ಬೆಳಗಾವಿ ದಕ್ಷಿಣ-ಉತ್ತರದ ಕ್ಷೇತ್ರಗಳಲ್ಲಿ ಸ್ಮಾರ್ಟ್ ಕ್ಲಾಸ್ ರೂಂ
Team Udayavani, Sep 21, 2019, 3:20 PM IST
ಬೆಳಗಾವಿ: ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ 11 ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ರೂಂಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದ್ದು, ಮೊದಲನೇ ಹಂತದಲ್ಲಿ ಬೆಳಗಾವಿ ದಕ್ಷಿಣ ಮತ್ತು ಉತ್ತರದ ಕ್ಷೇತ್ರಗಳಲ್ಲಿ 8 ತರಗತಿ ಕೊಠಡಿಗಳನ್ನು ಸ್ಮಾರ್ಟ್ ಕ್ಲಾಸ್ ರೂಂಗಳನ್ನಾಗಿ ಪರಿವರ್ತಿಸಲಾಗಿದೆ.
ಬೇಡಿಕೆಯ ಆಧಾರದ ಮೇಲೆ ಇನ್ನೂ ಮೂರು ಶಾಲೆಗಳಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ. ಇದಲ್ಲದೆ ಸ್ಮಾರ್ಟ್ ಸಿಟಿ ಯೋಜನೆಯಡಿ 20 ಗಣಕಯಂತ್ರಗಳು, ಪಿಠೊಪಕರಣಗಳು ಮತ್ತು ಒಂದು ಇ ಲೈಬ್ರರಿಯನ್ನು ಒದಗಿಸಲಾಗಿದೆ. ಎರಡನೇ ಹಂತದ ಕಾಮಗಾರಿಗಳು ಒಂದು ವಾರದಲ್ಲಿ ಸಂಪೂರ್ಣಗೊಳ್ಳಲಿವೆ ಎಂದು ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ಹಿರಿಯ ಸಾಮಾಜಿಕ ಅಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.
ಈ ಶಾಲೆಗಳನ್ನು ವಿದ್ಯಾರ್ಥಿಗಳ ಸಂಖ್ಯಾ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ. ವಿದ್ಯಾರ್ಥಿಗಳು ಈ ಸ್ಮಾರ್ಟ ತರಗತಿ ಕೊಠಡಿಯ ಲಾಭವನ್ನು ಪಡೆಯಬೇಕು . ಈ ಸ್ಮಾರ್ಟ್ ತರಗತಿ ಕೊಠಡಿಯಿರುವ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಏರಿಕೆಯಾಗಿದೆ ಎಂದು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೊದಲನೇ ಹಂತದಲ್ಲಿ ಚಿಂತಾಮಣರಾವ್ ಶಾಲೆ ಶಹಾಪುರ, ಕನ್ನಡ ಹಿರಿಯ ಪ್ರಾಥಮಿಕ ಶಾಲೆ ವಡಗಾಂವ, ಕನ್ನಡ ಹಿರಿಯ ಪ್ರಾ.ಶಾಲೆ ಭಾರತನಗರ ಖಾಸಭಾಗ, ಸರ್ದಾರ ಹೆ„ಸ್ಕೂಲ ಚವಾಟಗಲ್ಲಿ, ಖಾಸಭಾಗ, ಮಹಾಂತೇಶ ನಗರ, ವಡಗಾಂವಿ, ಹಳೆ ಬೆಳಗಾವಿ ಶಾಲೆಗಳು ಸ್ಮಾರ್ಟ್ ಕ್ಲಾಸ್ರೂಂ ಗಳನ್ನು ಹೊಂದಿವೆ. ಎರಡನೇ ಹಂತದಲ್ಲಿ ವಂಟಮೂರಿ, ಉರ್ದು ಶಾಲೆ ಖಂಜರಗಲ್ಲಿ, ಸರ್ಕಾರಿ ಶಾಲೆ ವಿಶ್ವೇಶ್ವರಯ್ನಾ ನಗರ ಶಾಲೆಗಳು ಸ್ಮಾರ್ಟಕ್ಲಾಸ್ರೂಂ ಗಳನ್ನು ಹೊಂದಲಿವೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ
UV Fusion: ಕರ್ನಾಟಕ: ನಮ್ಮೆಲ್ಲರ ಉಸಿರಾಗಲಿ ಕನ್ನಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.