ವರ್ಷದಲ್ಲಿ ತಾಲೂಕಿಗೆ ನೀರು
15 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ
Team Udayavani, Sep 23, 2019, 12:27 PM IST
ಜಗಳೂರು: 15 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಸಂಸದ ಜಿ.ಎಂ. ಸಿದ್ದೇಶ್ವರ ಮತ್ತು ಶಾಸಕ ಎಸ್.ವಿ. ರಾಮಚಂದ್ರ ಭಾನುವಾರ ಗುದ್ದಲಿಪೂಜೆ ನೆರವೇರಿಸಿದರು.
ಭಾನುವಾರ ತಾಲೂಕಿನ ರಂಗಪುರ ಗ್ರಾಮದಲ್ಲಿ 2 ಕೋಟಿ ರೂ. ವೆಚ್ಚದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿದರು.
ರಾಜ್ಯದಲ್ಲಿಯೇ ಹಿಂದುಳಿದ ತಾಲೂಕು ಇದಾಗಿದ್ದು, ಕಳೆದ 70 ವರ್ಷಗಳಲ್ಲಿ ಬಹುತೇಕ ಕಾಲ ಬರಗಾಲಕ್ಕೆ ತುತ್ತಾಗಿದೆ. ಈ ಬಾರಿ ಬಿತ್ತಿದ ಬೆಳೆಗಳು ಕಾಳು ಕಟ್ಟುವ ಹಂತದಲ್ಲಿದ್ದು, ಮಳೆ ಇಲ್ಲದೇ ಫಸಲಿಗೆ ಬಂದ ಬೆಳೆ ಕೈಗೆ ಸಿಗದಂತಾಗುತ್ತಿದೆ ಎಂದರು.
ಸಿರಿಗೆರೆ ಶ್ರೀಗಳ ಕೃಪೆಯಿಂದ ತಾಲೂಕಿನ 53 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ 350 ಕೋಟಿ ರೂ ಬಿಡುಗಡೆಯಾಗಿದ್ದು, ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಯಡಿ 2.40 ಟಿಎಂಸಿ ನೀರು ಜಗಳೂರಿಗೆ ಮಂಜೂರಾಗಿದೆ. ಈ ಎರಡೂ ಕಾಮಗಾರಿಗಳಿಗೆ ಇನ್ನೆರಡು ತಿಂಗಳಲ್ಲಿ ಗುದ್ದಲಿ ಪೂಜೆ ನೆರವೇರಿಸಿ ಇನ್ನೊಂದು ವರ್ಷದಲ್ಲಿ ತಾಲೂಕಿನ ಕೆರೆಗಳಿಗೆ ನೀರು ಹರಿಸುತ್ತೇವೆ ಎಂದು ಹೇಳಿದರು.
ಶಾಸಕ ಎಸ್.ವಿ. ರಾಮಚಂದ್ರ ಮಾತನಾಡಿ, ಯಡಿಯೂರಪ್ಪ ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ ಮುಂಜೂರು ಮಾಡಿದ್ದರು. ಈಗ ಅವರೇ ಮತ್ತೆ ಮುಖ್ಯಮಂತ್ರಿಯಾಗಿ ತಾಲೂಕಿಗೆ 2.40 ಟಿ ಎಂ ಸಿ ನೀರು ಮುಂಜೂರು ಮಾಡಿದ್ದಲ್ಲದೇ ತಾಲೂಕಿನ 53 ಕೆರೆಗಳಿಗೆ ನೀರು ತುಂಬಿಸಲು ಅನುಮೋದನೆ ನೀಡಿ ಹಣ ಸಹ ಬಿಡುಗಡೆ ಮಾಡಿದ್ದಾರೆ ಎಂದರು.
ಪಟ್ಟಣದ ಯುಜಿಡಿ ಅಭಿವೃದ್ಧಿಗೆ 4 ಕೋಟಿ ರೂ. ಯೋಜನೆಗೆ ಅನುಮೊದನೆ ದೊರೆತಿದೆ ಎಂದರು. ನಾನು ಕೂಡ್ಲಿಗಿಗೆ ಹೊಗುವುದಿಲ್ಲ: ಭದ್ರಾ ಮೆಲ್ದಂಡೆ ನೀರಾವರಿ ಯೋಜನೆಯಡಿ ತಾಲೂಕಿಗೆ 1 ಟಿ ಎಂ ಸಿ ನೀರು ಸಾಕಾಗುತ್ತಿತ್ತು. ಆದರೆ ನಾನು ಮುಂದಿನ ಬಾರಿ ಕೂಡ್ಲಿಗಿ ಕ್ಷೇತ್ರಕ್ಕೆ ಹೋಗುವ ಯೋಚನೆಯಿಂದಲೇ 2.40 ಟಿ ಎಂ ಸಿ ನೀರು ಮುಂಜೂರು ಮಾಡಿಸಿದ್ದೇನೆ ಎಂದು ಕ್ಷೇತ್ರದ್ಯಾಂತ ಸುಳ್ಳು ಸುದ್ದಿಗಳನ್ನು ಹಬ್ಬಿಸಿದ್ದು, ಇದೆಲ್ಲ ಸತ್ಯಕ್ಕೆ ದೂರ. ನಾನು ಎಲ್ಲಿಗೂ ಹೋಗುವುದಿಲ್ಲ. ತಾಲೂಕಿನಲ್ಲಿಯೇ ಇರುತ್ತೇನೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಸ್ಪಷ್ಟನೆ
ನೀಡಿದರು.
ನಂತರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ರಸ್ತೆ ಕಾಮಗಾರಿಗಳಿಗೆ ಅವರು ಗುದ್ದಲಿಪೂಜೆ ನೆರವೇರಿಸಿದರು. ಬಿಜೆಪಿ ತಾಲೂಕು ಅಧ್ಯಕ್ಷ ನಾಗಪ್ಪ, ಜಿ.ಪಂ ಸದಸ್ಯ ಮಂಜುನಾಥ, ಲೋಕೋಪಯೋಗಿ ಇಲಾಖೆ ಎಇಇ ರುದ್ರಪ್ಪ, ಅಭಿಯಂತರರಾದ ಪ್ರಭು, ಪುರುಷೋತ್ತಮ, ರಾಮಚಂದ್ರ, ಮುಖಂಡರಾದ ಬಿಸ್ತುವಳ್ಳಿ ಬಾಬು, ಶೀನಪ್ಪ, ಪಲ್ಲಾಗಟ್ಟೆ ಮಹೇಶ್, ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ
Bengaluru: ಬೈಕ್ ಡಿಕ್ಕಿ: ರಾತ್ರಿಯಿಡೀ ರಸೇಲಿ ನರಳಿ ವ್ಯಕ್ತಿ ಸಾವು
Bengaluru: ಪಾದಚಾರಿ ಮಾರ್ಗದಲ್ಲಿ ಕಾರು ಚಾಲನೆ: ಕೇಸ್ ದಾಖಲು
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.