ಕಲ್ಯಾಣ ಕರ್ನಾಟಕ ಉತ್ಸವ ಧ್ವಜಾರೋಹಣ
Team Udayavani, Sep 17, 2019, 10:54 AM IST
ಕಲಬುರಗಿ: ನೂತನ ವಿದ್ಯಾಲಯ ಮೈದಾನದಲ್ಲಿ ನಡೆಯಲಿರುವ ಸಮಾರಂಭಕ್ಕೆ ಪೊಲೀಸ್ ಸಿಬ್ಬಂದಿ ನಿಯೋಜಿಸಿರುವುದು.
ಕಲಬುರಗಿ: ಹೈದ್ರಾಬಾದ್ ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ಬದಲಾಯಿಸಿ ಸೆಪ್ಟೆಂಬರ್ 17ರಂದು ನಡೆಯಲಿರುವ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಗಮಿಸುತ್ತಿದ್ದು, ಸ್ವಾಗತಕ್ಕೆ ಕಲಬುರಗಿ ಮಹಾನಗರ ಸಜ್ಜುಗೊಂಡಿದೆ.
ವಿಶೇಷ ವಿಮಾನದ ಮೂಲಕ ನಗರದ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಸಿಎಂ ಯಡಿಯೂರಪ್ಪ ತದನಂತರ ಸರ್ಧಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆ ಮಾಲಾರ್ಪಣೆ ಮಾಡಲಿದ್ದಾರೆ. ಬಳಿಕ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ರಾಷ್ಟ್ರಧ್ವಜಾರೋಹಣ ನೆರವೇರಿಸುವರು.
ಮಧ್ಯಾಹ್ನ 12:30ಕ್ಕೆ ವಿದ್ಯಾಲಯ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಉದ್ಘೋಷಣೆ ಹಾಗೂ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಸರ್ಕಾರಿ ಸೌಲಭ್ಯ ವಿತರಿಸುವರು.
ಐತಿಹಾಸಿಕವಾಗಿಸಲು ಸಿದ್ಧತೆ: ಕಲ್ಯಾಣ ಕರ್ನಾಟಕ ಘೋಷಣೆ ಐತಿಹಾಸಿಕವಾಗಿಸಲು ನೂತನ ವಿದ್ಯಾಲಯ ಮೈದಾನದಲ್ಲಿ ಬೃಹತ್ ಸಭೆ ಆಯೋಜಿಸಲಾಗಿದೆ. ಸಹಸ್ರಾರು ಜನರನ್ನು ಸೇರಿಸಲು ಮುಂದಾಗಲಾಗಿದೆ.
ಹೈದ್ರಾಬಾದ್ ಕರ್ನಾಟಕ ಅಭಿವೃದ್ಧಿಯಾಗಿಲ್ಲ. ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಗಿಸಲು ಸರ್ಕಾರ ಬದ್ಧವಿದೆ ಎಂಬುದನ್ನು ತೋರಿಸಲು ವಾರದಿಂದ ಸಿದ್ಧತೆಗಳು ನಡೆದಿವೆ. ಮಠಾಧೀಶರು ಸಹ ಸಿಎಂ ಅವರಿಗೆ ಅಭಿನಂದಿಸುವ ಸಮಾರಂಭ ಸಹ ಹಮ್ಮಿಕೊಂಡಿದ್ದಾರೆ. ಸಿಎಂ ಅವರು ಬೆಳಗ್ಗೆಯಿಂದ ಸಂಜೆವರೆಗೂ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು.
ವಿಮಾನ ನಿಲ್ದಾಣ ಭದ್ರತೆ ಪರಿಶೀಲನೆ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದು, ಇದರ ಹಿನ್ನೆಲೆಯಲ್ಲಿ ಕಲಬುರಗಿ ಪೊಲೀಸ್ ಆಯುಕ್ತ ಡಾ| ಎಂ.ಎನ್. ನಾಗರಾಜ, ಜಿಲ್ಲಾಧಿಕಾರಿ ಬಿ. ಶರತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ ಹಾಗೂ ಡಿಸಿಪಿ ಬಿ. ಕಿಶೋರಬಾಬು ಅವರು ವಿಮಾನ ನಿಲ್ದಾಣಕ್ಕೆ ತೆರಳಿ ಭದ್ರತೆ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದರು.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಗಳನ್ನು ಬರಮಾಡಿಕೊಳ್ಳುವುದು, ಪೊಲೀಸ್‌ರಿಂದ ಗೌರವ ವಂದನೆ ಸ್ವೀಕರಿಸುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಅಮೀನ್ ಮುಖ್ತಾರ್ ಅವರು ಮುಖ್ಯಮಂತ್ರಿಗಳನ್ನು ಬರಮಾಡಿಕೊಳ್ಳಲು ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಪ್ರೊಬೇಷನರಿ ಐಎಎಸ್ ಅಧಿಕಾರಿ ಡಾ| ಬಿ. ಗೋಪಾಲಕೃಷ್ಣ ರಾಘವೇಂದ್ರ, ವಿಮಾನ ನಿಲ್ದಾಣದ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
S.Africa: ಫಿಕ್ಸಿಂಗ್ ಕೇಸ್‌ನಲ್ಲಿ ಜೈಲು ಪಾಲಾದ ದ. ಆಫ್ರಿಕಾದ ಮಾಜಿ ನಂಬರ್ 1 ಬೌಲರ್
Wedding Story: ಕಂಕಣ ಕಾಲ-3: ವಿವಾಹ ಭೋಜನವಿದು.. ನಾರ್ತ್ ಭಕ್ಷ್ಯಗಳಿವು…
Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ
Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ
Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.