ಉಪ ಸಮರ: ಲಖನ್ ಸ್ಪರ್ಧೆಯ ಸುಳಿವು ನೀಡಿದ ರಮೇಶ್ ಜಾರಕಿಹೊಳಿ
Team Udayavani, Sep 22, 2019, 9:26 AM IST
ಬೆಳಗಾವಿ: ಸಹೋದರ ಲಖನ್ ಜಾರಕಿಹೊಳಿಗೆ ಒಳ್ಳೆಯದಾಗಲಿ. ಅವನು ಸತೀಶ್ ಜಾರಕಿಹೊಳಿ ಜೊತೆಗೆ ಸೇರಿ ಹಾಳಾಗುವುದು ಬೇಡ. ಲಖನ್ ಶಾಸಕ ಆದ್ರೆ ಮೊದಲು ಸಂತೋಷ ನಾನು ಪಡುತ್ತೇನೆ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಈ ಮೂಲಕ ಉಪಚುನಾವಣೆಯಲ್ಲಿ ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿಯಿಂದ ಲಖನ್ ಅವರನ್ನು ಕಣಕ್ಕಿಳಿಸುವ ಸುಳಿವು ನೀಡಿದ್ದಾರೆ.
ಗೋಕಾಕ್ ನಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, ಗೋಕಾಕ್ ಕ್ಷೇತ್ರದ ಜನರಿಗೆ ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಮಾಡುತ್ತಿದ್ದಾರೆ ಅಂತಾ ಗೊತ್ತು. ಜನರು ಸತೀಶ್ ಗೆ ಯಾವಾಗ ಬುದ್ದಿ ಕಲಿಸಬೇಕು ಕಲಿಸುತ್ತಾರೆ. ಸತೀಶ್ ವಿರೋಧ ಮಾಡಿದಷ್ಟು ನನಗೆ ಒಳ್ಳೆಯದಾಗುತ್ತೆ ಎಂದರು.
ಅತೀ ಶೀಘ್ರದಲ್ಲಿ ನನ್ನ ಮುಂದಿನ ನಡೆ ಬಗ್ಗೆ ತಿಳಿಸುತ್ತೇನೆ ಎಂದಿರುವ ರಮೇಶ್, ಮತದಾರರು ಯಾರು ಸಂಶಯ ಮತ್ತು ಡೈವರ್ಟ್ ಆಗೊದು ಬೇಡ. ಅಂಬಿರಾವ್ ಪಾಟೀಲ್ ಕಳೆದ ಮೂವತ್ತು ವರ್ಷಗಳಿಂದ ಗೋಕಾಕ್ ನಲ್ಲಿ ಬಂದುಳಿದಿದ್ದಾನೆ. ಯಾವುದೇ ಕೇಸ್ ಬಂದರು ಕೋರ್ಟ್ ಕಳುಹಿಸದೆ ಇಲ್ಲೇ ಮುಗಿಸಿ ಕಳುಹಿಸುತ್ತಾರೆ. ಬಡ ಜನರಿಗೆ ಈ ಮೂಲಕ ಅನುಕೂಲ ಮಾಡುತ್ತಿದ್ದಾನೆ. ಸತೀಶ್ ಕ್ಷೇತ್ರದಲ್ಲಿ ಪಿಎಗಳ ಹಾವಳಿ ಇದೆ. ಅಂಬಿರಾವ್ ಪಾಟೀಲ್ ಕ್ಷೇತ್ರದ ಜನರ ಪ್ರೀತಿ ವಿಶ್ವಾಸ ಗಳಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಅಂಬಿರಾವ್ ಪಾಟೀಲ್ ವಿರುದ್ಧ ಯಾರಾದರೂ ತಪ್ಪಾಗಿ ಹೇಳಿದ್ರೆ ಇಂದೇ ಆತನ ತೆಗೆಯುತ್ತೇನೆ. ಸತೀಶ್ ನಮ್ಮ ಕ್ಷೇತ್ರ ಸುತ್ತಿ ಮುಜುಗರವಾಗಿ ಮಾತನಾಡುತ್ತಿದ್ದಾರೆ. ಇಂತಹ ಮಾತುಗಳಿಗೆ ಕ್ಷೇತ್ರದ ಜನರು ಕಿವಿಗೊಡಬಾರದು ಎಂದು ಅಂಬಿರಾವ್ ಪಾಟೀಲ್ ವಿರುದ್ಧ ಸತೀಶ್ ಜಾರಕಿಹೊಳಿ ಆರೋಪ ವಿಚಾರವಾಗಿ ರಮೇಶ್ ಜಾರಕಿಹೊಳಿ ಉತ್ತರಿಸಿದರು.
ನಾನು ರಾಜೀನಾಮೆ ಕೊಟ್ಟ ದಿನವೇ ಚುನಾವಣೆಗೆ ಸ್ಪರ್ಧೆ ಮಾಡಲು ಮಾನಸಿಕವಾಗಿ ಸಿದ್ದನಾಗಿದ್ದೇನೆ. ಕಾನೂನು ಅಡಚಣೆ, ತಾಂತ್ರಿಕ ಸಮಸ್ಯೆ ಬಗ್ಗೆ ವಕೀಲರೊಂದಿಗೆ ಚರ್ಚೆ ಮಾಡುತ್ತೇವೆ. ಅನರ್ಹರು ಚುನಾವಣೆಗೆ ಸ್ಪರ್ಧಿಸಲು ಬರುವುದಿಲ್ಲ ಅಂತಾ ಮುಖ್ಯ ಚುನಾವಣಾ ಅಧಿಕಾರಿ ಸ್ಪೀಕರ್ ಅವರ ಆದೇಶ ಓದಿ ಹೇಳಿದ್ದಾರೆ. ಸ್ಪೀಕರ್ ರಮೇಶ್ ಕುಮಾರ್ ಆದೇಶ ಸುಪ್ರೀಂ ಕೋರ್ಟ್ ನಲ್ಲಿ ಒಂದು ತಾಸು ನಿಲ್ಲುವುದಿಲ್ಲ. ರಮೇಶ್ ಕುಮಾರ್ ಕಾನೂನು ಬಾಹಿರವಾಗಿ ಆದೇಶ ಮಾಡಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು.
ನೂರಕ್ಕೆ ನೂರರಷ್ಟು ಸುಪ್ರೀಂ ಕೋರ್ಟ್ ನಲ್ಲಿ ನಮಗೆ ಜಯ ಸಿಗುತ್ತೆ. ನಮ್ಮ ಕ್ಷೇತ್ರದಲ್ಲಿ ನಾವೇ ಸ್ಪರ್ಧೆ ಮಾಡುತ್ತೇವೆ. ಯಾವ ಪಕ್ಷದಿಂದ ಸ್ಪರ್ಧೆ ಮಾಡಬೇಕು ಅಂತಾ ತೀರ್ಮಾನ ಮಾಡಿಲ್ಲ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Pushpa 2: ಕಿಸಿಕ್ ಎಂದು ಕುಣಿದ ಶ್ರೀಲೀಲಾ
ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.