ವಿವಿ ಸಾಗರಕ್ಕೆ ಭದ್ರಾ ನೀರು ಬಂದೇ ಬರುತ್ತೆ
ಅ. 1ರಂದು ಭದ್ರಾ ನೀರು ಹರಿಸುವ ಕಾರ್ಯಕ್ಕೆ ಸಿಎಂ ಯಡಿಯೂರಪ್ಪ ಚಾಲನೆ: ಶಾಸಕಿ ಪೂರ್ಣಿಮಾ
Team Udayavani, Sep 20, 2019, 5:01 PM IST
ಹಿರಿಯೂರು: ನಗರದ ಎ. ಕೃಷ್ಣಪ್ಪ ರೋಟರಿ ಸಭಾಂಗಣದಲ್ಲಿ ನಡೆದ ಯುವ ಸಮ್ಮೇಳನವನ್ನು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಉದ್ಘಾಟಿಸಿದರು.
ಹಿರಿಯೂರು: ತಾಲೂಕಿನಲ್ಲಿ ಸತತ ಬರಗಾಲ, ಅಂತರ್ಜಲ ಮಟ್ಟ ಕುಸಿತದ ಪರಿಣಾಮ ನೀರಿನ ಸಮಸ್ಯೆ ಉಲ್ಬಣಿಸಿದೆ. ರೈತರು ಹಾಗೂ ಜನರ ನೀರಿನ ಬವಣೆಗೆ ಕೆಲವೇ ದಿನಗಳಲ್ಲಿ ಪರಿಹಾರ ದೊರೆಯಲಿದೆ ಎಂದು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೇಳಿದರು.
ನಗರದ ಶಾರದಾಶ್ರಮ ಮತ್ತು ರೋಟರಿ ಕ್ಲಬ್ ಆಶ್ರಯದಲ್ಲಿ ನೆಹರು ಮೈದಾನದ ಎ. ಕೃಷ್ಣಪ್ಪ ರೋಟರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಯುವ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭದ್ರಾ ಮೇಲ್ದಂಡೆ ಯೋಜನೆಯಡಿ ವಾಣಿವಿಲಾಸ ಸಾಗರಕ್ಕೆ ನೀರು ಹರಿಸುವ ಕಾಮಗಾರಿ ತ್ವರಿತಗತಿಯಲ್ಲಿ ನಡೆಯುತ್ತಿದೆ. ಅಕ್ಟೋವ್ 1 ರಂದು ಭದ್ರಾ ನೀರು ವಿವಿ ಸಾಗರಕ್ಕೆ ಹರಿದು ಬರಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ ಎಂದರು.
ಯುವ ಸಮೂಹ ಜೀವನದಲ್ಲಿ ಗುರಿ ಇಟ್ಟು ಕೊಂಡು ಸಾಧನೆಯತ್ತ ಸಾಗಬೇಕು. ಮೊಬೈಲ್, ಫೇಸ್‌ಬುಕ್‌ಗಳತ್ತ ಹೆಚ್ಚಿನ ಗಮನ ಹರಿಸದೆ ಭವಿಷ್ಯದ ಬದುಕಿನತ್ತ ಚಿಂತನೆ ನಡೆಸಬೇಕು. ಹೋಬಳಿ ಮಟ್ಟದಲ್ಲಿ ಯುವ ಸಮ್ಮೇಳನ ನಡೆಯುವಂತಾಗಬೇಕು ಎಂದು ಆಶಿಸಿದರು.
ಭವತಾರಿಣಿ ಆಶ್ರಮದ ಮಾತಾಜೀ ವಿವೇಕಮಯಿ ವಿದ್ಯಾರ್ಥಿಗಳೊಂದಿಗೆ ಪ್ರಶ್ನೋತ್ತರ ನಡೆಸಿ ಮಾತನಾಡಿ, ನಾವು ಆತ್ಮ ಸ್ವರೂಪಿಯಾಗಿದ್ದು ಎರಡು ಬಗೆಯ ವ್ಯಕ್ತಿತ್ವವನ್ನು ಹೊಂದಿರುತ್ತೇವೆ. ಆತ್ಮ ಸರ್ವಶಕ್ತವಾದುದು. ಯಶಸ್ಸಿಗೆ ಮನಸ್ಸೇ ಮುಖ್ಯ. ಆದ್ದರಿಂದ ಮನಸ್ಸಿಗೆ ಸಂಸ್ಕಾರ ಕೊಡುವ ತರಬೇತಿ ದೊರೆಯಬೇಕಿದೆ. ಜೊತೆಗೆ ಉದಾತ್ತ, ಶ್ರೇಷ್ಠ ಚಿಂತನೆ ಮತ್ತು ಶಕ್ತಿಯುತ ಚಿಂತನೆಗಳಿಗೆ ಮನಸ್ಸು ತೆರೆದುಕೊಳ್ಳಬೇಕು ಎಂದು ಕರೆ ನೀಡಿದರು.
ಶಾರದಾಶ್ರಮದ ಮಾತಾಜೀ ಚೈತನ್ಯಮಯಿ ಅವರು ಕಾರ್ಯಕ್ರಮಕ್ಕೆ ಆಗಮಿಸಿದ ಗಿರೀಶಾ ಮತ್ತು ಜ್ಞಾನಭಾರತಿ ಬಿ.ಎಡ್ ಕಾಲೇಜುಗಳ ಪದವಿ, ಪದವಿಪೂರ್ವಕಾಲೇಜುಗಳ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಪುಸ್ತಕಗಳನ್ನು ವಿತರಿಸಿದರು. ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾರದಾಶ್ರಮದ ಆಶ್ರಮದ ವತಿಯಿಂದ ಪ್ರೋತ್ಸಾಹಧನ ವಿತರಿಸಲಾಯಿತು. ಚಿತ್ರಕಲಾ ಶಿಕ್ಷಕ ರಾಜೀವ್ ಅವರನ್ನು ಸನ್ಮಾನಿಸಲಾಯಿತು. ರೋಟರಿ ಕ್ಲಬ್ ಸದಸ್ಯ ಕಿರಣ್ ಸ್ವಾಗತಿಸಿದರು. ಶಿಕ್ಷಕ ರಾಘವೇಂದ್ರ ಆಚಾರ್ ನಿರೂಪಿಸಿದರು. ನಾಗರಾಜ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudbidri: ರಸ್ತೆಯಲ್ಲೆಲ್ಲ ಹೊಂಡಗಳು ಸಾರ್ ಹೊಂಡಗಳು!
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
Mangaluru: ಬೇಕು ಇಂದೋರ್ ಮಾದರಿ;ದೇಶದ ನಂ.1 ಸ್ವಚ್ಛ ನಗರ ಇಲ್ಲಿಗೆ ಹೇಗೆ ಅನ್ವಯವಾಗುತ್ತದೆ?
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.