ಮಾಲಿನ್ಯ ಮಂಡಳಿಗೆ ಸುಧಾಕರ್‌ ರಾಜೀನಾಮೆ


Team Udayavani, Sep 22, 2019, 3:00 AM IST

malinya

ಚಿಕ್ಕಬಳ್ಳಾಪುರ: ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಕ್ಷೇತ್ರದ ಅನರ್ಹ ಶಾಸಕ, ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಾ.ಕೆ.ಸುಧಾಕರ್‌, ದಿಢೀರನೇ ಹುದ್ದೆ ತೊರೆದಿರುವುದು ಕುತೂಹಲ ಕೆರಳಿಸಿದೆ.

ಕ್ಷೇತ್ರದಲ್ಲಿ ಶನಿವಾರ ನಡೆದ ಪಿಕಾರ್ಡ್‌ ಬ್ಯಾಂಕ್‌ನ ವಾರ್ಷಿಕ ಸರ್ವರ ಸಭೆಯಲ್ಲಿ ಭಾಗವಹಿಸಿದ್ದ ಸುಧಾಕರ್‌, ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪರನ್ನು ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಸಂಜೆ 4 ಗಂಟೆ ಭೇಟಿಯಾಗಿ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಕಾಂಗ್ರೆಸ್‌ ಶಾಸಕರಾಗಿದ್ದ ಡಾ.ಕೆ.ಸುಧಾಕರ್‌, ಹಿಂದಿನ ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ಸಚಿವರಾಗಲು ಸಾಕಷ್ಟು ಹೋರಾಟ ನಡೆಸಿದ್ದರು. ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲಾಗದೇ ಪಕ್ಷದ ವಿರುದ್ಧ ಹಾಗೂ ಸಿಎಂ ಆಗಿದ್ದ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ತೀವ್ರ ಟೀಕಾ ಪ್ರಹಾರ ನಡೆಸಿದ್ದರು. ನಿಗಮ ಮಂಡಳಿ ಹುದ್ದೆಯನ್ನು ಪುಟಗೋಸಿಗೆ ಸಹ ಹೋಲಿಸಿದ್ದರು.

ಆದರೆ ಮೈತ್ರಿ ಸರ್ಕಾರದಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯನವರ ಒತ್ತಡಕ್ಕೆ ಮಣಿದು ಕುಮಾರಸ್ವಾಮಿ ಅವರು ಸುಧಾಕರ್‌ರನ್ನು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದರು. ಕಳೆದ ನಾಲ್ಕೈದು ತಿಂಗಳಿಂದ ರಾಜ್ಯ ಸೇರಿದಂತೆ ಜಿಲ್ಲೆಯ ವಿವಿಧೆಡೆಗಳಲ್ಲಿ ಪ್ರವಾಸ ಮಾಡಿ ಮಾಲಿನ್ಯ ನಿಯಂತ್ರಣದ ಬಗ್ಗೆ ಕೆಲಸ ಮಾಡುತ್ತಿದ್ದರು. ಆದರೆ ಶನಿವಾರ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಸುಧಾಕರ್‌ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜೀನಾಮೆಗೆ ಆಗ್ರಹಿಸಿದ್ದ ಕೈ ನಾಯಕರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸುಧಾಕರ್‌, ಮೈತ್ರಿ ಸರ್ಕಾರ ನೇಮಿಸಿದ್ದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುತ್ತಿದ್ದಕ್ಕೆ ಜಿಲ್ಲೆಯ ಕಾಂಗ್ರೆಸ್‌ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಮಂಡಳಿಗೆ ರಾಜೀನಾಮೆ ಕೊಡಲಿ. ಬೇಕಾದರೆ ಬಿಜೆಪಿಯಿಂದ ಮರು ನೇಮಕವಾಗಲಿ ಎಂದು ವ್ಯಂಗ್ಯವಾಡಿದ್ದರು.

ಕಾನೂನು ಬಾಹಿರ ಎಂದಿದ್ದ ಹೈಕೋರ್ಟ್‌: ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಡಾ.ಕೆ.ಸುಧಾಕರ್‌ ನೇಮಕದ ವಿರುದ್ದ ಚಿಕ್ಕಬಳ್ಳಾಪುರದ ನಾಯನಹಳ್ಳಿ ನಿವಾಸಿ ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಆರ್‌.ಆಂಜನೇಯರೆಡ್ಡಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಈ ಬಗ್ಗೆ ಇತ್ತೀಚೆಗೆ ಕೋರ್ಟ್‌ ಸುಧಾಕರ್‌ ನೇಮಕ ಕಾನೂನು ಬಾಹಿರ ಎಂದು ಅಭಿಪ್ರಾಯ ಪಟ್ಟು ಈ ಬಗ್ಗೆ ಸರ್ಕಾರಕ್ಕೆ ನೋಟಿಸ್‌ ನೀಡಿತ್ತು. ಜೊತೆಗೆ ಮುಂದಿನ ವಿಚಾರಣೆಯನ್ನು ಸೆ.23ಕ್ಕೆ ನಿಗದಿ ಮಾಡಿತ್ತು. ಕೋರ್ಟ್‌ನಲ್ಲಿ ತಮಗೆ ಏನಾದರೂ ಹಿನ್ನಡೆ ಆಗುತ್ತಾ ಎಂಬುದನ್ನು ಅರಿತು ಸುಧಾಕರ್‌ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹುದ್ದೆ ತೊರೆದರಾ ಎಂಬ ಬಗ್ಗೆಯು ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಟಾಪ್ ನ್ಯೂಸ್

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

2

Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.