ಕೋಟ ಕಲ್ಮಾಡಿ: ಪಿಡಿಒ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್
Team Udayavani, Sep 22, 2019, 4:00 AM IST
ಕೋಟ: ಕೋಟತಟ್ಟು ಕಲ್ಮಾಡಿ ನಿವಾಸಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಾರ್ವತಿ ಮೊಗವೀರ ಅವರ ಮನೆಯಲ್ಲಿ ಶನಿವಾರ ನಸುಕಿನ ಜಾವ 4 ಗಂಟೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಅಪಾರ ಹಾನಿ ಸಂಭವಿಸಿದೆ.
ಅಡುಗೆ ಮನೆಯಲ್ಲಿ ಘಟನೆ ಸಂಭವಿಸಿದ್ದು, ಫ್ರಿಜ್, ಗ್ರೈಂಡರ್, ಮಿಕ್ಸಿ, ಫ್ಯಾನ್, ವಾಷಿಂಗ್ ಮೆಷಿನ್, ಕಪಾಟು ಮುಂತಾದ ವಸ್ತುಗಳು ಸುಟ್ಟು ಕರಕಲಾಗಿದೆ. ಸುಮಾರು 5ರಿಂದ 6 ಲ. ರೂ. ನಷ್ಟ ಅಂದಾಜಿಸಲಾಗಿದೆ.
ತಪ್ಪಿದ ಭಾರೀ ದುರಂತ: ದುರಂತ ಸಂಭವಿಸುವಾಗ ಎಲ್ಲರೂ ನಿದ್ರಿಸುತ್ತಿದ್ದರು. ಅಡುಗೆ ಕೋಣೆಯಿಂಂದ ವಾಸನೆ, ಹೊಗೆ ಬರುತ್ತಿರುವುದನ್ನು ಪಕ್ಕದ ಮನೆಯವರು ಗಮನಿಸಿ ಮನೆ ಮಂದಿಯನ್ನು ಎಚ್ಚರಿಸಿದರು. ಅಡುಗೆ ಮನೆಯ ಬಾಗಿಲು ಮುಚ್ಚಿದ್ದರಿಂದ ಬೆಂಕಿಯ ಕೆನ್ನಾಲಿಗೆ ಇತರೆಡೆ ವ್ಯಾಪಿಸದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ.
ಅಧಿಕಾರಿಗಳ ಭೇಟಿ: ಸ್ಥಳಕ್ಕೆ ಕೋಟ ಠಾಣಾಧಿಕಾರಿ ನಿತ್ಯಾನಂದ ಗೌಡ, ಮೆಸ್ಕಾಂ ಎ. ಡಬ್ಲೂ. ಪ್ರತಾಪ್ ಶೆಟ್ಟಿ, ಮೆಸ್ಕಾಂನ ಕೋಟ ಶಾಖಾಧಿಕಾರಿ ಗುರುಪ್ರಸಾದ್, ಅಗ್ನಿಶಾಮಕ ದಳದವರು ಭೇಟಿ ನೀಡಿದರು. ಬೆಂಕಿ ನಂದಿಸಲು ಸ್ಥಳೀಯರು ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.