ಶಿವರಾಜ ಪಾಟೀಲರದ್ದು ವಿಭಿನ್ನ ವ್ಯಕ್ತಿತ್ವ
Team Udayavani, Sep 23, 2019, 10:22 AM IST
ಧಾರವಾಡ : ಶಿವರಾಜ ಪಾಟೀಲ ಅವರದ್ದು ವಿಭಿನ್ನ ವ್ಯಕ್ತಿತ್ವವಾಗಿದೆ. ನ್ಯಾಯಾಂಗದ ಜತೆಗೆ ಮಾನವೀಯ ಕಾರ್ಯಗಳಿಗೆ ಆದ್ಯತೆ ನೀಡಿರುವುದು ಎಲ್ಲರಿಗೂ ಮಾದರಿ. ಗುರುಗಳಿಗೆ ಗೌರವ ನೀಡುವ ವ್ಯಕ್ತಿ ಜೀವನದಲ್ಲಿ ಯಶಸ್ಸಿ ಗಳಿಸುತ್ತಾನೆ ಎಂಬುದಕ್ಕೆ ಇವರೇ ಸಾಕ್ಷಿಯಾಗಿದ್ದಾರೆ ಉತ್ಛ ನ್ಯಾಯಾಲಯ ನ್ಯಾಯಮೂರ್ತಿ ಕೆ. ನಟರಾಜನ್ ಹೇಳಿದರು.
ನ್ಯಾಯಮೂರ್ತಿ ಶಿವರಾಜ ಪಾಟೀಲ ಪ್ರತಿಷ್ಠಾನ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಆಶ್ರಯದಲ್ಲಿ ನಗರದ ಆಲೂರು ವೆಂಕಟರಾವ್ ಭವನದಲ್ಲಿ ರವಿವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ, ಪ್ರಶಸ್ತಿ ಪ್ರದಾನ, ಬಡ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವೈದ್ಯರಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ನ್ಯಾ|ಶಿವರಾಜ ಪಾಟೀಲ ಅವರಿಗೆ ವಿದ್ಯೆ ಕಲಿಸಿದ ಕುಷ್ಟಗಿ ತಾಲೂಕಿನ ಸಾಸ್ವಿಹಾಳ ಗ್ರಾಮದ ನಿವೃತ್ತ ಶಿಕ್ಷಕ ಶರಣಯ್ಯ ಹಿರೇಮಠ ಅವರಿಗೆ ಶಿವಶ್ರೀ ಪ್ರಶಸ್ತಿ, ಐವರು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸೇರಿದಂತೆ ಆರೋಗ್ಯ ತಪಾಸಣಾ ಉಚಿತ ಶಿಬಿರದಲ್ಲಿ ಭಾಗವಹಿಸಿದ್ದ 18 ವೈದ್ಯರನ್ನು ಸನ್ಮಾನಿಸಲಾಯಿತು.
ಶಿವಶ್ರೀ ಪ್ರಶಸ್ತಿ ಸ್ವೀಕರಿಸಿದ ಶರಣಯ್ಯ ಹಿರೇಮಠ ಮಾತನಾಡಿ, 75 ವರ್ಷಗಳ ಹಿಂದೆ ನನ್ನ ಶಿಷ್ಯನಾಗಿದ್ದ ಶಿವರಾಜ ಪಾಟೀಲ ಅವರು ಸರ್ವೋಚ್ಚ ನ್ಯಾಯಾಲಯ ನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಿಸಿದ್ದು ಹೆಮ್ಮೆ ತಂದಿದೆ. ನಾನು ಬಿತ್ತಿದ ಬೀಜ ಹೆಮ್ಮರವಾಗಿ ಬೆಳೆದು ಜನರಿಗೆ ಸಹಕಾರಿಯಾಗಿದ್ದು ನನ್ನ ಸೌಭಾಗ್ಯ. ಗುರು-ಶಿಷ್ಯರ ಸಂಬಂಧಕ್ಕೆ ಈ ಸಮಾರಂಭ ಸಾಕ್ಷಿಯಾಗಿದೆ ಎಂದು ಭಾವುಕರಾದರು.
ಸಾನಿಧ್ಯ ವಹಿಸಿದ್ದ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ಇಂದಿನ ದಿನಮಾನಗಳಲ್ಲಿ ಆಚಾರವಂತ ಶಿಕ್ಷಕರು ಸಿಗುವುದು ವಿರಳ. ಪ್ರತಿಷ್ಠಾನ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹ ನೀಡುವ ಜತೆಗೆ ಸಂಸ್ಕಾರವಂತ ಮಕ್ಕಳನ್ನೂ ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಲಿ ಎಂದರು.
ಅಧ್ಯಕ್ಷತೆ ವಹಿಸಿದ್ದ ನ್ಯಾಯಮೂರ್ತಿ ಶಿವರಾಜ ಪಾಟೀಲ ಮಾತನಾಡಿ, ಶಿಕ್ಷಕರ ಪ್ರಭಾವ ವಿದ್ಯಾರ್ಥಿಗಳ ಮೇಲಾಗಬೇಕಲ್ಲದೆ, ಸತತ ಪರಿಶ್ರಮ, ನಿರಂತರ ಪ್ರಯತ್ನದಿಂದ ವಿದ್ಯಾರ್ಥಿ ಜೀವನ ವಿಕಸನವಾಗಲು ಸಾಧ್ಯ. ಸಮಯ-ಮನುಷ್ಯ ಸಂಬಂಧಗಳಿಗೆ ಮಹತ್ವ ಕೊಡಬೇಕು. ಮಾನವೀಯ ಮೌಲ್ಯ ಮೈಗೂಡಿಸಿಕೊಂಡು ಆರೋಗ್ಯಪೂರ್ಣ ಜೀವನ ನಡೆಸುವುದೇ ನಿಜವಾದ ಬದುಕು ಎಂದರು.
ಉತ್ಛ ನ್ಯಾಯಾಲಯ ನ್ಯಾಯಮೂರ್ತಿ ಪಿ.ಜಿ.ಎಂ. ಪಾಟೀಲ, ಕೃಷಿ ವಿವಿ ಉಪ ಕುಲಪತಿ ಎಂ.ಬಿ. ಚಟ್ಟಿ, ಕಾನೂನು ವಿವಿ ಉಪ ಕುಲಪತಿ ಈಶ್ವರ ಭಟ್ ಮಾತನಾಡಿದರು. ಇಳಕಲ್‌ನ ಶ್ರೀ ಗುರುಮಹಾಂತ ಸ್ವಾಮೀಜಿ, ಜಿಲ್ಲಾ ನ್ಯಾಯಾಧೀಶ ಈಶಪ್ಪ ಭೂತೆ, ಹಿರಿಯ ಸಿವಿಲ್ ನ್ಯಾಯಾಧೀಶ ಆರ್. ಎಸ್. ಚಿನ್ನಣ್ಣವರ, ಜಿಪಂ ಸಿಇಒ ಡಾ|ಬಿ.ಸಿ.ಸತೀಶ ಸೇರಿದಂತೆ ನ್ಯಾಯಾಧೀಶರು, ವಕೀಲರು ಇದ್ದರು. ಶಿವರಾಜ ಪಾಟೀಲ ಪ್ರತಿಷ್ಠಾನದ ಅಧ್ಯಕ್ಷ ಶೇಖರಗೌಡ ಪಾಟೀಲ ಸ್ವಾಗತಿಸಿದರು. ಬಸವಪ್ರಭು ಹೊಸಕೇರಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Kasragodu: ನರ್ಸಿಂಗ್ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್ ತನಿಖೆ
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.