ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಹಂಚಿಕೆ


Team Udayavani, Sep 19, 2019, 3:00 AM IST

jilleya-abhivru

ಮೈಸೂರು: ಜಿಲ್ಲಾ ಪಂಚಾಯತ್‌ನ ಸ್ಥಾಯಿ ಸಮಿತಿಗಳವರು ಪಟ್ಟಿ ಮಾಡಿರುವ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಸಣ್ಣಪುಟ್ಟ ಬದಲಾವಣೆಗಳೊಂದಿಗೆ ಕೈಗೊಳ್ಳಲು ಜಿಪಂ ಸಾಮಾನ್ಯ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಯಿತು.

ಜಿಪಂ ಅಧ್ಯಕ್ಷೆ ಪರಿಮಳಾ ಶ್ಯಾಂ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ವಿಶೇಷ ತುರ್ತು ಸಭೆಯಲ್ಲಿ ಕೃಷಿ ಮತ್ತು ಕೈಗಾರಿಕೆ, ಆರೋಗ್ಯ ಮತ್ತು ಶಿಕ್ಷಣ, ಸಾಮಾಜಿಕ ನ್ಯಾಯ, ಹಣಕಾಸು ಮತ್ತು ಯೋಜನಾ ಹಾಗೂ ಸಾಮಾನ್ಯ ಸ್ಥಾಯಿ ಸಮಿತಿಗಳವರು ಪಟ್ಟಿ ಮಾಡಿರುವ ಕಾಮಗಾರಿಗಳಿಗೆ ಕೆಲ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಎಲ್ಲಾ ಸದಸ್ಯರೂ ಯಾವ್ಯಾವ ಕಾಮಗಾರಿಗಳನ್ನು ಸೇರ್ಪಡೆ ಮಾಡಬೇಕು ಎಂಬ ಪತ್ರವನ್ನು 2 ದಿನಗಳೊಳಗೆ ಸಲ್ಲಿಸುವಂತೆ ತಿಳಿಸಲಾಯಿತು.

ಟೆಂಟರ್‌: ಜಿಪಂ ಸಿಇಒ ಕೆ.ಜ್ಯೋತಿ ಮಾತನಾಡಿ, ಅಕ್ಟೋಬರ್‌ 31ರ ನಂತರ 5 ಲಕ್ಷದವರೆಗಿನ ಕಾಮಗಾರಿಗಳನ್ನೂ ಟೆಂಡರ್‌ ಮೂಲಕವೇ ಮಾಡಿಸುವಂತೆ ಸರ್ಕಾರದ ಆದೇಶಿಸಿರುವುದರಿಂದ ಎಲ್ಲಾ ಸ್ಥಾಯಿ ಸಮಿತಿಗಳು ತುರ್ತಾಗಿ ಕಾಮಗಾರಿಗಳನ್ನು ಅನುಮೋದಿಸಿವೆ. ಹೀಗಾಗಿ ಈ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಸಾಮಾನ್ಯ ಸಭೆಯ ಅನುಮೋದನೆ ಅವಶ್ಯ ಎಂದು ಕೋರಿದರು.

ಅನುದಾನ ಹಂಚಿಕೆ: 2019-20ನೇ ಸಾಲಿನ ಕ್ರಿಯಾ ಯೋಜನೆಯಂತೆ ಕೃಷಿ ಇಲಾಖೆಗೆ ನಿಗದಿಪಡಿಸಿರುವ 44 ಲಕ್ಷ ರೂ. ಅನುದಾನದಲ್ಲಿ ಕೆ.ಆರ್‌.ನಗರ ತಾಲೂಕು ಚುಂಚನಕಟ್ಟೆ ಹೋಬಳಿಯ ರೈತ ಸಂಪರ್ಕ ಕೇಂದ್ರಕ್ಕೆ ಸುಣ್ಣ-ಬಣ್ಣ ಹೊಡೆಸುವುದು, ನೆಲಹಾಸು ಮತ್ತು ಛಾವಣಿ ದುರಸ್ತಿ ಮತ್ತು ಕೋಣೆಗಳ ವಿಭಜನೆ ಕಾಮಗಾರಿಗೆ 4 ಲಕ್ಷ, ನಂಜನಗೂಡು ತಾಲೂಕು ಬಿಳಿಗೆರೆ ಹೋಬಳಿ ರೈತ ಸಂಪರ್ಕ ಕೇಂದ್ರದ ಕಚೇರಿ ಆವರಣದಲ್ಲಿ ಕಾಂಕ್ರೀಟ್‌ ನೆಲಹಾಸು ಹಾಗೂ ಶೌಚಾಲಯ ನಿರ್ಮಾಣ ಕಾಮಗಾರಿ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು 5 ಲಕ್ಷ,

ಮೈಸೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ದುರಸ್ತಿ ಕಾಮಗಾರಿಗೆ 4 ಲಕ್ಷ, ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರ ಹೋಬಳಿಯ ರೈತ ಸಂಪರ್ಕ ಕೇಂದ್ರ ಕಟ್ಟಡದ ಮೇಲ್ಚಾವಣಿ ದುರಸ್ತಿ ಕಾಮಗಾರಿಗೆ 5 ಲಕ್ಷ, ಪಿರಿಯಾಪಟ್ಟಣ ತಾಲೂಕು ಹಾರನಹಳ್ಳಿ ಹೋಬಳಿಯ ರೈತ ಸಂಪರ್ಕ ಕೇಂದ್ರಕ್ಕೆ ಸುಣ್ಣ-ಬಣ್ಣ, ಮೇಲ್ಚಾವಣಿ ದುರಸ್ತಿ ಮತ್ತು ಶೌಚಾಲಯ ನಿರ್ಮಾಣ ಕಾಮಗಾರಿಗೆ 5 ಲಕ್ಷ, ಎಚ್‌.ಡಿ.ಕೋಟೆ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ಸುಣ್ಣ ಬಣ್ಣ ಮತ್ತು ಮೇಲ್ಚಾವಣಿ ದುರಸ್ತಿ ಕಾಮಗಾರಿಗೆ 2 ಲಕ್ಷ, ಎಚ್‌.ಡಿ.ಕೋಟೆ ತಾಲೂಕು ಅಂತರಸಂತೆ ಹೋಬಳಿ ರೈತ ಸಂಪರ್ಕ ಕೇಂದ್ರಕ್ಕೆ ಸುಣ್ಣ-ಬಣ್ಣ ಮತ್ತು ಆವರಣದಲ್ಲಿ ಕಾಂಕ್ರೀಟ್‌ ನೆಲಹಾಸು ನಿರ್ಮಾಣ ಕಾಮಗಾರಿಗೆ 3 ಲಕ್ಷ,

ತಿ.ನರಸೀಪುರ ತಾಲೂಕು ಸೋಸಲೆ ಹೋಬಳಿಯ ರೈತ ಸಂಪರ್ಕ ಕೇಂದ್ರದ ಆವರಣವನ್ನು ರಸ್ತೆಯ ಮಟ್ಟಕ್ಕೆ ಎತ್ತರಿಸುವುದು ಮತ್ತು ಕಾಂಪೌಂಡ್‌ ಎತ್ತರಿಸುವ ಕಾಮಗಾರಿಗೆ 4 ಲಕ್ಷ, ತಿ.ನರಸೀಪುರ ತಾಲೂಕು ತಲಕಾಡು ಹೋಬಳಿಯ ರೈತ ಸಂಪರ್ಕ ಕೇಂದ್ರಕ್ಕೆ ಕಾಂಪೌಂಡ್‌ ನಿರ್ಮಾಣಕ್ಕೆ 5 ಲಕ್ಷ, , ತಿ.ನರಸೀಪುರ ತಾಲೂಕು ತಲಕಾಡು ಹೋಬಳಿಯ ರೈತ ಸಂಪರ್ಕ ಕೇಂದ್ರಕ್ಕೆ ಗೋದಾಮು ನಿರ್ಮಾಣಕ್ಕೆ 5 ಲಕ್ಷ, ಹುಣಸೂರು ತಾಲೂಕು ಕೃಷಿ ಇಲಾಖೆ ಕಟ್ಟಡ ದುರಸ್ತಿಗೆ 2 ಲಕ್ಷ ರೂ. ಸೇರಿದಂತೆ 11 ಕಾಮಗಾರಿಗಳಿಗೆ 44 ಲಕ್ಷ ರೂ. ಹಂಚಿಕೆಗೆ ಅನುಮೋದನೆ ನೀಡಲಾಯಿತು.

ರೇಷ್ಮೆ ಇಲಾಖೆ ಏರ್ಪಡಿಸುವ ವಸ್ತುಪ್ರದರ್ಶನಕ್ಕೆ ನೆಲ ಬಾಡಿಗೆ ಪಾವತಿಸಲು 2 ಲಕ್ಷ ರೂ., ಪಶು ಸಂಗೋಪನಾ ಇಲಾಖೆಯಿಂದ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪಶು ಚಿಕಿತ್ಸಾಲಯಗಳ ಕಟ್ಟಡ ದುರಸ್ತಿಮ ಸುಣ್ಣ ಬಣ್ಣ ಹೊಡೆಸುವುದು, ಶೌಚಾಲಯ, ಕಾಂಪೌಂಡ್‌ ನಿರ್ಮಾಣ ಸೇರಿದಂತೆ 28 ಕಾಮಗಾರಿಗಳಿಗೆ 60 ಲಕ್ಷ ರೂ., ಕೃಷಿ ಮಾರಾಟ ಇಲಾಖೆಯಿಂದ ಮಾರುಕಟ್ಟೆಗಳಲ್ಲಿ ಮೂಲ ಭೂತ ಸೌಕರ್ಯ ಕಲ್ಪಿಸಲು ಹಂಚಿಕೆಯಾಗಿರುವ 25 ಲಕ್ಷ ರೂ. ಅನುದಾನದಲ್ಲಿ ಸಂತೆ ಸರಗೂರು ಎಪಿಎಂಸಿ ವ್ಯಾಪ್ತಿಯ ಕಂದೇಗಾಲ ಗ್ರಾಮದ ಗ್ರಾಮೀಣ ಸಂತೆಗೆ ಕಾಂಪೌಂಡ್‌ ನಿರ್ಮಾಣ,

ತರಕಾರಿ ಗೋದಾಮು ನಿರ್ಮಾಣ, ಮುಖ್ಯ ದ್ವಾರದ ಕಾಂಪೌಂಡ್‌ ಹಾಗೂ ಗೇಟ್‌ ನಿರ್ಮಾಣ ಕಾಮಗಾರಿಗಳಿಗೆ ತಲಾ 5 ಲಕ್ಷ ರೂ.ಗಳಂತೆ 15 ಲಕ್ಷ, ರತ್ನಪುರಿ ಉಪ ಮಾರುಕಟ್ಟೆ ಪ್ರಾಂಗಣದಲ್ಲಿ ಸೋಲಾರ್‌ ದೀಪ ಅಳವಡಿಕೆಗೆ 5 ಲಕ್ಷ, ಕೆ.ಆರ್‌.ನಗರ ಎಪಿಎಂಸಿ ಪ್ರಾಂಗಣದಲ್ಲಿ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಕಾಮಗಾರಿಗೆ 5 ಲಕ್ಷ ರೂ. ಹಂಚಿಕೆ ಮಾಡಲು ಅನುಮೋದನೆ ನೀಡಲಾಯಿತು.

ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯಿಂದ ಆಶ್ರಯ ಶಾಲೆ ಮತ್ತು ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ 20 ಲಕ್ಷ ರೂ. ಹಂಚಿಕೆಗೆ ಅನುಮೋದನೆ ನೀಡಲಾಯಿತು. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯಿಂದ ಜಿಲ್ಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು ಹಾಗೂ ಪ್ರೌಢಶಾಲೆಗಳಿಗೆ 1065 ಡೆಸ್ಕ್ಗಳನ್ನು ಖರೀದಿಸಲು, ಪೀಠೊಪರಣಕ್ಕೆ ಪೂರಕವಾಗಿ ಅಗತ್ಯವಿರುವ ವಿಜ್ಞಾನ ಮತ್ತು ಗಣಿತ ಕಿಟ್‌ ಮತ್ತು ಸಾಮಾಜಿಕ ವಿಜ್ಞಾನ ಚಾರ್ಟ್ಸ್ ವಿತರಣೆ ಮಾಡಲು ಹಾಗೂ ಜಿಲ್ಲೆಯ ವಿವಿಧ ತಾಲೂಕುಗಳ 57 ಶಾಲೆಗಳ ಕಟ್ಟಡ ದುರಸ್ತಿಗೆ 1.67 ಕೋಟಿ ಅಂದಾಜು ವೆಚ್ಚಕ್ಕೆ ಅನುಮೋದನೆ ನೀಡಲಾಯಿತು.

ಅಧ್ಯಕ್ಷರ ಕೊಠಡಿ ನವೀಕರಣ: ಜಿಲ್ಲಾ ಪಂಚಾಯತ್‌ ಕಚೇರಿ ಕಟ್ಟಡಗಳ ನಿರ್ಮಾಣ ಮತ್ತು ನಿರ್ವಹಣೆ ಸಲುವಾಗಿ ಲಭ್ಯವಿರುವ 1 ಕೋಟಿ ಅನುದಾನದಲ್ಲಿ ಅನುದಾನದಲ್ಲಿ ಅಧ್ಯಕ್ಷರ ಕೊಠಡಿಯ ತುರ್ತು ನವೀಕರಣ ಕಾಮಗಾರಿ ಹೊರತುಪಡಿಸಿ ಬೇರಾವುದೇ ಕಾಮಗಾರಿ ಕೈಗೊಂಡಿಲ್ಲ. ಸಾಮಾನ್ಯ ಸಭೆಯ ಅನುಮೋದನೆ ನಂತರವೇ ಕಾಮಗಾರಿ ಆರಂಭಿಸಲಾಗುವುದು ಎಂದು ಜಿಪಂ ಸಿಇಒ ಕೆ.ಜ್ಯೋತಿ ತಿಳಿಸಿದರು. ಉಪಾಧ್ಯಕ್ಷೆ ಗೌರಮ್ಮ ಸೋಮಶೇಖರ್‌ ಸಭೆಯಲ್ಲಿ ಉಪಸ್ಥಿತರಿದ್ದರು.

ಯಾವ ತಾಲೂಕಿಗೆ ಎಷ್ಟು ಅನುದಾನ: ಹಣಕಾಸು, ಯೋಜನೆ ಮತ್ತು ಲೆಕ್ಕ ಪರಿಶೋಧನಾ ಸ್ಥಾಯಿ ಸಮಿತಿಯಿಂದ ಸಣ್ಣ ಕೆರೆಗಳ ಅಭಿವೃದ್ಧಿ ಅನುದಾನವಾಗಿ ಮೈಸೂರು ತಾಲೂಕಿಗೆ 3 ಲಕ್ಷ ರೂ. ತಿ.ನರಸೀಪುರ ತಾಲೂಕು 3.22 ಲಕ್ಷ, ನಂಜನಗೂಡು 1.17 ಲಕ್ಷ, ಕೆ.ಆರ್‌.ನಗರ 1.71 ಲಕ್ಷ, ಹುಣಸೂರು 3 ಲಕ್ಷ, ಪಿರಿಯಾಪಟ್ಟಣ 1.08 ಲಕ್ಷ, ಎಚ್‌.ಡಿ.ಕೋಟೆ ತಾಲೂಕಿಗೆ 5.48 ಲಕ್ಷ ಸೇರಿದಂತೆ ಒಟ್ಟು 57.58 ಲಕ್ಷ ರೂ. ಹಂಚಿಕೆ ಮಾಡಲಾಗಿದೆ.

ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಎಸ್‌ಸಿಪಿ, ಟಿಎಸ್‌ಪಿ ಹಾಗೂ ಸಾಮನ್ಯ ಅನುದಾನದಡಿ ಎಚ್‌.ಡಿ.ಕೋಟೆ ತಾಲೂಕಿನಲ್ಲಿ 746.55 ಕಿ.ಮೀ ಉದ್ದದ ರಸ್ತೆ ಅಭಿವೃದ್ಧಿಗೆ 87.07 ಲಕ್ಷ, ಹುಣಸೂರು ತಾಲೂಕಿನ 836.70 ಕಿ.ಮೀ ಉದ್ದದ ರಸ್ತೆ ಅಭಿವೃದ್ಧಿಗೆ 97.58 ಲಕ್ಷ, ಕೆ.ಆರ್‌.ನಗರ ತಾಲೂಕಿನಲ್ಲಿ 596.70 ಕಿ.ಮೀ ರಸ್ತೆ ಅಭಿವೃದ್ಧಿಗೆ 69.50 ಲಕ್ಷ, ಪಿರಿಯಾಪಟ್ಟಣ ತಾಲೂಕಿನಲ್ಲಿ 586.65 ಕಿ.ಮೀ ರಸ್ತೆಗೆ 68.42 ಲಕ್ಷ,

ಮೈಸೂರು ತಾಲೂಕಿನ 572.20 ಕಿ.ಮೀ ರಸ್ತೆಗೆ 66.73 ಲಕ್ಷ, ನಂಜನಗೂಡು ತಾಲೂಕಿನ 764.80 ಕಿಮೀ ರಸ್ತೆಗೆ 89.20 ಲಕ್ಷ, ತಿ.ನರಸೀಪುರ ತಾಲೂಕಿನ 612.15 ಕಿ.ಮೀ ರಸ್ತೆ ಅಭಿವೃದ್ಧಿಗೆ 71.40 ಲಕ್ಷ ಸೇರಿದಂತೆ ಒಟ್ಟಾರೆ ಜಿಲ್ಲೆಯ 4715.75 ಕಿ.ಮೀ ಉದ್ದದ ರಸ್ತೆ ಅಭಿವೃದ್ಧಿಗೆ 5.50 ಕೋಟಿ ಅನುದಾನ ಹಂಚಿಕೆಗೆ ಸಾಮಾನ್ಯ ಸಭೆ ಒಪ್ಪಿಗೆ ದೊರೆಯಿತು. ಇದರ ಜೊತೆಗೆ 2019-20ನೇ ಸಾಲಿಗೆ ಜಿಲ್ಲೆಗೆ ಅಭಿವೃದ್ಧಿ ಅನುದಾನವಾಗಿ 6.40 ಕೋಟಿ ಹಂಚಿಕೆಯಾಗಿದೆ ಎಂದು ಜಿಪಂ ಸಿಇಒ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

15-uv-fusion

Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.