ಉಪ ಚುನಾವಣೆಗೆ ಜಿಲ್ಲಾಡಳಿತ ತಾಲೀಮು
Team Udayavani, Sep 23, 2019, 3:00 AM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗುತ್ತಿದ್ದಂತೆ ನ್ಯಾಯ ಸಮ್ಮತ ಹಾಗೂ ಮುಕ್ತ ಚುನಾವಣೆ ನಡೆಸಲು ತಾಲೀಮು ಆರಂಭಿಸಿರುವ ಜಿಲ್ಲಾಡಳಿತ ರಜೆ ದಿನವಾದ ಭಾನುವಾರ ಸಹ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆದು ಚುನಾವಣೆ ಸಿದ್ಧತೆಗಳ ಕುರಿತು ಮಾರ್ಗದರ್ಶನ ನೀಡಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಪಂ ಸಭಾಂಗಣದಲ್ಲಿ ಮಧ್ಯಾಹ್ನ 3 ರಿಂದ 4 ಗಂಟೆ ವರೆಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿ, ಚುನಾವಣೆಗೆ ಬೇಕಾದ ತಯಾರಿ, ಚುನಾವಣಾ ನೀತಿ ಸಂಹಿತೆ ಅನುಷ್ಠಾನದ ಕುರಿತು ಚರ್ಚೆ ನಡೆಸಿ ಅಧಿಕಾರಿಗಳು ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದರು.
ನೀತಿ ಸಂಹಿತೆ ಉಲ್ಲಂಘಿಸಿದರೆ ಕ್ರಮ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಉಪಚುನಾವಣೆ 2019ರ ನೀತಿ ಸಂಹಿತೆಯು ಸೆ.21ರಿಂದ ಜಾರಿಯಾಗಿದ್ದು, ಕಟ್ಟುನಿಟ್ಟಾಗಿ ಅಧಿಕಾರಿಗಳು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಬೇಕು. ನೀತಿ ಸಂಹಿತೆ ಉಲ್ಲಂ ಸಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಇಡೀ ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಜಾರಿ ಮಾಡಲಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಚುನಾವಣಾ ಸಿದ್ಧತೆಯನ್ನು ಸಮರ್ಪಕವಾಗಿ ತಯಾರಿ ಮಾಡಿಕೊಳ್ಳಬೇಕು. ಈಗಾಗಲೇ ಎಲ್ಲಾ ಕಡೆ ಪೋಸ್ಟರ್, ಬ್ಯಾನರ್, ಫ್ಲೆಕ್ಸ್‌ಗಳನ್ನು ತೆರವುಗೊಳಿಸಲಾಗಿದೆ ಎಂದರು.
ಮೊಬೈಲ್ ಸ್ವಿಚ್ಡ್ಆಫ್ ಆಗಬಾರದು: ಅಧಿಕಾರಿಗಳು ತಮ್ಮ ಮೊಬೈಲ್‌ಪೋನ್‌ಗಳನ್ನು ಯಾವುದೇ ಕಾರಣಕ್ಕೂ ಸ್ವಿಚ್xಆಫ್ ಮಾಡಿಕೊಳ್ಳಬಾರದು. ಅನುಮತಿ ಇಲ್ಲದೇ ರಜೆ ತೆಗೆದುಕೊಳ್ಳಬಾರದು. ಉಪಚುನಾವಣೆಗೆ ಸಂಬಂಧಪಟ್ಟ ನೀಡುವ ಸೂಚನೆಗಳನ್ನು ಪಾಲಿಸಿ ವರದಿ ನೀಡಬೇಕೆಂದು ಸಭೆಯಲ್ಲಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಮತಗಟ್ಟೆ ಕೇಂದ್ರಗಳ ಮೂಲ ಸೌಕರ್ಯಗಳನ್ನು ಮುಂಚಿತವಾಗಿ ಅಧಿಕಾರಿಗಳು ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದರು. ಸಭೆಯಲ್ಲಿ ಜಿಪಂ ಸಿಇಒ ಬಿ.ಫೌಜಿಯಾ ತರನ್ನುಮ್ ಮಾತನಾಡಿ, ಮತದಾರರ ಜಾಗೃತಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಕ್ಷೇತ್ರದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಹಮ್ಮಿಕೊಳ್ಳಲಾಗುವುದು.
ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅರಿವು ಮೂಡಿಸುವ ಕಾರ್ಯಗಳಿಗೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಆರತಿ, ಉಪವಿಭಾಧಿಕಾರಿ ಎ.ಎನ್.ರಘನಂದನ್, ಡಿವೈಎಸ್‌ಪಿ ಪ್ರಭುಶಂಕರ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಉಪ ಚುನಾವಣೆ ಯಾರ್ಯಾರಿಗೆ ಯಾವ ಹೊಣೆ?: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯ ಎಂ.ಸಿ.ಸಿ. ನೋಡಲ್ ಅಧಿಕಾರಿ ಹಾಗೂ ಚುನಾವಣಾ ನೀತಿ ಸಂಹಿತೆಯ ನಿರ್ವಹಿಸುವ ಹೊಣೆಯನ್ನು ಜಿಪಂ ಸಿಇಒ ಬಿ. ಫೌಜಿಯಾ ತರನ್ನುಮ್ ಕಾರ್ಯನಿರ್ವಹಿಸಲಿದ್ದಾರೆ. ಇವಿಎಂಗಳ ನಿರ್ವಹಣೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕರು, ಸಾರಿಗೆ ನಿರ್ವಹಣೆ ಪ್ರಾದೇಶಿಕ ಸಾರಿಗೆ ಅಧಿಕಾರಿ, ಚುನಾವಣಾ ತರಬೇತಿ ನಿರ್ವಹಣೆ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಇಲಾಖೆ ಜಿಲ್ಲಾ ಅಧಿಕಾರಿಗಳು.
ಚುನಾವಣಾ ಸಮಗ್ರಗಳ ನಿರ್ವಹಣೆಗೆ ಜಿಲ್ಲಾಡಳಿತದ ಸಹಾಯಕರು, ಚುನಾವಣಾ ಖರ್ಚು-ವೆಚ್ಚ ನಿರ್ವಹಣೆಯನ್ನು ಮುಖ್ಯ ಲೆಕ್ಕಾಧಿಕಾರಿಗಳು, ಕಾನೂನು ಆದೇಶಕ್ಕೆ ಡಿವೈಎಸ್‌ಪಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಘೋಷಣೆಯಾಗಿರುವ ಉಪ ಚುನಾವಣೆಯನ್ನು ಯಾವುದೇ ಗೊಂದಲಗಳಿಗೆ ಅವಕಾಶ ಇಲ್ಲದೇ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಲಿದೆ. ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಜಿಲ್ಲಾದ್ಯಂತ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲಾಗುವುದು.
-ಆರ್.ಲತಾ, ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.