ಸಾಲ ವಸೂಲಾತಿಗೆ ಬಲವಂತ ಬೇಡ

ನಮ್ಮ ರೈತರು ಸಾಲ ಕಟ್ಟಿಯೇ ಕಟ್ಟುತ್ತಾರೆಬ್ಯಾಂಕ್‌ ಅಧಿಕಾರಿಗಳ ಸಭೆಯಲ್ಲಿ ಸಂಸದ ಸಿದ್ದೇಶ್ವರ್‌ ಹೇಳಿಕೆ

Team Udayavani, Sep 21, 2019, 11:54 AM IST

21-Sepctember–3

ದಾವಣಗೆರೆ: ರೈತರ ಯಾವುದೇ ಸಾಲ ವಸೂಲಾತಿಗೆ ಸಂಬಂಧಿಸಿದಂತೆ ನೋಟಿಸ್‌ ಜಾರಿ, ಜಪ್ತಿ, ಬಲವಂತ ಪಡಿಸುವುದು, ಯಾವುದೇ ಕ್ರಮಕ್ಕೆ ಮುಂದಾಗದಂತೆ ಸಂಸದ
ಜಿ.ಎಂ. ಸಿದ್ದೇಶ್ವರ್‌ ಬ್ಯಾಂಕ್‌ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಶುಕ್ರವಾರ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಮಾರ್ಗದರ್ಶಿ ಬ್ಯಾಂಕ್‌(ಕೆನರಾ ಬ್ಯಾಂಕ್‌) ಜಿಲ್ಲಾ ಮಟ್ಟದ ಪುನರಾವಲೋಕನ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಸಾಲ ಪಡೆದಂತಹ ರೈತರು ಸಾಲ ಕಟ್ಟಿಯೇ ಕಟ್ಟುತ್ತಾರೆ. ಎಲ್ಲಿಗೂ ಹೋಗುವುದಿಲ್ಲ. ತಾಳ್ಮೆಯಿಂದ ಕಾಯಿರಿ. ಏನು ಆಗುವುದಿಲ್ಲ ಎಂದರು. ಕಳೆದ ವರ್ಷ ಬರ ಇತ್ತು. ಹಾಗಾಗಿ ಸಾಲ ಕಟ್ಟಲಿಕ್ಕೆ ಆಗಲಿಲ್ಲ. ಈ ವರ್ಷ ಮಳೆಯಾಗಿದೆ. ಬೆಳೆ ಸಮೃದ್ಧಿ ಆಗುವ ನಿರೀಕ್ಷೆಯೂ ಇದೆ. ನಮ್ಮ ರೈತರು ಸಾಲ ಕಟ್ಟಿಯೇ ಕಟ್ಟುತ್ತಾರೆ. ಹಾಗಾಗಿ ನೋಟಿಸ್‌ ನೀಡುವುದು, ಜಪ್ತಿ, ಬಲವಂತ ಮಾಡುವುದನ್ನು ಮಾಡಬೇಡಿ. ರೈತರು ಏನಾದರೂ ಆತ್ಮಹತ್ಯೆ ಮಾಡಿಕೊಂಡರೆ ತೊಂದರೆ ಅನುಭವಿಸಬೇಕಾಗುತ್ತದೆ. ಸಾಲ ವಸೂಲಾತಿಗೆ ಸಂಬಂಧಿಸಿದಂತೆ ಬಲವಂತ ಮಾಡಬೇಡಿ ಎಂದು ಸೂಚಿಸಿದರು.

ಹರಿಹರ ತಾಲೂಕಿನ ಕೊಂಡಜ್ಜಿ ಗ್ರಾಮದ ರೈತರೊಬ್ಬರ ಟ್ರಾÂಕ್ಟರ್‌ ಜಪ್ತಿಗೆ ನೋಟಿಸ್‌ ಕಳಿಸಲಾಗಿದೆ. ಸಾಲ ಕಟ್ಟಲು ಬಲವಂತ ಪಡಿಸುತ್ತಿದ್ದಾರೆ. ಇದೇ ರೀತಿ ಬಲವಂತ ಮಾಡಿದರೆ ಆತ್ಮಹತ್ಯೆ ಮಾಡಿಕೊಳ್ಳುವುದೊಂದೇ ನಮಗೆ ಉಳಿದಿರುವ ದಾರಿ ಎಂದು ಅನೇಕ ರೈತರು ನನ್ನಲ್ಲಿ ಹೇಳಿಕೊಂಡಿದ್ದಾರೆ. ಹಾಗಾಗಿ
ಯಾವುದೇ ಕಾರಣಕ್ಕೂ ಸಾಲ ವಸೂಲಾತಿಗೆ ನೋಟಿಸ್‌ ಕೊಡುವುದು, ಬಲವಂತ ಮಾಡಬಾರದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಜಿ. ಬೀಳಗಿ ಸೂಚಿಸಿದರು.

ಲೀಡ್‌ ಬ್ಯಾಂಕ್‌ ವಿಭಾಗೀಯ ಪ್ರಬಂಧಕ ಸುಶ್ರುತ್‌ ಡಿ. ಶಾಸ್ತ್ರಿ ಮಾತನಾಡಿ, ವಾರ್ಷಿಕ ಸಾಲ ಯೋಜನೆಯಡಿ ಪ್ರಥಮ ತ್ತೈಮಾಸಿಕದಲ್ಲಿ ಕೃಷಿ ಕ್ಷೇತ್ರದ 466.17 ಕೋಟಿ ಗುರಿಗೆ 546.86 ಕೋಟಿ ನೀಡಲಾಗಿದೆ. ಸಣ್ಣ ಕೈಗಾರಿಕೆಗೆ 149.14 ಕೋಟಿ ಗುರಿಗೆ 116.26 ಕೋಟಿ ನೀಡಲಾಗಿದೆ. ಒಟ್ಟಾರೆ 883.94 ಕೋಟಿ ಗುರಿಗೆ 815.01(ಶೇ.92.2) ಗುರಿ ಮುಟ್ಟಲಾಗಿದೆ. ಎರಡನೇ ತ್ತೈಮಾಸಿಕದಲ್ಲಿ ಸಾಲದ ಪ್ರಮಾಣ ಹೆಚ್ಚಾಗಲಿದೆ ಎಂದು ತಿಳಿಸಿದರು. ಕೆಲವಾರು ಬ್ಯಾಂಕ್‌ಗಳು ಒದಗಿಸಿರುವ ಸಾಲ ಸೌಲಭ್ಯದ ಪ್ರಮಾಣ ಶೇ.40 ಸಹ ದಾಟಿಲ್ಲ. ಯಾವುದೇ ಸಬೂಬು ಹೇಳುವಂತೆಯೇ ಇಲ್ಲ. ಡಿಸೆಂಬರ್‌ನಲ್ಲಿ ನಡೆಸುವ ಸಭೆಯ ವೇಳೆಗೆ ಕನಿಷ್ಟ ಶೇ.60 ರಷ್ಟು ಸಾಲ ಸೌಲಭ್ಯ ಒದಗಿ ಸಲೇಬೇಕು ಎಂದು ಸೂಚಿಸಿದ ಜಿ.ಎಂ. ಸಿದ್ದೇಶ್ವರ್‌ ಶೇ.60ಕ್ಕೆ ಸೀಮಿತವಾಗಬೇಡಿ. ಕನಿಷ್ಟ ಶೇ.60 ಇರಲೇಬೇಕು. ಅದಕ್ಕಿಂತಲೂ ಹೆಚ್ಚಿನ ಪ್ರಮಾಣದ ಸಾಲ ನೀಡಬೇಕು ಎಂದು ತಿಳಿಸಿದರು.

ಮುದ್ರಾ ಯೋಜನೆಗೆ ಸರ್ಕಾರವೇ ಭದ್ರತೆ ನೀಡಲಿದೆ. ಜನರು ಸ್ವಯಂ ಉದ್ಯೋಗ ಪ್ರಾರಂಭಿಸಬೇಕು ಎಂಬ ಕಾರಣಕ್ಕಾಗಿಯೇ ನಾಲ್ಕೂವರೆ ವರ್ಷಗಳಿಂದ ಮುದ್ರಾ ಯೋಜನೆ ಜಾರಿಗೆ ತರಲಾಗಿದೆ. ಮೊದಲ ತ್ತೈಮಾಸಿಕದಲ್ಲಿ
ಕಡಿಮೆ ಪ್ರಮಾಣದಲ್ಲಿ ಸಾಲ ನೀಡಲಾಗಿದೆ. ಕೆಲವರನ್ನ ವಾಪಸ್‌ ಕಳಿಸಲಾಗಿದೆ ಎಂಬ ದೂರುಗಳು ಸಹ ಬಂದಿವೆ. ಯಾವುದೇ ಕಾರಣಕ್ಕೂ ವಾಪಸ್‌ ಕಳಿಸುವಂತಿಲ್ಲ. ಸರ್ಕಾರದ ಯೋಜನೆಯಡಿ ಸಾಲದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪೆಂಡಿಂಗ್‌ ಇಡಬಾರದು. ಸಾಲ ನೀಡದೇ ಇದ್ದರೆ
ಯಾವ ಕಾರಣಕ್ಕೆ ಅರ್ಜಿ ತಿರಸ್ಕರಿಸಲಾಗಿದೆ ಎಂಬುದರ ಬಗ್ಗೆ ವಿವರವಾದ ಮಾಹಿತಿ ನೀಡುವಂತೆ ಸಿದ್ದೇಶ್ವರ್‌ ತಿಳಿಸಿದರು.

ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಪದ್ಮಾ ಬಸವಂತಪ್ಪ ಅಧ್ಯಕ್ಷತೆ ವಹಿಸಿದ್ದರು. ರಿಸರ್ವ್‌ ಬ್ಯಾಂಕ್‌ ಎಜಿಎಂ ಆನಂದ್‌ ನಿಮ್‌, ನಬಾರ್ಡ್‌ ಎಜಿಎಂ ರವೀಂದ್ರ, ಕೆನರಾ ಬ್ಯಾಂಕ್‌ ಪ್ರಾದೇಶಿಕ ಕಾರ್ಯಾಲಯ ವಿಭಾಗೀಯ ಪ್ರಬಂಧಕ ಜಿ.ಜಿ. ದೊಡ್ಡಮನಿ, ಕೆ. ರಾಘವೇಂದ್ರ ನಾಯರಿ, ಎನ್‌. ರಾಮಮೂರ್ತಿ ಇತರರು ಇದ್ದರು.

ಟಾಪ್ ನ್ಯೂಸ್

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

6

Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್‌ ನಿಲ್ದಾಣವೇ ಇಲ್ಲ !

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.