ಕಾಮಗಾರಿಗಳಿಂದ ಸಮಸ್ಯೆ ಸೃಷಿ
Team Udayavani, Sep 23, 2019, 4:09 PM IST
ತುಮಕೂರು: ನಗರದಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳಿಂದ ಅವಾಂತರಗಳು ಸೃಷ್ಟಿಯಾಗುತ್ತಿದ್ದು, ಇದರಿಂದ ನಾಗರಿಕರಿಗೆ ತೀವ್ರ ಸಮಸ್ಯೆಗಳು ಎದುರಾಗುತ್ತಿವೆ ಎಂದು 15ನೇ ವಾರ್ಡ್ ಪಾಲಿಕೆ ಸದಸ್ಯೆ ಗಿರಿಜಾ ಧನಿಯಾ ಕುಮಾರ್ ಆರೋಪಿಸಿದರು.
ನಗರದಲ್ಲಿ ಮಾಡಲಾಗುತ್ತಿರುವ ಗ್ಯಾಸ್ ಲೈನ್, 24 ಗಂಟೆಗಳ ಕುಡಿಯುವ ನೀರಿನ ಯೋಜನೆ ಹಾಗೂ ಯುಟಿಲಿಟಿ ಚೇಂಬರ್ ಗಳ ಕಾಮಗಾರಿಗಳು ಕಳಪೆಯಿಂದ ಕೂಡಿದ್ದು, ಇದರಿಂದ ಸ್ಥಳೀಯ ನಾಗರಿಕರಿಗೆ ತೊಂದರೆ ಗಳಾಗುತ್ತಿವೆ. ಚೇಂಬರ್‌ಗಳಿಗೆ ತೆಗೆದ ಹಳ್ಳಗಳಲ್ಲಿ ಮಣ್ಣು ಕುಸಿಯುತ್ತಿದ್ದು, ಇದರಿಂದ ಪ್ರತಿನಿತ್ಯ ಒಂದಲ್ಲಾ ಒಂದು ಕಡೆ ಕಾರು, ದ್ವಿಚಕ್ರ ವಾಹನಗಳು ಹಳ್ಳಗಳಲ್ಲಿ ಕುಸಿಯುತ್ತಿವೆ. ಈಬಗ್ಗೆ ಯಾರೂ ಗಮನ ಹರಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಮಗಾರಿ ಪ್ರಾರಂಭ ಮಾಡುವ ಮುನ್ನ ಕಾರ್ಯಾದೇಶ ಪತ್ರ ನೀಡಲಾಗುತ್ತದೆ. ಅದರಲ್ಲಿ ನಿರ್ದಿಷ್ಟ ಸಮಯ ನಿಗದಿ ಮಾಡಿರುತ್ತಾರೆ. ಆದರೆ ಇಲ್ಲಿ ಯಾವುದೇ ಕಾರ್ಯಾದೇಶ ಪತ್ರ ತೋರಿಸದೆ, ಕೆಲಸವೂ ಸಂಪೂರ್ಣವಾಗಿ ಮಾಡದೆ ಅರ್ಧಂಬರ್ದ ಮಾಡಿ ಬಿಡುತ್ತಿದ್ದಾರೆ. ಕಾನೂನು ಪ್ರಕಾರ ಯಾವುದೇ ಕಾಮಗಾರಿ ಮಾಡಿದ ನಂತರ ಅದನ್ನು ಯಥಾಸ್ಥಿತಿ ಮಾಡಬೇಕು ಎಂದು ಇದೆ. ಆದರೆ ಇಲ್ಲಿ ಮಾಡುತ್ತಿರುವ ಕಾಮಗಾರಿಗಳಿಂದ ನಿತ್ಯ ನರಕ ಅನುಭಸು ವಂತಾ ಗಿದೆ ಎಂದು ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.
ಇತ್ತೀಚೆಗೆ ಸಾರ್ವಜನಿಕರು ಪಾಲಿಕೆ ಸದಸ್ಯರ ಮೇಲೆ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಈ ಬಗ್ಗೆ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ತಿಳಿಸಿದರೂ ಪ್ರಯೋಜನವಾಗಿಲ್ಲ. ಹಳ್ಳಮುಚ್ಚಲು ಮುಂದಾದರೆ ಸ್ಮಾರ್ಟ್ ಸಿಟಿಯವರು ನಿಮಗೂ ಇದಕ್ಕೂ ಏನು ಸಂಬಂಧ ಎಂದು ಗದುರಿಸುತ್ತಾರೆ. ಸಮಸ್ಯೆಗಳ ಬಗ್ಗೆ ಯಾರಿಗೆ ಕೇಳಬೇಕು ಎಂದು ಪ್ರಶ್ನಿಸಿದರು. ಸ್ಮಾರ್ಟ್‌ಸಿಟಿ ಅಧಿಕಾರಿಗಳು ಕಾಮಗಾರಿ ಪರಿಶೀಲಿಸುತ್ತಿಲ್ಲ. ಕಾಮಗಾರಿಗಳು ನಡೆಯುತ್ತಿರುವ ಪ್ರದೇಶಗಳ ಪರಿಸ್ಥಿತಿ ಹೇಗಿದೆ ಎಂಬುದೂ ಗೊತ್ತಿಲ್ಲ. ಕಾಮಗಾರಿ ವೇಳೆ ಒಡೆಯುವ ಪೈಪು ಸರಿಪಡಿಸದೆ ಅದನ್ನು ರಬ್ಬರ್‌ಗಳಿಂದ ಮುಚ್ಚಿ ಬಿಟ್ಟುಬಿಡುತ್ತಾರೆ ಎಂದರು.
ಸ್ಮಾರ್ಟ್‌ಸಿಟಿ ಕಾಮಗಾರಿ ಮಾಡುವವರು ಗುಣಮಟ್ಟದಲ್ಲಿ ಪೂರ್ಣ ಮಾಡಬೇಕು. ಅದನ್ನು ಹೊರತುಪಡಿಸಿ ಕಾಲ ವ್ಯಯ ಮಾಡಬಾರದು. ಸಮಸ್ಯೆ ಉಂಟು ಮಾಡುತ್ತಿರುವ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.