ಕೆವೈಸಿ ದೃಢೀಕರಣ: ಪಡಿತರ ವಿತರಣೆಗೆ ನಾನಾ ಸಮಸ್ಯೆಗಳು

ಮುಗಿಯದ ಸರ್ವರ್‌ ಗೋಳು ,ದೃಢೀಕರಣಕ್ಕೆ 2 ತಿಂಗಳ ಕಾಲಮಿತಿ

Team Udayavani, Sep 17, 2019, 5:29 AM IST

KYC

ಸಾಂದರ್ಭಿಕ ಚಿತ್ರ

ಉಡುಪಿ: ಆಹಾರ ನಾಗರಿಕ ಇಲಾಖೆಯ ಕೆವೈಸಿ ದೃಢೀಕರಣಕ್ಕೆ ಆದೇಶ ನೀಡುತ್ತಿದಂತೆ ಸರ್ವರ್‌ನಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು ಸಾರ್ವ ಜನಿಕರು ಪಡಿತರ ಪಡೆದುಕೊಳ್ಳಲು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಕಳೆದ ಮೂರು ದಿನದಿಂದ ಸರ್ವರ್‌ ಪದೇ ಪದೇ ಸಂಪರ್ಕವನ್ನು ಕಡಿದುಕೊಳ್ಳುತ್ತಿದ್ದು, ಇದರಿಂದಾಗಿ ಸಿಬಂದಿ ಗಂಟೆಗೆ ಮೂರು ಜನರಿಗೆ ಪಡಿತರ ವಿತರಿಸುವುದೇ ದೊಡ್ಡ ಸವಾಲಿನ ಕೆಲಸವಾಗಿದೆ.

ಕಾರಣವೇನು?
ನ್ಯಾಯಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್‌ ಪದ್ಧತಿ ಅಳವಡಿಸಿ ವರ್ಷ ಕಳೆದಿದೆ. ಅಂದಿನಿಂದ ಇಂದಿನ ವರೆಗೆ ಪಡಿತರ ವಿತರಣೆಯಲ್ಲಿ ಒಂದಲ್ಲ ಒಂದು ಸಮಸ್ಯೆಯಾಗುತ್ತಲೇ ಇದೆ. ಕಳೆದ ಹಲವು ತಿಂಗಳಿನಿಂದ ಕಾಡುತ್ತಿರುವ ಸರ್ವರ್‌ ಸಮಸ್ಯೆಗೆ ಇನ್ನೂ ಮುಕ್ತಿ ದೊರಕಿಲ್ಲ. ಇದೀಗ ಪಡಿತರ ಸಾಮಗ್ರಿ ವಿತರಣೆಯಾಗುವ ವೆಬ್‌ಸೈಟ್‌ನಲ್ಲಿ ಕೆವೈಸಿ ತಂತ್ರಾಂಶ ಅಳವಡಿಸಿದ ಬಳಿಕ ಸರ್ವರ್‌ ಪದೇ ಪದೇ ತನ್ನ ಸಂಪರ್ಕ ಕಳೆದುಕೊಳ್ಳುತ್ತಿದೆ. ವಿವಿಧ ಭಾಗದಲ್ಲಿ ಕೆವೈಸಿ ದೃಢೀಕರಣವಾಗುತ್ತಿರುವುದರಿಂದ ಪಡಿತರ ವಿತರಣೆ ಸಮಸ್ಯೆಯಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಅಡಕತ್ತರಿಯಲ್ಲಿ ಸಿಬಂದಿ
ಕೆಲವು ನ್ಯಾಯಬೆಲೆ ಅಂಗಡಿಗಳಲ್ಲಿ ಕೆವೈಸಿ ದೃಢೀಕರಣ ಪ್ರಾರಂಭವಾಗಿಲ್ಲ. ಕೆವೈಸಿ ದೃಢೀಕರಣ ಪಡಿತರ ಅಂಗಡಿಗಳು ಮಾಡಬೇಕಾಗಿದೆ. ಗ್ರಾಮೀಣ ಭಾಗದಲ್ಲಿ ನೆಟವರ್ಕ್‌ ಸಮಸ್ಯೆಯಿಂದ ಕೆವೈಸಿ ದೃಢೀಕರಣ ತಡವಾದರೂ ಸಿಬಂದಿಗಳು ಸಾರ್ವಜನಿಕರಿಂದ ಬೈಗುಳ ಕೇಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ನವೆಂಬರ್‌ ಅಂತ್ಯಕ್ಕೆ ಇ- ಕೆವೈಸಿ
ಆಹಾರ ಇಲಾಖೆಯ ನೂತನ ನಿರ್ದೇಶನದಂತೆ ಪಡಿತರ ಚೀಟಿಯ ಇ -ಕೆವೈಸಿ ದೃಢೀಕರಣ ಮತ್ತೆ ಪ್ರಾರಂಭಿಸಿದೆ. ಹಿಂದೆ ಜೂನ್‌ನಲ್ಲಿ ಕೆವೈಸಿ ಧೃಡೀಕರಣಕ್ಕೆ ಆದೇಶ ನೀಡಿದರೂ ವಿವಿಧ ಕಾರಣದಿಂದ ನೋಂದಾವಣಿ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಎಪಿಎಲ್‌, ಬಿಪಿಎಲ್‌ ಹಾಗೂ ಅಂತ್ಯೋದಯ ಪಡಿತರ ಚೀಟಿ ಹೊಂದಿರುವವರು ನವೆಂಬರ್‌ ತಿಂಗಳಿನ ಒಳಗೆ ನೋಂದಾಯಿಸಲು ಗಡುವು ನೀಡಿದೆ. ಈ ಬಾರಿ ಕೆವೈಸಿ ದೃಢೀಕರಣ ಮಾಡದಿರುವವರ ಪಡಿತರ ಸಾಮಗ್ರಿ ತಡೆಹಿಡಿಯಲಾಗುತ್ತದೆ.

ಸರ್ವರ್‌ ಸಮಸ್ಯೆಯಿಲ್ಲ!
ಸರ್ವರ್‌ನಲ್ಲಿ ಯಾವುದೇ ಸಮಸ್ಯೆಯಿಲ್ಲ. ಪಡಿತರ ವಿತರಣೆ ವೆಬ್‌ಸೈಟ್‌ನಲ್ಲಿ ಅನುಸರಿಸ ಬೇಕಾದ ನಿಯಮಗಳ ಸಿಬಂದಿಗೆ ಸ್ಪಷ್ಟವಾಗಿ ಮಾಹಿತಿ ನೀಡಲಾಗಿದೆ. ಅವುಗಳನ್ನು ಅನುಸರಿ ಸಿದರೆ ಸರ್ವರ್‌ ಸಮಸ್ಯೆ ಎದುರಾಗುವುದಿಲ್ಲ.
-ಸುನಂದಾ, ಸಹಾಯಕ ನಿರ್ದೇಶಕಿ ಆಹಾರ, ನಾಗರಿಕ ಪೂರೈಕೆ ಇಲಾಖೆ. ದ.ಕ.

ಕೆವೈಸಿ ದೃಢೀಕರಣ: ಸಮಸ್ಯೆಗಳಿಗೆ ಕಾರಣ
ಕೆವೈಸಿ ದೃಢೀಕರಣ ಹಾಗೂ ಪಡಿತರ ವಿತರಣೆ ಸಂದರ್ಭದಲ್ಲಿ ಎದುರಾಗುವ ಸಮಸ್ಯೆಗಳನ್ನು Any desk ಮೂಲಕ ಸರಿಪಡಿಸಲಾಗುತ್ತಿದೆ.
-ಕಿರಣ್‌, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಿಬಂದಿ

ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.