ಪೈಲ್ವಾನರ ಜೋಡಿ ಕಟ್ಟುವ ಕಾರ್ಯಕ್ಕೆ ಚಾಲನೆ
Team Udayavani, Sep 23, 2019, 3:04 AM IST
ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ನಡೆಯುವ ನಾಡ ಕುಸ್ತಿ ಪಂದ್ಯಾವಳಿಗೆ ಪೈಲ್ವಾನರ ಜೋಡಿ ಕಟ್ಟುವ ಕಾರ್ಯಕ್ಕೆ ಭಾನುವಾರ ಚಾಲನೆ ದೊರೆಯಿತು. ನಗರದ ವಸ್ತು ಪ್ರದರ್ಶನ ಆವರಣದಲ್ಲಿರುವ ಬಿ.ವಿ.ಕಾರಂತ ರಂಗಮಂದಿರದಲ್ಲಿ ನಡೆದ ಜೋಡಿ ಕಟ್ಟುವ ಕಾರ್ಯದಲ್ಲಿ ರಾಜ್ಯದ ವಿವಿಧ ಭಾಗಗಳಿಂದ 400ಕ್ಕೂ ಹೆಚ್ಚು ಪೈಲ್ವಾನರು ಭಾಗವಹಿಸಿದ್ದರು.
ಮೊದಲ ದಿನವಾದ ಭಾನುವಾರ ವಯೋಮಿತಿ ಮತ್ತು ತೂಕದ ಆಧಾರದ ಮೇಲೆ 120 ಜೋಡಿ ಪೈಲ್ವಾನರ ಜೋಡಿ ಕಟ್ಟಲಾಯಿತು. ಸುಮಾರು 200 ಜೋಡಿಗಳು ನಾಡ ಕುಸ್ತಿಯಲ್ಲಿ ಭಾಗವಹಿಸಲಿದ್ದು, ಉದ್ಘಾಟನೆ ಸಮಾರಂಭಕ್ಕೆ ಉತ್ತಮ 25 ಜೋಡಿಗಳನ್ನು ಆಯ್ಕೆ ಮಾಡಲು ಚಿಂತನೆ ನಡೆದಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ನೇತ್ರ ತಪಾಸಣಾ ಶಿಬಿರ: ಈ ಮಧ್ಯೆ, ದಸರಾ ಮಹೋತ್ಸವ ಅಂಗವಾಗಿ ಗಜಪಡೆಯೊಂದಿಗೆ ಅರಮನೆ ಆವರಣದಲ್ಲಿ ಬೀಡು ಬಿಟ್ಟಿರುವ ಮಾವುತರು, ಕಾವಾಡಿಗಳ ಕುಟುಂಬದ ಸದಸ್ಯರಿಗಾಗಿ ಭಾನುವಾರ ಉಚಿತವಾಗಿ ದಂತ ಹಾಗೂ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ನಡೆಯಿತು.
ಅನಿ ಫೌಂಡೇಷನ್‌ನ ವೈದ್ಯರಾದ ಡಾ.ಅನುಶ್ರೀ, ಡಾ.ನಿಸರ್ಗ, ಮಾವುತರು, ಕಾವಾಡಿಗಳು ಹಾಗೂ ಕುಟುಂಬದ ಸದಸ್ಯರಿಗೆ ದಂತ ತಪಾಸಣೆ ನಡೆಸಿ, ಅಗತ್ಯ ಉಳ್ಳವರಿಗೆ ಚಿಕಿತ್ಸೆ ನೀಡಿದರು. 60ಕ್ಕೂ ಹೆಚ್ಚು ಮಂದಿಗೆ ತಪಾಸಣೆ ಮಾಡಿ, ಎಲ್ಲರಿಗೂ ಉಚಿತವಾಗಿ ಟೂತ್ ಪೇಸ್ಟ್ ಹಾಗೂ ಬ್ರಶ್ ನೀಡಿದರು. ಪ್ರತಿದಿನ ಎರಡು ಬಾರಿ ಹಲ್ಲು ಉಜ್ಜುವ ವಿಧಾನವನ್ನು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
MUST WATCH
ಹೊಸ ಸೇರ್ಪಡೆ
Mangalore: ಪ್ರಯಾಣಿಕರಿಗಾಗಿ ಸಿಗ್ನಲ್‌ಗಳಲ್ಲೇ ಬಸ್ ನಿಲುಗಡೆ; ಅನಾಹುತಕ್ಕೆ ಎಡೆ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.