ಕೇಂದ್ರ, ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ 10 ಪ್ರಶ್ನೆ
Team Udayavani, Sep 21, 2019, 3:03 AM IST
ಬೆಂಗಳೂರು: ಭೀಕರ ಪ್ರವಾಹದಿಂದ ರಾಜ್ಯದಲ್ಲಿ ಉಂಟಾದ ಅನಾಹುತಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಏಕೆ ಸರಿಯಾಗಿ ಸ್ಪಂದಿಸಿಲ್ಲ ಎಂದು ಕಾಂಗ್ರೆಸ್ ಎರಡೂ ಸರ್ಕಾರಗಳಿಗೆ “ಎದ್ದೇಳು ಬಿಜೆಪಿ’ ಎಂದು ಹ್ಯಾಷ್ ಟ್ಯಾಗ್ ಮೂಲಕ 10 ಪ್ರಶ್ನೆಗಳನ್ನು ಕೇಳಿದೆ.
1.ಪ್ರಧಾನಿ ನರೇಂದ್ರ ಮೋದಿ ಅವರು ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಯಾಕೆ ಬಂದಿಲ್ಲ?
2.ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ತಂಡದ ಪ್ರವಾಸದ ಫಲ ಏನು?
3.ಈ ಭೀಕರ ಪ್ರವಾಹ ವಿಕೋಪವನ್ನು ರಾಷ್ಟ್ರೀಯ ವಿಪತ್ತು ಎಂದು ಯಾಕೆ ಘೋಷಣೆ ಮಾಡಿಲ್ಲ?
4.ಇಷ್ಟು ದೊಡ್ಡ ಮಟ್ಟದ ನಷ್ಟ ಸಂಭವಿಸಿದ್ದರೂ ಯಡಿಯೂರಪ್ಪನವರ ಬೇಡಿಕೆಯಂತೆ ಕೇಂದ್ರ ಸರ್ಕಾರ 5000 ಕೋಟಿ ರೂ. ಮಧ್ಯಂತರ ಪರಿಹಾರ ಏಕೆ ನೀಡಿಲ್ಲ?
5.ಪ್ರಧಾನಿ ಪ್ರವಾಹ ಪರಿಸ್ಥಿತಿ ಬಗ್ಗೆ ಚರ್ಚಿಸಲು ರಾಜ್ಯ ಸರ್ಕಾರಕ್ಕೆ ಅವಕಾಶ ನೀಡದೇ ಕರ್ನಾಟಕವನ್ನು ಅವಮಾನಿಸುತ್ತಿರುವುದೇಕೆ?
6.ತಕ್ಷಣ ಪರಿಹಾರ ಬಿಡುಗಡೆಗೆ ಕೇಂದ್ರದ ಮೇಲೆ ರಾಜ್ಯ ಸರ್ಕಾರ ಒತ್ತಡ ಹೇರುತ್ತಿಲ್ಲ ಏಕೆ?
7.ರಾಜ್ಯದ 25 ಮಂದಿ ಬಿಜೆಪಿ ಸಂಸದರು ತಮ್ಮ ಕರ್ತವ್ಯ ಮರೆತು ಕಣ್ಮರೆಯಾಗಿರುವುದೇಕೆ?
8.ಸಂತ್ರಸ್ತರ ಪ್ರತಿಭಟನೆಗೆ ಹೆದರಿ ಬೆಳಗಾವಿಯಲ್ಲಿ ಅಧಿವೇಶನ ಮಾಡದಿರುವುದು ಪಲಾಯನವಲ್ಲವೇ?
9.ರಾಜ್ಯ ಸರ್ಕಾರವು ಪ್ರಧಾನಿ ಬಳಿ ಪರಿಹಾರ ಕೇಳಲು ಸರ್ವ ಪಕ್ಷಗಳ ನಾಯಕರು, ಕೆಲ ಸಂತ್ರಸ್ತರು, ರೈತ ಮುಖಂ ಡರ ನಿಯೋಗ ಏಕೆ ಕರೆದೊಯ್ಯುತ್ತಿಲ್ಲ?
10.ನಷ್ಟ 35,160 ಕೋಟಿ ಎಂದು ಅಂದಾಜಿಸಿ ರಾಜ್ಯವು 1500 ಕೋಟಿ ಬಿಡುಗಡೆ ಮಾಡಿರುವುದು ಸಂತ್ರಸ್ತರಿಗೆ ಮಾಡಿರುವ ಅನ್ಯಾಯವಲ್ಲವೇ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.