ಬಿಡಾಡಿ ದನಗಳಿಗೆ ರಸ್ತೆಯೇ ಕೊಟ್ಟಿಗೆ
ರಸ್ತೆಗಳ ಮಧ್ಯೆಯೇ ಠಿಕಾಣಿ •ಜನರು-ವಾಹನ ಚಾಲಕರಿಗೆ ನಿತ್ಯ ಕಿರಿಕಿರಿ
Team Udayavani, Sep 20, 2019, 2:48 PM IST
ಬಸವಕಲ್ಯಾಣ: ಬಸ್ ನಿಲ್ದಾಣಕ್ಕೆ ತೆರಳುವ ರಸ್ತೆ ಮಧ್ಯದಲ್ಲಿ ಠಿಕಾಣಿ ಹೂಡಿರುವ ದನಗಳು.
ಬಸವಕಲ್ಯಾಣ: ನಗರದ ಪ್ರಮುಖ ರಸ್ತೆಗಳ ಮಧ್ಯದಲ್ಲಿ ಬಿಡಾಡಿ ದನಗಳು ಬೀಡು ಬಿಡುವುದರಿಂದ ಸುಗಮ ಸಂಚಾರಕ್ಕೆ ತೊಂದರೆ ಆಗುತ್ತಿದೆ.
ಕೇಂದ್ರ ಬಸ್ ನಿಲ್ದಾಣ, ಮಹಾತ್ಮಗಾಂಧಿ ವೃತ್ತ, ಹರಳಯ್ಯ ವೃತ್ತ ಹಾಗೂ ತರಕಾರಿ ಅಂಗಡಿ ಸೇರಿದಂತೆ ನಗರದ ಜನ ಸಾಂದ್ರತೆ ಇರುವ ಸ್ಥಳಗಳಲ್ಲಿ ಬಿಡಾಡಿ ದನಗಳ ಹಿಂಡೆ ಠಿಕಾಣಿ ಕಾಣುತ್ತಿವೆ. ಇದರಿಂದ ನಗರದ ರಸ್ತೆಗಳು ಸಾರ್ವಜನಿಕರು ಓಡಾಡುವ ರಸ್ತೆಯೊ ಅಥವಾ ಕೊಟ್ಟಿಗೆಯೊ ಎಂಬುವುದು ತಿಳಿಯದಂತಾಗಿದೆ. ಇದರಿಂದ ಮಕ್ಕಳು, ವೃದ್ಧರು ಓಡಾಟ ಹಾಗೂ ವಾಹನ ಸಂಚಾರಕ್ಕೆ ಸಮಸ್ಯೆ ಎದುರಾಗಿದೆ.
ಪಾದಚಾರಿಗಳು ಹೋಗುವಾಗ ಹಾಗೂ ವಾಹನಗಳು ಸಂಚರಿಸುವಾಗ ದನಗಳು ಅಡ್ಡಲಾಗಿ ಬಂದು ನಿಲ್ಲುತ್ತಿವೆ. ಹೀಗಾಗಿ ಸಾರ್ವಜನಿಕರು ದನಗಳು ಮೈಮೇಲೆ ಬರಬಹುದು ಎಂಬ ಭಯದಲ್ಲಿ ಅವು ಸ್ಥಳದಿಂದ ಕದಲುವವರೆಗೂ ಕಾಯುವಂತಾಗಿದೆ.
ಒಂದು ವೇಳೆ ವೇಗವಾಗಿ ಹೋಗಲು ಪ್ರಯತ್ನಿಸಿದರೆ, ಅವಘಡಗಳು ಸಂಭವಿಸುವ ಸಾಧ್ಯತೆ ಇರುತ್ತದೆ. ಸಾರ್ವಜನಿಕರು ತರಕಾರಿ ಹಾಗೂ ದಿನಸಿ ವಸ್ತುಗಳು ಬೈಕ್ ಅಥವಾ ಆಟೋದಲ್ಲಿ ಬಿಟ್ಟು ಹೋದರೆ ಅವುಗಳನ್ನು ಚೆಲ್ಲಾಪಿಲ್ಲಿ ಮಾಡುವುದು ಜಾನುವಾರುಗಳ ನಿತ್ಯದ ಕಾಯಕವಾಗಿದೆ. ಇದು ಜನರ ಪಾಲಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ.
ನಗರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ನಮಗೂ ಬಿಡಾಡಿ ದನಗಳಿಗೂ ಯಾವುದೇ ಸಂಬಂಧವಿಲ್ಲದಂತೆ ವರ್ತಿಸುತ್ತಿದ್ದಾರೆ ಎಂದು ನಾಗರಿಕರು ಆರೋಪಿಸಿದ್ದಾರೆ. ಬಿಡಾಡಿ ದನಗಳಿಂದ ನಗರದಲ್ಲಿ ಆಗುತ್ತಿರುವ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟವರು ಕೂಡಲೇ ಕ್ರಮ ಕೈಗೊಳ್ಳಬೇಕು ಅಥವಾ ಖಾಸಗಿ ವ್ಯಕ್ತಿಗಳ ದನಗಳ ಆಗಿದ್ದರೆ, ಅವರ ಗಮನಕ್ಕೆ ತಂದು ಅವುಗಳನ್ನು ಹೊರಗಡೆ ಬಿಡದಂತೆ ಎಚ್ಚರಿಕೆ ನೀಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.