2ಜಿ, ಏರ್ಸೆಲ್ ಪ್ರಕರಣಗಳ ವರ್ಗ
Team Udayavani, Sep 18, 2019, 5:54 AM IST
ನವದೆಹಲಿ: ಏರ್ಸೆಲ್- ಮ್ಯಾಕ್ಸಿಸ್ ಡೀಲ್ಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳು ಹಾಗೂ 2ಜಿ ತರಂಗಾಂತರ ಹಂಚಿಕೆಗೆ ಸಂಬಂಧಿಸಿದ ಎಲ್ಲ ಕೇಸುಗಳನ್ನೂ ನ್ಯಾಯಾಧೀಶ ಅಜಯ ಕುಮಾರ್ ಕುಹರ್ ವ್ಯಾಪ್ತಿಯ ಕೋರ್ಟ್ಗೆ ದೆಹಲಿ ಹೈಕೋರ್ಟ್ ಮಂಗಳವಾರ ವರ್ಗಾಯಿಸಿದೆ. ಈ ಮೊದಲು ಓ.ಪಿ.ಸೈನಿ ಅವರ ವ್ಯಾಪ್ತಿಯಲ್ಲಿರುವ ವಿಶೇಷ ಕೋರ್ಟ್ನಲ್ಲಿ ಈ ಪ್ರಕರಣಗಳಿದ್ದವು. ಪಿ.ಚಿದಂಬರಂ ಮತ್ತು ಪುತ್ರ ಕಾರ್ತಿ ಚಿದಂಬರಂ ಅವರ ವಿರುದ್ಧದ ಕೇಸುಗಳು ಕೂಡ ನ್ಯಾ.ಸೈನಿ ವ್ಯಾಪ್ತಿಯ ಕೋರ್ಟ್ನಲ್ಲಿತ್ತು.
ಮಾಸಾಂತ್ಯಕ್ಕೆ ವಿಶೇಷ ಕೋರ್ಟ್ ನ್ಯಾಯಾಧೀಶ ಓ.ಪಿ.ಸೈನಿ ನಿವೃತ್ತರಾಗುವ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ ಈ ಆದೇಶ ನೀಡಿದೆ. ಅ.1ರಿಂದ ಏರ್ಸೆಲ್-ಮ್ಯಾಕ್ಸಿಸ್ ಡೀಲ್ಗೆ ಸಂಬಂಧಿಸಿದ ಎಲ್ಲಾ ವಿಚಾರಣೆಗಳನ್ನು ಅಜಯ ಕುಮಾರ್ ಕುಹರ್ ನಡೆಸಲಿದ್ದಾರೆ.
ಕುಹರ್ ಅವರು ಕರ್ನಾಟಕದ ಮಾಜಿ ಸಚಿವ ಡಿ.ಕೆ.ಶಿವಕುಮಾರ್, ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಹಿಮಾಚಲ ಪ್ರದೇಶದ ಮಾಜಿ ಸಿಎಂ ವೀರಭದ್ರ ಸಿಂಗ್ ಮತ್ತು ಅವರ ಕುಟುಂಬ ಸದಸ್ಯರನ್ನೊಳಗೊಂಡ ಪ್ರಕರಣಗಳ ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್ಶೂಟರ್ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.