ಕಡಬ : ಕಾರುಗಳ ನಡುವೆ ಅಪಘಾತ ಇಬ್ಬರಿಗೆ ಗಾಯ
Team Udayavani, Sep 19, 2019, 9:31 PM IST
ಕಡಬ. ಮಾರುತಿ ಸುಝುಕಿ ಸ್ವಿಫ್ಟ್ ಹಾಗೂ ಮಹೀಂದ್ರಾ ಕೆಯುವಿ 100 ಕಾರುಗಳೆರಡರ ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ಸ್ವಿಫ್ಟ್ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡ ಘಟನೆ ಗುರುವಾರ ಸಂಜೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಲ್ಯ ಜಂಕ್ಷನ್ ನಲ್ಲಿ ನಡೆದಿದೆ.
ಗಾಯಾಳುಗಳನ್ನು ಬೆಳ್ತಂಗಡಿ ನಿವಾಸಿ ವಾಸುದೇವ ಗೋಖಲೆ(55) ಹಾಗೂ ಅವರ ಪತ್ನಿ ಪೂರ್ಣ ಗೋಖಲೆ(53) ಎಂದು ಗುರುತಿಸಲಾಗಿದೆ. ಕಡಬದಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಉಡುಪಿ ಜಿಲ್ಲೆಯ ಬೆಳ್ಮಣ್ ಮೂಲದವರಿದ್ದ ಮಹೀಂದ್ರಾ ಕೆಯುವಿ ನಡುವೆ ಬಲ್ಯ ಜಂಕ್ಷನ್ ನ ನೆಲ್ಯಾಡಿ ಕ್ರಾಸ್ ಬಳಿ ಢಿಕ್ಕಿಯುಂಟಾಗಿ ಎರಡೂ ಕಾರುಗಳು ಚರಂಡಿಗೆ ಬಿದ್ದಿವೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಆಲಂಕಾರಿನ 108 ಮೂಲಕ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.