ಮಗುವಿನ ಹುಟ್ಟುಹಬ್ಬಕ್ಕೆ “ಸುಕನ್ಯಾ ಸಮೃದ್ಧಿ’ ಯೋಜನೆ ಉಡುಗೊರೆ
Team Udayavani, Sep 24, 2019, 5:53 AM IST
ಕಟಪಾಡಿ: ಮರ್ಣೆ ಫ್ರೆಂಡ್ಸ್ ಮರ್ಣೆ ಅವರು ಮಗುವಿನ ಹುಟ್ಟು ಹಬ್ಬಕ್ಕೆ ಸುಕನ್ಯಾ ಸಮೃದ್ಧಿ ಯೋಜನೆಯನ್ನು ಉಡುಗೊರೆಯಾಗಿ ನೀಡುವ ಮೂಲಕ ಹುಟ್ಟುಹಬ್ಬವನ್ನು ಸಂಭ್ರಮಾಚರಿಸಿದ ವಿಶೇಷ ಘಟನೆ ನಡೆದಿದೆ.
ಸಾಮಾನ್ಯವಾಗಿ ಹುಟ್ಟುಹಬ್ಬಕ್ಕೆ ಗೊಂಬೆ, ಡ್ರೆಸ್, ಇನ್ನಿತರ ಆಟಿಕೆ ಸಾಮಗ್ರಿಗಳನ್ನು ಬಂದವರೆಲ್ಲ ಉಡುಗೊರೆ ನೀಡುವುದು ಸರ್ವೇಸಾಮಾನ್ಯವಾಗಿದೆ. ಆದರೆ ಇಲ್ಲಿ ಸಾನ್ವಿ ಮರ್ಣೆ ಎಂಬ ಮಗುವಿನ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮರ್ಣೆ ಫ್ರೆಂಡ್ಸ್ನ ತಂಡದವರು ಸೇರಿ ವಿಶೇಷವಾದ ಉಡುಗೊರೆ ನೀಡಲು ನಿರ್ಧರಿಸಿತ್ತು.
ಆದರಂತೆ ಮರ್ಣೆ ಫ್ರೆಂಡ್ಸ್ ತಂಡದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಯಾದ ಸುಕನ್ಯಾ ಸಮೃದ್ಧಿ ಯೋಜನೆಯನ್ನು ಉಡುಪಿ ಪ್ರಧಾನ ಅಂಚೆ ಕಚೇರಿಯಲ್ಲಿ ಸಾನ್ವಿ ಹೆಸರಿನಲ್ಲಿ ಮಾಡಿ, ಅದರ ಮೊದಲ ಕಂತನ್ನು (ಒಂದು ಸಾವಿರ ರೂಪಾಯಿ)ಉಡುಗೊರೆಯಾಗಿ ಪಾವತಿಸಿ ಮಗುವಿನ ಹೆತ್ತವರಾದ ಜಯಾನಂದ ನಾಯ್ಕ, ಸಂಧ್ಯಾ ಜಯಾನಂದ ನಾಯ್ಕ ದಂಪತಿಗೆ ಸರ್ಟಿಫಿಕೇಟ್ ನೀಡುವ ಮೂಲಕ ಬಹಳಷ್ಟು ಅರ್ಥಪೂರ್ಣ ಮತ್ತು ಅತ್ಯಂತ ಅಮೂಲ್ಯವಾದ ಉಡುಗೊರೆ ಎಂದು ನೆರೆದ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು.ಈ ಯೋಜನೆಯನ್ನು ಹೆತ್ತವರು ಮುಂದುವರಿಸಿಕೊಂಡು ಹೋದರೆ ಮಗಳ ವಿದ್ಯಾಭ್ಯಾಸ ಮತ್ತು ಮದುವೆಯ ಸಂದರ್ಭದಲ್ಲಿ ಬಹಳಷ್ಟು ಉಪಯುಕ್ತವಾಗುತ್ತದೆ .ಆಗ ಹುಟ್ಟುಹಬ್ಬದ ಅಮೂಲ್ಯವಾದ ಉಡುಗೊರೆ ಅರ್ಥಪೂರ್ಣಗೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.