ರಸ್ತೆ ಸುರಕ್ಷತೆಗೆ ಯೋಜನೆ ರೂಪಿಸಿ

ಭವಿಷ್ಯದಲ್ಲಿ ಅಪಘಾತ ತಗ್ಗಿಸುವ ಗುರಿ ಹಾಕಿಕೊಳ್ಳಿ•ಅಗತ್ಯವುಳ್ಳ ಕ್ರಿಯಾಯೋಜನೆಗೆ ಸೂಚನೆ

Team Udayavani, Sep 20, 2019, 4:22 PM IST

20-Sepctember-20

ವಿಜಯಪುರ: ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಅಧ್ಯಕ್ಷತೆಯಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಯಿತು

ವಿಜಯಪುರ: ಜಿಲ್ಲಾಮಟ್ಟದ ರಸ್ತೆ ಸುರಕ್ಷತೆಯ ಸಮಗ್ರ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಅವರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಜಿಲ್ಲೆಯಲ್ಲಿ ರಸ್ತೆ ಅಪಘಾತಗಳನ್ನು ಮತ್ತು ಅದರಿಂದ ಉಂಟಾಗುವ ಪ್ರಾಣಹಾನಿ ಹಾಗೂ ಗಾಯಾಳುಗಳ ಪ್ರಮಾಣ ತಗ್ಗಿಸುವ ಅಗತ್ಯವಿದೆ. ಇದಕ್ಕಾಗಿ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ವ್ಯವಸ್ಥಿತವಾದ ಸಮಗ್ರ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಅತಿ ಹೆಚ್ಚು ಅಪಘಾತಗಳು ನಡೆಯುವ, ರಸ್ತೆ ಸುರಕ್ಷತಾ ಗುರುತುಗಳಿಲ್ಲದ ಹಾಗೂ ಅವೈಜ್ಞಾನಿಕ ರೀತಿಯಲ್ಲಿ ಗುರುತಿಸುವ ಜೊತೆಗೆ ಮುಂಬರುವ ದಿನಗಳಲ್ಲಿ ಅಪಘಾತ ತಗ್ಗಿಸುವ ಗುರಿ ಹಾಕಿಕೊಳ್ಳಬೇಕು. ಇದಕ್ಕಾಗಿ ಪೊಲೀಸ್‌ ಇಲಾಖೆ ಮತ್ತು ವಿವಿಧ ಆಸ್ಪತ್ರೆಗಳ ಅಂಕಿ-ಅಂಶಗಳನ್ನು ಸಂಗ್ರಹಿಸಿ, ಇದರ ಆಧಾರದಲ್ಲಿ ಅವಶ್ಯಕ ವಿಷಯಗಳನ್ನು ಒಳಗೊಂಡ ಕ್ರಿಯಾ ಯೋಜನೆ ರೂಪಿಸುವಂತೆ ಹೇಳಿದರು.

ಈಗಾಗಲೇ ರಸ್ತೆ ಸುರಕ್ಷತೆ ಮೇಲುಸ್ತುವಾರಿ ಹಾಗೂ ನೇತೃತ್ವದ ಅಂಗವಾಗಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ರಚಿಸಲಾಗಿದ್ದು, ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ಸೇರಿ ಚರ್ಚಿಸಲಾಗುತ್ತದೆ. ಅದರಂತೆ ಕರಡು ಕ್ರಿಯಾ ಯೋಜನೆ ರಾಜ್ಯ ರಸ್ತೆ ಸುರಕ್ಷತಾ ಘಟಕದಿಂದ ಬಂದಿದ್ದು, ಈ ಕುರಿತು ವಿವಿಧ ಇಲಾಖೆಗಳ ಅಭಿಪ್ರಾಯ ಸಂಗ್ರಹಿಸಿ ಸಮಗ್ರ ಕ್ರಿಯಾ ಯೋಜನೆ ಸಿದ್ಧಪಡಿಸಿ, ರಾಜ್ಯ ರಸ್ತೆ ಸುರಕ್ಷತಾ ಕೋಶಕ್ಕೆ ಕಳುಹಿಸಲಾಗುವುದು. ನಂತರ ಬಿಡುಗಡೆಯಾಗುವ ಅನುದಾನ ಆಧಾರದ ಮೇಲೆ ರಸ್ತೆ ಸುರಕ್ಷತಾ ಕಾರ್ಯಗಳನ್ನು ಜಿಲ್ಲಾದ್ಯಂತ ಕೈಗೊಳ್ಳಲಾಗುತ್ತದೆ ಎಂದು ವಿವರಿಸಿದರು.

ಈಗಾಗಲೇ ಸಿದ್ಧಗೊಂಡಿರುವ ಕರಡು ಕ್ರಿಯಾ ಯೋಜನೆ ಅನ್ವಯ ಜಿಲ್ಲಾ ಕ್ರಿಯಾ ಯೋಜನೆ, ಸಾಂದರ್ಭಿಕ ವಿಶ್ಲೇಷಣೆ, ಅಪಘಾತ ತಗ್ಗಿಸಲು ಅಂಕಿ-ಅಂಶಗಳ ಮತ್ತು ಮಾಹಿತಿ ವ್ಯವಸ್ಥೆ ಸುಧಾರಣಾ ಕ್ರಮಗಳು, ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳು ರಸ್ತೆ ಸುರಕ್ಷತಾ ನಿಯಮ ಅನುಷ್ಠಾನ-ಕ್ರಮಗಳು, ರಸ್ತೆಗಳಲ್ಲಿನ ತಗ್ಗು ಗುಂಡಿ ಗುರುತು, ನಿರ್ವಹಣೆ, ಅಪಘಾತ ಸಂದರ್ಭದಲ್ಲಿ ತುರ್ತು ಚಿಕಿತ್ಸೆಗೆ ವಿವಿಧ ಆರೋಗ್ಯ ಇಲಾಖೆ, ಜಿಲ್ಲಾಸ್ಪತ್ರೆ, ವೈದ್ಯಕೀಯ ಕಾಲೇಜುಗಳ ಸಮನ್ವಯದಿಂದ ಕಾರ್ಯನಿರ್ವಹಣೆ, ಜಿಲ್ಲಾದ್ಯಂತ ರಸ್ತೆ ಸುರಕ್ಷತಾ ಕ್ರಮಗಳು ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಪ್ರಗತಿ, ರಸ್ತೆ ಸುರಕ್ಷತಾ ಜಾಗೃತಿ ಹಾಗೂ ತರಬೇತಿ ಕಾರ್ಯಕ್ರಮ ಅಳವಡಿಸಿದ್ದು, ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಪರಿಣಾಮಕಾರಿ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಜಿಲ್ಲಾಧಿಕಾರಿಗಳು ತಾಕೀತು ಮಾಡಿದರು.

ಎಸ್ಪಿ ಪ್ರಕಾಶ ನಿಕ್ಕಂ ಮಾತನಾಡಿ, ಜಿಲ್ಲೆಯ ತಾಳಿಕೋಟೆಯಿಂದ ಬಸವನಬಾಗೇವಾಡಿ ವರೆಗಿನ ಮಾರ್ಗದಲ್ಲಿ ರಸ್ತೆ ಸುರಕ್ಷತಾ ಗುರುತುಗಳನ್ನು ಅಳವಡಿಸುವ ಜೊತೆಗೆ ವಿವಿಧ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೂಚಿಸಬೇಕು. ತಾಳಿಕೋಟೆ-ಮನಗೂಳಿ ರಸ್ತೆ ಮಧ್ಯದಲ್ಲಿ ಅವಶ್ಯಕತೆ ಇರುವ ಕಡೆ ಹಂಪ್ಸ್‌ (ವೇಗ ನಿಯಂತ್ರಕ) ಗಳಿಗೆ ಚಾಲಕರಿಗೆ ಕಾಣುವಂತೆ ಸುರಕ್ಷತಾ ಗುರುತುಗಳ ಅಳವಡಿಕೆ, ಬಣ್ಣಗಳಿಂದ ಬರೆಯುವ ಕೆಲಸವಾಗಬೇಕು ಎಂದರು.

ವಿಜಯಪುರ-ಕಲಬುರ್ಗಿ ಮಾರ್ಗದಲ್ಲಿನ ದೇವರಹಿಪ್ಪರ-ಸಿಂದಗಿ ರಸ್ತೆ ಮಾರ್ಗಗಳಲ್ಲಿ ಅನೇಕ ಅಪಘಾತಗಳು ನಡೆದು, ಅಪಾರ ಪ್ರಮಾಣದ ಸಾವು, ನೋವು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ಅವಶ್ಯಕತೆ ಇರುವ ಕಡೆ ಸ್ಪೀಡ್‌ ಬ್ರೇಕರ್‌ ಅಳವಡಿಸುವ, ವೈಜ್ಞಾನಿಕ ರೀತಿಯಲ್ಲಿ ತಿರುವುಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಬೇಕು. ಜಿಲ್ಲಾದ್ಯಂತ ವಿವಿಧ ರಸ್ತೆಗಳಲ್ಲಿರುವ ಎಲ್ಲ ತಗ್ಗುಗಳನ್ನು ವೈಜ್ಞಾನಿಕ ರೀತಿಯಲ್ಲಿ ಮುಚ್ಚಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ ಕರಡು ಕ್ರಿಯಾ ಯೋಜನೆ ಕುರಿತು ವಿವರ ನೀಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರವೀಂದ್ರ ಕಾರಬಾರಿ ಹಾಗೂ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.