ಸೆ. 23: ಅನರ್ಹ ಶಾಸಕರ ಅರ್ಜಿಯ ವಿಚಾರಣೆ
Team Udayavani, Sep 18, 2019, 5:55 AM IST
ಹೊಸದಿಲ್ಲಿ: ಕರ್ನಾಟಕದ 17 ಅನರ್ಹ ಶಾಸಕರ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆಯಾಗಿದೆ. ಸುಪ್ರೀಂ ಕೋರ್ಟ್‌ನ ನ್ಯಾಯಪೀಠದಲ್ಲಿದ್ದ, ಕರ್ನಾಟಕ ಮೂಲದ ನ್ಯಾ| ಮೋಹನ ಎಂ. ಶಾಂತನಗೌಡರ್ ವಿಚಾರಣ ಪ್ರಕ್ರಿಯೆಯಿಂದ ಹಿಂದೆ ಸರಿದಿದ್ದು, ಸೆ.23ಕ್ಕೆ ವಿಚಾರಣೆ ಮುಂದೂಡಲಾಗಿದೆ.
ನ್ಯಾ| ಎನ್.ವಿ. ರಮಣ ಅವರ ನೇತೃತ್ವದ ಪೀಠ ಮಂಗಳವಾರ ಅರ್ಜಿ ಕೈಗೆತ್ತಿಕೊಳ್ಳುತ್ತಿದ್ದಂತೆ, ನ್ಯಾ| ಶಾಂತನಗೌಡರ್, ವಿಚಾರಣ ಪ್ರಕ್ರಿಯೆಯಿಂದ ಹಿಂದೆ ಸರಿಯುವ ಬಗ್ಗೆ ಹೇಳಿದರು. ಆದರೆ ಈ ಬಗ್ಗೆ ಹೆಚ್ಚಿನ ವಿವರಣೆ ನೀಡದ ಅವರು, ನನ್ನ ಆತ್ಮಸಾಕ್ಷಿ ವಿಚಾರಣ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅನುಕೂಲ ಮಾಡಿಕೊಡುತ್ತಿಲ್ಲ ಎಂದು ಹೇಳಿದರು.
ಹಿರಿಯ ನ್ಯಾಯವಾದಿಗಳಾದ ಕಪಿಲ್ ಸಿಬಲ್ ಮತ್ತು ಮುಕುಲ್ ರೋಹrಗಿ ಅವರು, ಪೀಠದಲ್ಲಿ ನ್ಯಾ| ಶಾಂತನಗೌಡರ್ ಇದ್ದರೆ ನಮಗೇನೂ ಸಮಸ್ಯೆ ಇಲ್ಲ ಎಂದು ಹೇಳಿದರೂ ಅವರು ಕೇಳಲಿಲ್ಲ.
ನ್ಯಾ| ಶಾಂತನಗೌಡರ್ 2003ರ ಮೇ 12ರಲ್ಲಿ ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿದ್ದರು. 2004ರ ಸೆ.24ರಂದು ಅವರನ್ನು ಪೂರ್ಣ ಪ್ರಮಾಣದ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.