ಹೊರಗುತ್ತಿಗೆಯಿಂದ ಅಭ್ಯರ್ಥಿಗಳು ಅತಂತ್ರ

Team Udayavani, Sep 17, 2019, 3:06 AM IST

horagurri

ಬೆಂಗಳೂರು: “ನಮ್ಮ ಮೆಟ್ರೋ’ ಎರಡನೇ ಹಂತದ ಕಾರ್ಯಾಚರಣೆ ಮತ್ತು ನಿರ್ವಹಣೆ ಹೊರಗುತ್ತಿಗೆ ಬೆನ್ನಲ್ಲೇ ಬಿಎಂಆರ್‌ಸಿಎಲ್‌ನ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಡೋಲಾಯಮಾನವಾಗಿದ್ದು, ನೂರಾರು ಅಭ್ಯರ್ಥಿಗಳ ಭವಿಷ್ಯದ ಮೇಲೆ ಈಗ ತೂಗುಗತ್ತಿ ನೇತಾಡುತ್ತಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಕೆಲವೇ ತಿಂಗಳುಗಳ ಹಿಂದೆ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದ 174 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿತ್ತು. ಸಾವಿರಾರು ಅಭ್ಯರ್ಥಿಗಳು ಪರೀಕ್ಷೆ ಬರೆದು, ಆಯ್ಕೆ ಪಟ್ಟಿಯ ಎದುರುನೋಡುತ್ತಿದ್ದಾರೆ. ಈ ಮಧ್ಯೆ ಅದೇ ವಿಭಾಗವನ್ನು ಹೊರಗುತ್ತಿಗೆ ನೀಡಲು ಮೆಟ್ರೋ ಮಂಡಳಿಯ ಸಭೆಯಲ್ಲಿ ಸದ್ದಿಲ್ಲದೆ ತೀರ್ಮಾನ ಕೈಗೊಂಡಿದೆ. ಹಾಗಾಗಿ, ಅವರೆಲ್ಲರೂ ಈಗ ಅತಂತ್ರರಾಗಿದ್ದಾರೆ.

ನಿಗಮದ ಮೂಲಗಳ ಪ್ರಕಾರ ಕೇವಲ 50ರಿಂದ 55 ಹುದ್ದೆಗಳಿಗೆ ನೇಮಕ ಮಾಡಿ, ಉಳಿದ ಹುದ್ದೆಗಳನ್ನು ರದ್ದುಗೊಳಿಸುವ ಚಿಂತನೆ ನಡೆದಿದೆ. ಹಾಗೊಂದು ವೇಳೆ ನೇಮಕಾತಿ ಪ್ರಕ್ರಿಯೆ ರದ್ದುಗೊಳಿಸಿದರೆ, ಈ ಹಿಂದಿದ್ದ ಕೆಲಸವನ್ನು ಬಿಟ್ಟು, ಹಗಲು-ರಾತ್ರಿ ಓದಿ ಪರೀಕ್ಷೆ ಬರೆದ ಅಭ್ಯರ್ಥಿಗಳ ಶ್ರಮ ನಿರರ್ಥಕವಾಗಲಿದೆ.

2018ರಲ್ಲಿ ಬಿಎಂಆರ್‌ಸಿಎಲ್‌ ನಿರ್ವಹಣೆಗಾರ ಹುದ್ದೆಗೆ 134, ಜೂನಿಯರ್‌ ಎಂಜಿನಿಯರ್‌ 21, ವಿಭಾಗದ ಎಂಜಿನಿಯರ್‌ 19 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿತ್ತು. ಇವುಗಳ ನೇಮಕಾತಿಗೆ 2019ರ ಫೆಬ್ರವರಿಯಲ್ಲಿ ಪರೀಕ್ಷೆ ನಡೆದಿತ್ತು. ಸುಮಾರು 40 ಸಾವಿರ ಜನ ಪರೀಕ್ಷೆ ಬರೆದಿದ್ದರು. ಇದಾದ ನಂತರ ಮೇನಲ್ಲಿ ನಿಗಮವು “ಕೀ’ ಉತ್ತರಗಳನ್ನೂ ಪ್ರಕಟಿಸಿತ್ತು. ಆದರೆ, ಇನ್ನೂ ಪ್ರಥಮ ತಾತ್ಕಾಲಿಕ ಪಟ್ಟಿ ಪ್ರಕಟವಾಗಿರಲಿಲ್ಲ.

“ಕೆಲವರು ಇದ್ದ ಕೆಲಸವನ್ನು ಬಿಟ್ಟು ಮೆಟ್ರೋ ಪರೀಕ್ಷೆ ಬರೆದಿದ್ದಾರೆ. ಸ್ವತಃ ನಾನು ಮೂರು ಬಾರಿ ಪರೀಕ್ಷೆ ಬರೆದಿದ್ದೇನೆ. ಮೊದಲೆರಡು ಬಾರಿ ಕೆಲವೇ ಅಂಕಗಳ ಅಂತರದಿಂದ ಅವಕಾಶ ವಂಚಿತನಾಗಿದ್ದೇನೆ. ಈಗ ಕೀ-ಉತ್ತರಗಳನ್ನು ನೋಡಿದಾಗ, ಆಯ್ಕೆಯಾಗುವ ಭರವಸೆ ಇತ್ತು. ಅಷ್ಟರಲ್ಲಿ ಬಿಎಂಆರ್‌ಸಿಎಲ್‌ ಈ ಆಘಾತ ನೀಡುತ್ತಿದೆ’ ಎಂದು ಹೆಸರು ಹೇಳಲಿಚ್ಛಿಸದ ಅಭ್ಯರ್ಥಿಯೊಬ್ಬರು “ಉದಯವಾಣಿ’ಗೆ ಅಲವತ್ತುಕೊಂಡರು.

ಕೂಡಲೇ ಪ್ರಥಮ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಬೇಕು. ಬೆನ್ನಲ್ಲೇ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಇಲ್ಲವಾದರೆ, ಅನಿವಾರ್ಯವಾಗಿ ಹೋರಾಟಕ್ಕಿಳಿಯಬೇಕಾಗುತ್ತದೆ ಎಂದು ಕೆಲ ಅಭ್ಯರ್ಥಿಗಳು ಎಚ್ಚರಿಸಿದರು.

ಹುದ್ದೆ ಖಾಲಿ ಹುದ್ದೆಗಳು ಪರೀಕ್ಷೆ ಬರೆದವರು
ನಿರ್ವಹಣೆಕಾರ 134 18,530
ಜೂನಿಯರ್‌ ಎಂಜಿನಿಯರ್‌ 21 9,500
ವಿಭಾಗ ಎಂಜಿನಿಯರ್‌ 19 11,300
ಒಟ್ಟಾರೆ 174 39,330

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.