ಸೆ.29ರಿಂದ ರಾಷ್ಟ್ರಮಟ್ಟದ ಸಿನಿಮಾಗಳ ಪ್ರದರ್ಶನ
Team Udayavani, Sep 19, 2019, 3:05 AM IST
ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಏರ್ಪಡಿಸುವ ಚಲನಚಿತ್ರೋತ್ಸವ ಪ್ರದರ್ಶನಗಳು ಸೆ.29ರಿಂದ ಅ.3ರವರೆಗೆ ಐದು ದಿನ ನಡೆಯಲಿದ್ದು, ಸೆ.29ರಂದು ಬೆಳಗ್ಗೆ 11 ಗಂಟೆಗೆ ಕಲಾಮಂದಿರದಲ್ಲಿ ಸಿಎಂ ಯಡಿಯೂರಪ್ಪ ಅವರು ಚಲನಚಿತ್ರೋತ್ಸವ ಉದ್ಘಾಟಿಸಲಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಸರಾ ಚಲನಚಿತ್ರೋತ್ಸವ ಉಪ ವಿಶೇಷಾಧಿಕಾರಿ ಗಿರೀಶ್ ಬಿ.ಎನ್, ಇದೇ ಮೊದಲ ಬಾರಿಗೆ ಸಿನಿಮಾಸಕ್ತರ ಪ್ರತಿಭೆಗಳನ್ನು ಗುರುತಿಸಲು ಚಿತ್ರಕಥಾ ಕಾರ್ಯಾಗಾರ, ಕಿರು ಚಲನಚಿತ್ರಗಳ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಹೇಳಿದರು.
ಕಿರು ಚಿತ್ರಗಳ ಸ್ಪರ್ಧೆ ಆಯೋಜಿಸಿದ್ದು, 5 ನಿಮಿಷಗಳ ಅವಧಿಗೆ ಸೀಮಿತವಾಗಿ ನಿರ್ಮಿಸಿರುವ ಕಿರು ಚಲನಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುತ್ತದೆ. ಅತ್ಯುತ್ತಮ ಚಿತ್ರಗಳಿಗೆ ಪ್ರಮಾಣಪತ್ರ ಮತ್ತು ಸ್ಮರಣಿಕೆ ನೀಡಲಾಗುವುದು ಎಂದರು. ಸ್ಪರ್ಧೆಯಲ್ಲಿ ಭಾಗವಹಿಸುವವರು ತಮ್ಮ ಸ್ವಂತ ನಿರ್ಮಾಣದ ಕಿರು ಚಲನಚಿತ್ರಗಳನ್ನು ಸೀಡಿಯಲ್ಲಿ ಅಳವಡಿಸಿ ಸೆ.25ರ ಸಂಜೆ 5 ಗಂಟೆಯೊಳಗಾಗಿ ಸೀಡಿಯನ್ನು ಉಪ ನಿರ್ದೇಶಕರ ಕಚೇರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಧನ್ವಂತ್ರಿ ರಸ್ತೆ, ಮೈಸೂರು ಇಲ್ಲಿಗೆ ಸಲ್ಲಿಸಿ ಸ್ವೀಕೃತಿ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಡಾ.ರಾಘವೇಂದ್ರ ಎಸ್.ಜಿ., ಮೊ. 9964585008 ಸಂಪರ್ಕಿಸಬಹುದು ಎಂದರು.
ಆಹಾರ ಮೇಳ: ಈ ವರ್ಷವೂ ಆಹಾರ ಮೇಳವನ್ನು ಮೈಸೂರು ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನ ಹಾಗೂ ಲಲಿತ ಮಹಲ್ ಪ್ಯಾಲೆಸ್ ಹೋಟೆಲ್ ಪಕ್ಕದ ಮುಡಾ ಮೈದಾನದಲ್ಲಿ ಸೆ.29ರಿಂದ ಅ.10ರವರೆಗೆ ಆಯೋಜಿಸ ಲಾಗಿದೆ. ಈ ಎರಡು ಸ್ಥಳಗಳಲ್ಲಿ ಸೆ.30 ರಿಂದ ಅ.10 ರವರೆಗೆ ಬೆಳಗ್ಗೆ 11.30 ರಿಂದ ಮಧ್ಯಾಹ್ನ 1ಗಂಟೆಯವರೆಗೆ ನಳಪಾಕ ಸ್ಪರ್ಧೆ ಮತ್ತು ಮಧ್ಯಾಹ್ನ 3 ರಿಂದ 4 ಗಂಟೆಯವರೆಗೆ ಸವಿಭೋಜನ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.