ಪ್ರತಿ ಲೀಟರ್ ಹಾಲಿಗೆ 1 ರೂ. ಹೆಚ್ಚಳ
Team Udayavani, Sep 21, 2019, 1:08 PM IST
ಕನಕಪುರ: ಹಾಲು ಉತ್ಪಾದಕರಿಗಾಗಿ ಪ್ರತಿ ಲೀಟರ್ ಹಾಲಿಗೆ 1 ರೂ. ಹೆಚ್ಚಳ ಮಾಡ ಲಾಗಿದೆ ಎಂದು ಬಮೂಲ್ ನಿರ್ದೇಶಕ ಹರೀಶ್ ಕುಮಾರ್ ತಿಳಿಸಿದರು.
ತಾಲೂಕಿನ ಹೆಬ್ಬಿದರಮೆಟ್ಟಿಲು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಲೀಟರ್ ಹಾಲಿಗೆ 25 ರೂ. ನೀಡುತ್ತಿದೆ. ಲೀಟರ್‌ಗೆ 1 ರೂ. ಹೆಚ್ಚುವರಿ ನೀಡಲಾಗುತ್ತದೆ. ರೈತರು ಆರ್ಥಿಕ ಅಭಿವೃದ್ಧಿಗೆ ಒಕ್ಕೂಟ ಎಲ್ಲಾ ರೀತಿಯ ಪ್ರೋತ್ಸಾಹವನ್ನು ನೀಡುತ್ತದೆ. ಅಕಾಲಿಕ ಮರಣ ಹೊಂದಿದ ರೈತ ಕುಟುಂಬಕ್ಕೆ ಒಕ್ಕೂಟದಿಂದ 1 ಲಕ್ಷ ರೂ. ಸಹಾಯಧನ ನೀಡಲಾಗುವುದು. ಹಾಲು ಉತ್ಪಾದಕರ ಕುಟುಂಬದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ ಎಂದರು.
ಡೇರಿಗೆ ಲಾಭ: ಡೇರಿ ಸಿಇಒ ಎಚ್.ಇ. ಪ್ರಕಾಶ್ ಮಾತನಾಡಿ, ನಮ್ಮ ಡೇರಿಗೆ 13,09,914 ರೂ. ಲಾಭ ಬಂದಿದೆ. ನಿತ್ಯ 1500 ಲೀಟರ್ ಹಾಲು ಉತ್ಪಾದನೆಯಾಗುತ್ತದೆ. ನಿವ್ವಳ ಲಾಭ 6,37,831 ರೂ. ಬಂದಿದ್ದು, ಹಾಲು ಉತ್ಪಾದಕರಿಗೆ ಬೋನಸ್ ರೂಪದಲ್ಲಿ 3,03,885 ರೂ. ನೀಡಲಾಗುವುದು. ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲಾಗಿದೆ. ಇದನ್ನು ಮುಂದುವರಿಸ ಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಡೇರಿ ಅಧ್ಯಕ್ಷ ಮಾದೇಗೌಡ, ಉಪಾಧ್ಯಕ್ಷ ಶ್ರೀನಿವಾಸ್, ನಿರ್ದೇಶಕರಾದ ಎಚ್.ಕೆ.ನಾರಾಯಣಪ್ಪ, ಚಿಕ್ಕಮರೀಗೌಡ, ಕೃಷ್ಣಪ್ಪ, ಈರೇಗೌಡ, ಮಹದೇವ, ರತ್ನಮ್ಮ, ನಾಗಮ್ಮ, ಕೃಷ್ಣಪ್ಪ, ಹಾಲು ಪರೀಕ್ಷಕ ರಾಮಕೃಷ್ಣ, ಸಹಾಯಕ ಶಿವಕುಮಾರ್, ಶುಚಿಗಾರ ಕರಿಯಪ್ಪ, ಮುಖಂಡ ಚನ್ನೇಗೌಡ, ರಾಜು, ಪುಟ್ಟಸ್ವಾಮಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
Ramanagara: ಕಾಡಾನೆ ದಾಳಿಗೆ ರೈತ ಬಲಿ
Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.