101 ಜನರಿಗೆ ಡೆಂಘೀ: ಹೆಚ್ಚುತ್ತಿದೆ ರೋಗಿಗಳ ಸಂಖ್ಯೆ
Team Udayavani, Sep 22, 2019, 9:46 AM IST
ಬಾಗಲಕೋಟೆ: ಕಳೆದ ತಿಂಗಳ ಮೂರು ನದಿಗಳ ಪ್ರವಾಹದಿಂದ ತತ್ತರಿಸಿದ ಜಿಲ್ಲೆಯ ಜನರು ಈಗ ಡೆಂಘೀ ಜ್ವರ ಉಲ್ಬಣಗೊಂಡಿರುವುದರಿಂದ ಮತ್ತೇ ಆತಂಕಕ್ಕೆ ಒಳಗಾಗಿದ್ದಾರೆ.ಜಿಲ್ಲೆಯಲ್ಲಿ ಈಗಾಗಲೇ 830 ಜನರು ಡೆಂಘೀ ಜ್ವರದಿಂದ ಬಳುತ್ತಿರುವ ಸಂಶಯ ವ್ಯಕ್ತಪಡಿಸಲಾಗಿದ್ದು, ಅದರಲ್ಲಿ ಈಗ 101 ಜನರಲ್ಲಿ ಡೆಂಘೀ ಜ್ವರ ಇದೆ ಎಂದು ಖಚಿತಪಡಿಸಲಾಗಿದೆ.
ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ ಸೆಪ್ಟೆಂಬರ್‌ನಲ್ಲಿ 8 ರಿಂದ 10 ರೋಗಿಗಳು ಡೆಂಘೀ ಜ್ವರ ಸಂಶಯದ ಮೇಲೆ ದಾಖಲಾಗಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ ಮೂರು ಜನರು ಚಿಕಿತ್ಸೆ ಪಡೆದಿದ್ದಾರೆ. ಆಲ್ಲದೇ ಮೂವರು ಕಲೆ ದಿನಗಳ ಹಿಂದೆ ಡೆಂಘೀ ಜ್ವರದ ಚಿಕಿತ್ಸೆ ಪಡೆದುಕೊಂಡು ಹೋಗಿದ್ದಾರೆ. ಬಾಗಲಕೋಟೆ ತಾಲೂಕಿನ ಬೀಳಗಿ ಮತಕ್ಷೇತ್ರದ ಸಿಂದಗಿ ಪುನರ್‌ವಸತಿ ಕೇಂದ್ರದಲ್ಲಿ 10 ರಿಂದ 15 ಜನರಲ್ಲಿ ಡೆಂಘೀ ರೋಗ ಲಕ್ಷಣಗಳಿತ್ತು. ಈಗ ಈ ಗ್ರಾಮದ ಜನರು ಭಯಗೊಂಡಿದ್ದಾರೆ ಎನ್ನಲಾಗಿದೆ. ಒಂದು ತಿಂಗಳಲ್ಲಿ ಡೆಂಘೀ ಜ್ವರದಿಂದ ಬಳಲುವ ರೋಗಿಗಳ ಹೆಚ್ಚಾಗುತ್ತಿದ್ದಾರೆ ಎನ್ನಲಾಗಿದೆ.
ನಮ್ಮ ಮನೆಯಲ್ಲಿ 5 ಜನರಿಗೆ ಡೆಂಘೀ ಜ್ವರ ಬಂದಿತ್ತು. ಇಬ್ಬರನ್ನು ಸರಕಾರಿ ಆಸ್ಪತ್ರೆ ಮತ್ತು ಮೂವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಜಿಲ್ಲಾ ಆಸ್ಪತ್ರೆಯಲ್ಲಿ 5 ದಿನಗಳ ನನ್ನ ಮಗ ಮತ್ತು ನಮ್ಮ ಚಿಕ್ಕಪ್ಪನ ಮಗಳನ್ನು ದಾಖಲು ಮಾಡಿದ್ದೇವು. ಆದರೆ ಸಮರ್ಪಕ ಚಿಕಿತ್ಸೆ ದೊರೆಯದ ಕಾರಣ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. –ಯಲ್ಲಪ್ಪ ಹಿರೇಮನಿ, ಸಿಂದಗಿ ಪುನರ್‌ವಸತಿ ಕೇಂದ್ರದ ನಿವಾಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.