್ರತಿಭಟನೆ
ಕಾಪು ಬ್ಲಾಕ್ ಕಾಂಗ್ರೆಸ್ ದಕ್ಷಿಣ ಉತ್ತರ ವಲಯ ಸಮಿತಿ
Team Udayavani, Sep 17, 2019, 5:11 AM IST
ಕಾಪು: ರಾಜ್ಯದಲ್ಲಿ ಉಂಟಾದ ಪ್ರವಾಹ ಸಂತ್ರಸ್ತರು ಮತ್ತು ಬರಗಾಲ ಪೀಡಿತ ಪ್ರದೇಶಗಳನ್ನು ಕೇಂದ್ರ ಸರಕಾರ ಸಂಪೂರ್ಣ ಕಡೆಗಣಿಸಿದೆ. ಶ್ರೀಮಂತ ರಾಷ್ಟ್ರ ರಷ್ಯಾಕ್ಕೆ ಬಿಲಿಯನ್ ಮೊತ್ತದಲ್ಲಿ ಸಾಲ ನೀಡಲು ಮುಂದಾಗಿರುವ ಕೇಂದ್ರ ಸರಕಾರವು, ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ಕನಿಷ್ಠ ಮೊತ್ತದ ಸಹಾಯಧನವನ್ನೂ ಘೋಷಿಸದೇ ಇರುವುದು ನಮ್ಮೆಲ್ಲರ ದೌರ್ಭಾಗ್ಯವಾಗಿದೆ. ಈ ಮೂಲಕ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ದಕ್ಷಿಣ ಭಾರತದ ರಾಜ್ಯಗಳ ಬಗೆಗಿನ ನಿರ್ಲಕ್ಷ್ಯ ಧೋರಣೆ ಎದ್ದು ಕಾಣುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜ ಆರೋಪಿಸಿದರು.
ಕಾಪು ಬ್ಲಾಕ್ ಕಾಂಗ್ರೆಸ್‌ನ ದಕ್ಷಿಣ ಮತ್ತು ಉತ್ತರ ವಲಯ ಸಮಿತಿಗಳ ವತಿಯಿಂದ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಸೋಮವಾರ ಕಾಪುವಿನಲ್ಲಿ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆ ಮತ್ತು ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಭರವಸೆ ಮರೆತ ಶಾಸಕ, ಸಂಸದರು ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ಜನ ಸಾಮಾನ್ಯರ ಮೇಲೆ ಹೊರೆಯಾಗುವಂತಹ ನೂತನ ವಾಹನ ಕಾಯ್ದೆಯನ್ನು ಜಾರಿಗೊಳಿಸಿ ಭಾರೀ ದಂಡ ವಸೂಲಿ ಮಾಡುತ್ತಿರುವ ಸರಕಾರದ ಜನವಿರೋಧಿ ಧೋರಣೆ ಖಂಡನೀಯವಾಗಿದೆ.
ಮರಳುಗಾರಿಕೆಯ ಬಗ್ಗೆ ಭಾರೀ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಕರಾವಳಿಯ ಸಂಸದರು ಮತ್ತು ಶಾಸಕರು ಜನರಿಗೆ ನೀಡಿದ ಆಶ್ವಾಸನೆಯನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಈ ಬಗ್ಗೆ ಜನಾಭಿಪ್ರಾಯ ಮೂಡಿಸುವ ನಿಟ್ಟಿನಲ್ಲಿ ಕೆಪಿಸಿಸಿ ನಿರ್ದೇಶನದಂತೆ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಮಾಜಿ ಶಾಸಕರಾದ ಗೋಪಾಲ ಪೂಜಾರಿ ಬೈಂದೂರು, ಶಕುಂತಳಾ ಶೆಟ್ಟಿ ಪುತ್ತೂರು, ಯು.ಆರ್. ಸಭಾಪತಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿ.ಪಂ. ಸದಸ್ಯ ವಿಲ್ಸನ್ ರೋಡ್ರಿಗಸ್, ಕಾಪು ಬ್ಲಾಕ್ ಕಾಂಗ್ರೆಸ್ ದಕ್ಷಿಣ ವಲಯ ಸಮಿತಿ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ, ಉತ್ತರ ವಲಯ ಸಮಿತಿ ಪ್ರವೀಣ್ ಶೆಟ್ಟಿ ಕೊರಂಗ್ರಪಾಡಿ, ಕಾಪು ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಸಾಧಿಕ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೀತಾ ವಾಗ್ಲೆ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಶ್ವಾಸ್ ಅಮೀನ್, ತಾ.ಪಂ. ಸದಸ್ಯರಾದ ಯು.ಸಿ. ಶೇಖಬ್ಬ, ದಿನೇಶ್ ಕೋಟ್ಯಾನ್, ಡಾ| ಸುನೀತಾ ಶೆಟ್ಟಿ, ಪಕ್ಷದ ಮುಖಂಡರಾದ ಶಿವಾಜಿ ಸುವರ್ಣ, ವೆರೋನಿಕಾ ಕರ್ನೇಲಿಯೋ, ಎಂ.ಪಿ. ಮೊಯ್ದಿನಬ್ಬ, ವೈ. ಸುಕುಮಾರ್, ಹರೀಶ್ ಕಿಣಿ, ರಮೇಶ್ ಕಾಂಚನ್, ದಿನೇಶ್ ಪುತ್ರನ್, ದಿವಾಕರ ಕುಂದರ್, ಗಣೇಶ್ ಕೋಟ್ಯಾನ್, ದೀಪಕ್ ಕುಮಾರ್ ಎರ್ಮಾಳ್, ರಾಜೇಶ್ ರಾವ್, ಅಬ್ದುಲ್ ಅಜೀಜ್, ಪ್ರಭಾ ಶೆಟ್ಟಿ, ಪಕ್ಷದ ವಿವಿಧ ಸ್ಥರಗಳ ಜನಪ್ರತಿನಿಧಿಗಳು, ಬ್ಲಾಕ್ ಮಟ್ಟದ ಪದಾಧಿಕಾರಿಗಳು ಮತ್ತು ಸ್ಥಾನೀಯ ಕಾಂಗ್ರೆಸ್‌ನ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾಪು ಬ್ಲಾಕ್ ಕಾಂಗ್ರೆಸ್ ದಕ್ಷಿಣ ಸಮಿತಿಯ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ ಸ್ವಾಗತಿಸಿದರು. ಪ್ರ. ಕಾರ್ಯದರ್ಶಿಗಳಾದ ಹರೀಶ್ ನಾಯಕ್ ವಂದಿಸಿ, ಅಮೀರ್ ಮಹಮ್ಮದ್ ನಿರೂಪಿಸಿದರು.
ಕಾಪು ವಿದ್ಯಾನಿಕೇತನ ಶಾಲೆಯ ಬಳಿಯಿರುವ ಸಾಗರ್ ರತ್ನ ಹೋಟೆಲ್ ವಠಾರದಿಂದ ಪ್ರಾರಂಭಗೊಂಡ ಪ್ರತಿಭಟನಾ ಮೆರವಣಿಗೆಯು ಕಾಪು ಪೇಟೆಗೆ ಸುತ್ತು ಹೊಡೆದು, ರಿಕ್ಷಾ ನಿಲ್ದಾಣದ ಬಳಿ ಪ್ರತಿಭಟನಾ ಸಭೆ ನಡೆಸಲಾಯಿತು. ಬಳಿಕ ತಹಶೀಲ್ದಾರ್ ಕಛೇರಿಗೆ ತೆರಳಿ ರಾಜ್ಯಪಾಲರಿಗೆ ಪ್ರತಿಭಟನಾ ಮನವಿ ಸಲ್ಲಿಸಲಾಯಿತು.
ಪಕ್ಷ ಸಂಘಟನೆಗೆ ಒತ್ತು
ರಾಜ್ಯ ಮತ್ತು ಕೇಂದ್ರ ಸರಕಾರಗಳ ವೈಫಲ್ಯಗಳನ್ನು ಜನತೆಯ ಮುಂದೆ ಎತ್ತಿ ತೋರಿಸುವುದರ ಜತೆಗೆ, ಪಕ್ಷ ಸಂಘಟನೆಯ ಉದ್ದೇಶವನ್ನೂ ಇಟ್ಟುಕೊಂಡು ಜಿಲ್ಲೆಯಾದ್ಯಂತ ಪಕ್ಷವನ್ನು ಕಟ್ಟುವ ಪ್ರಯತ್ನಕ್ಕೆ ಕೈ ಹಾಕಿದ್ದೇವೆ. ಇದನ್ನು ಬೆಂಬಲಿಸಿ, ನೂರಾರು ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
-ವಿನಯಕುಮಾರ್ ಸೊರಕೆ,
ಮಾಜಿ ಸಚಿವರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.