ದೂರ ಶಿಕ್ಷಣದಿಂದ ದೂರ ಉಳಿದ ವಿದ್ಯಾರ್ಥಿಗಳು


Team Udayavani, Sep 20, 2019, 10:12 AM IST

bng-tdy-2

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ದೂರಶಿಕ್ಷಣ ವಿಭಾಗಕ್ಕೆ ಪ್ರವೇಶ ಪಡೆಯುವವರ ಪ್ರಮಾಣ ಕಳೆದೆರಡು ವರ್ಷಗಳಲ್ಲಿ ದಾಖಲೆ ಪ್ರಮಾಣದಲ್ಲಿ ಕುಸಿದಿದೆ. ಪ್ರತಿ ವರ್ಷ ಅಧಿಸೂಚನೆ ಹೊರಡಿಸಿದ ಮೊದಲ ವಾರದಲ್ಲಿ ಕನಿಷ್ಠ ಒಂದು ಸಾವಿರ ಅರ್ಜಿಗಳನ್ನು ಸ್ವೀಕರಿಸುತಿದ್ದ ವಿವಿ ದೂರಶಿಕ್ಷಣ ವಿಭಾಗ, ಈ ಬಾರಿ ಸ್ವೀಕರಿಸಿರುವುದು ಕೇವಲ 20-25 ಅರ್ಜಿ!

2018 -19ನೇ ಸಾಲಿನಲ್ಲಿ ಯುಜಿಸಿ (ವಿಶ್ವವಿದ್ಯಾಲಯ ಧನಸಹಾಯ ಆಯೋಗ) ಮರು ಮಾನ್ಯತೆ ಪಡೆದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ಎರಡನೇ ವರ್ಷ 5 ಸಾವಿರಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆ ಯಾಗಿವೆ. ಆದರೆ 2017- 18ನೇ ಸಾಲಿನಿಂದ ಆರಂಭವಾಗಿರುವ ಬೆಂಗಳೂರು ವಿವಿ ದೂರಶಿಕ್ಷಣ ವಿಭಾಗಕ್ಕೆ ಸಲ್ಲಿಕೆಯಾಗುತ್ತಿದ್ದ ಅರ್ಜಿಗಳ ಸಂಖ್ಯೆಯಲ್ಲಿ ಈ ಬಾರಿ ಮೂರು

ಸಾವಿರಕ್ಕೂ ಅಧಿಕ ಕುಸಿತ ಕಂಡುಬಂದಿದೆ. ದೂರ ಶಿಕ್ಷಣ ವಿಭಾಗ ಯುಜಿಸಿಯಿಂದ ಮಾನ್ಯತೆ ಪಡೆದ ಮೊದಲ ವರ್ಷ 4,500,

ಎರಡನೇ ವರ್ಷ ಐದು ಸಾವಿರ ಅರ್ಜಿಗಳು ಸಲ್ಲಿಕೆಯಾಗಿದ್ದವು. ಆದರೆ, ಪ್ರಸಕ್ತ ಸಾಲಿನಲ್ಲಿ ಅರ್ಜಿಗಳ ಸಂಖ್ಯೆ ಒಂದು ಸಾವಿರಕ್ಕೆ ಕುಸಿಯುವ ಲಕ್ಷಣಗಳಿವೆ. ವಿಭಾಗ ಆರಂಭವಾಗಿ ಮೂರು ವರ್ಷ ಕಳೆದರೂ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಪಠ್ಯ ಪುಸ್ತಕಗಳು ಪೂರೈಕೆಯಾಗುತ್ತಿಲ್ಲ. ಸರಿಯಾದ ಸಮಯಕ್ಕೆ ಫ‌ಲಿತಾಂಶ ಪ್ರಕಟಿಸುತ್ತಿಲ್ಲ. ಸ್ಟಡಿ ಸೆಂಟರ್‌ಗಳಲ್ಲಿ ಬೋಧನೆ ಚಟುವಟಿಕೆಗಳಿಲ್ಲ ಎಂದು ವಿದ್ಯಾರ್ಥಿಗಳು ವಿವಿ ಕುಲಪತಿಗಳಿಗೆ ದೂರು ಸಲ್ಲಿಸುತ್ತಿದ್ದಾರೆ. ಆದರೂ ಸಮಸ್ಯೆ ಬಗೆಹರಿಸಲು ಆಡಳಿತ ಮಂಡಳಿ ಆಸಕ್ತಿ ತೋರುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ.

ಬಿಕಾಂಗೆ ಕೇವಲ ಒಂದು ಅರ್ಜಿ: ಬೆಂಗಳೂರು ವಿವಿ ದೂರಶಿಕ್ಷಣ ವಿಭಾಗದಲ್ಲಿ ಬಿಎ, ಬಿಕಾಂ, ಬಿಬಿಎ, ಎಂಎ, ಎಂಕಾಂ, ಎಂಎಸ್ಸಿ ಗಣಿತ, ಪಿಜಿ ಡಿಪ್ಲೊಮಾ, ಸರ್ಟಿμಕೇಟ್‌ ಕೋರ್ಸ್‌ಗಳು ಸೇರಿ 15ಕ್ಕೂ ಅಧಿಕ ಕೋರ್ಸ್‌ಗಳಿವೆ. ಈ ಪೈಕಿ ಬಿಕಾಂಗೆ ಪ್ರತಿ ವರ್ಷ ಕನಿಷ್ಠ 1500 ಅರ್ಜಿಗಳು ಬರುತಿದ್ದವು. ಆದರೆ, ಪ್ರಸಕ್ತ ಸಾಲಿನಲ್ಲಿ ಈವರೆಗೆ ಬಂದಿರುವುದು ಒಂದೇ ಒಂದು ಅರ್ಜಿ. ಉಳಿದಂತೆ ಬಿಎ ಮತ್ತು ಬಿಬಿಎ ಕೋರ್ಸ್‌ಗಳಿಗೆ 500-600 ಅರ್ಜಿಗಳು ಸಲ್ಲಿಕೆಯಾಗಿವೆ.

ದೂರ ಶಿಕ್ಷಣ ವಿಭಾಗದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ನೀಡುತ್ತಿಲ್ಲ. ಪ್ರವೇಶಾತಿ ವೇಳೆ ಪುಸ್ತಕಗಳಿಗೆ ಪ್ರತ್ಯೇಕವಾಗಿ ಹಣ ಪಡೆಯುತ್ತಾರೆ. ಆದರೆ, ಪರೀಕ್ಷೆ ಹತ್ತಿರ ಬಂದರೂ ಪುಸ್ತಕಗಳು ನಮ್ಮ ಕೈ ಸೇರುತ್ತಿಲ್ಲ. ಸ್ಟಡಿ ಸೆಂಟರ್‌ಗಳಲ್ಲಿ ತರಗತಿಗಳು ನಡೆಯುತ್ತಿಲ್ಲ. ● ಕಿರಣ್‌, ಬೆಂ.ವಿವಿ ದೂರ ಶಿಕ್ಷಣ ವಿದ್ಯಾರ್ಥಿ

ದೂರ ಶಿಕ್ಷಣ ವಿಭಾಗದ ಪ್ರವೇಶಾತಿ ಸಂಖ್ಯೆ ಗಣನೀಯವಾಗಿ ಕುಸಿದಿದೆ. ವಿಭಾಗದ ಆಡಳಿತ ವೈಫ‌ಲ್ಯವೇ ಇದಕ್ಕೆ ಕಾರಣ. ಅರ್ಜಿ ಸಲ್ಲಿಸಲು ಇನ್ನೂ 15 ದಿನ ಅವಕಾಶವಿದ್ದು, ಆ ವೇಳೆಗೆ ಅರ್ಜಿಗಳ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ. . ಪ್ರೊ.ಕೆ.ಆರ್‌.ವೇಣುಗೋಪಾಲ್‌, ಬೆಂ.ವಿವಿ ಕುಲಪತಿ

 

● ಲೋಕೇಶ್‌ ರಾಮ್‌

ಟಾಪ್ ನ್ಯೂಸ್

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.