ಕಲಿಕೆಗೆ ಪರಿಶ್ರಮ, ಆಸಕ್ತಿ ಮುಖ್ಯ: ಚುಂಚಶ್ರೀ


Team Udayavani, Sep 19, 2019, 3:00 AM IST

kalikege

ಚಿಕ್ಕಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕಲಿಕೆಗೆ ಪರಿಶ್ರಮ ಮತ್ತು ಆಸಕ್ತಿ ಇಲ್ಲದಿದ್ದರೇ ಸಾಧನೆ ಶೂನ್ಯವಾಗುತ್ತದೆ. ಇವೆರಡೂ ಇದ್ದರೆ ಮಾತ್ರ ಭವಿಷ್ಯದಲ್ಲಿ ಉತ್ತಮ ವಿದ್ಯಾರ್ಥಿಯಾಗಲು ಸಾಧ್ಯ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧಿಪತಿ ಡಾ.ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು. ನಗರದ ಹೊರ ವಲಯದಲ್ಲಿರುವ ಎಸ್‌ಜೆಸಿಐಟಿ ಕಾಲೇಜಿನಲ್ಲಿ ಮೊದಲ ವರ್ಷದ ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸ್ವಾಗತ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಬೇಕಾದರೆ ಕಠಿಣ ಪರಿಶ್ರಮ ಬಹಳ ಮುಖ್ಯ.

ಪರಿಶ್ರಮದಿಂದ ಯಶಸ್ಸು: ಶೈಕ್ಷಣಿಕವಾಗಿ ಸಾಧನೆ ಮಾಡಲು ಅಥವಾ ಜ್ಞಾನ ಸಂಪಾದನೆಗೆ ಬಡವ ಶ್ರೀ ಮಂತ ಎಂಬ ಭೇದವಿಲ್ಲ. ವಿಜ್ಞಾನ ಕ್ಷೇತ್ರದಲ್ಲಿ ಐನ್‌ಸ್ಟೈನ್‌ ಹೊಸ ಆಲೋಚನೆಗಳನ್ನು ಬೆಳೆಸಿಕೊಳ್ಳುವ ಮೂಲಕ ಸತತ ಪರಿಶ್ರಮದಿಂದ ಯಶಸ್ಸು ಕಂಡನು. ಅದೇ ಮಾದರಿಯಲ್ಲಿ ವಿದ್ಯಾರ್ಥಿಗಳು ತಮ್ಮ ಆಂತರಿಕ ಶಕ್ತಿ ಹೆಚ್ಚಿಸಿಕೊಳ್ಳುವ ಮೂಲಕ ಜೀವನದ ಗುರಿ ಸಾಧಿಸಬೇಕು. ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ತಂತ್ರಜ್ಞಾನ ಬಳಕೆ ಮಾಡಿಕೊಳ್ಳುವ ಮೂಲಕ ಹೊಸ ಆವಿಷ್ಕಾರ, ಆಲೋಚಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕೆಂದರು.

ವಿಭಿನ್ನ ಆಲೋಚನೆ ಇರಲಿ: ಬೆಂಗಳೂರು ಇಂಡಿಯನ್‌ ಇನ್ಸ್‌ಟ್ಯೂಟ್‌ ಆಫ್ ಸೈನ್ಸ್‌ ಏರೋಸ್ಪೇಸ್‌ ಎಂಜಿಯರಿಂಗ್‌ನ ಪ್ರೊ.ಡಾ.ಕೆ.ಪಿ.ಜೆ.ರೆಡ್ಡಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ನಾವು ಎಷ್ಟು ಓದಿದ್ದೇವೆ ಎಂಬುದು ಮುಖ್ಯವಲ್ಲ. ವಿದ್ಯಾರ್ಥಿಗಳು ಪುಸ್ತಕಕ್ಕೆ ಸೀಮಿತವಾಗದೇ ದೇಶ ಮತ್ತು ಸಮಾಜದ ಒಳಿತಿಗೆ ವಿಭಿನ್ನ ಯೋಚನೆಗಳನ್ನು ಕೈಗೊಂಡು ದೇಶಕ್ಕೆ ಆಸ್ತಿ ಆಗಬೇಕು ಎಂದರು.  ತಂತ್ರಜ್ಞಾನ ಯುಗದಲ್ಲಿ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಕಲಿಕೆ ವಿಚಾರದಲ್ಲಿ ಶಿಸ್ತು, ಸಂಯಮ ಅಳವಡಿಸಿಕೊಳ್ಳುವ ಮೂಲಕ ಗುರಿ ಸಾಧಿಸಬೇಕು. ಮಹನೀಯರ ಆದರ್ಶಗಳನ್ನು ಪಾಲಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳನಂದನಾಥ ಸ್ವಾಮೀಜಿ, ಜಿಲ್ಲಾಧಿಕಾರಿ ಆರ್‌.ಲತಾ, ಉಪ ವಿಭಾಗಾಧಿಕಾರಿ ರಘುನಂದನ್‌, ತಹಶೀಲ್ದಾರ್‌ ಕೆ.ನರಸಿಂಹಮೂರ್ತಿ, ಬಿಜಿಎಸ್‌ ಸಂಶೋಧನಾ ಕೇಂದ್ರ ನಿರ್ದೇಶಕ ಡಾ.ಮುನಿಕೆಂಚೇಗೌಡ, ವೈದ್ಯ ಡಾ.ಶ್ರೀನಿವಾಸ್‌, ಎಸ್‌ಜೆಸಿಐಟಿ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಎಂ.ರವಿಕುಮಾರ್‌ ಉಪಸ್ಥಿತರಿದ್ದರು.

ಬೆಂಗಳೂರು ಟಾಟಾ ಕನ್ಸಲ್‌ಟೆನ್ಸಿ ಸರ್ವಿಸ್‌ನ ಆರ್‌ಎಂಜಿ ಮುಖ್ಯಸ್ಥ ಇ.ಎಸ್‌.ಚಕ್ರವರ್ತಿ ಮಾತನಾಡಿ, ಸಾಧನೆ ಮಾಡುವವರಿಗೆ ಉನ್ನತ ಶಿಕ್ಷಣ ಬೇಕಾಗಿಲ್ಲ, ಏಕೆಂದರೆ ಪ್ರತಿಯೊಬ್ಬರಲ್ಲೂ ಒಂದೊಂದು ಆವಿಷ್ಕಾರದ ಮನೋಭಾವವಿರುತ್ತದೆ. ಅದನ್ನು ಹೊರ ತೆಗೆಯುವ ಹಾಗೂ ಪ್ರೋತ್ಸಾಹಿಸುವ ಕೆಲಸ ಮಾಡಬೇಕು. ಜಗತ್ತಿನ ವಿವಿಧ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಬಹಳ ಬುದ್ಧಿವಂತ ಜನರಿದ್ದಾರೆ. ಅದನ್ನು ನಾವು ಸದುಪಯೋಗಪಡಿಸಿಕೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Power-Cable

Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್‌ ಕೇಬಲ್‌ ಕಳವು

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.