“ತೇಜಸ್ವಿ ಸಂತ್ರಸ್ತರ ಕಾಲು ಹಿಡಿದು ಕ್ಷಮೆ ಕೇಳಲಿ’
Team Udayavani, Sep 24, 2019, 3:00 AM IST
ವಿಜಯಪುರ: “ರಾಜ್ಯದ ನೆರೆ ಸಂತ್ರಸ್ತರ ಪರಿಹಾರ ವಿಷಯದಲ್ಲಿ ಹಗುರವಾಗಿ ಮಾತನಾಡಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಕ್ಷಣ ರಾಜ್ಯದ ನೆರೆ ಸಂತ್ರಸ್ತರ ಕಾಲಿಗೆ ಬಿದ್ದು ಕ್ಷಮೆ ಕೇಳಬೇಕು. ಇಲ್ಲದಿದ್ದರೇ ಸಂತ್ರಸ್ತರ ಆಕ್ರೋಶ ಎದುರಿಸಬೇಕಾಗುತ್ತದೆ’ ಎಂದು ಮಾಜಿ ಸಚಿವ ಎಚ್.ಕೆ. ಪಾಟೀಲ ಎಚ್ಚರಿಸಿದರು.
ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿ, “ಬೆಳಗಾವಿಯಲ್ಲಿ ಕುಳಿತು ಹೀಗೆ ಹೇಳುತ್ತಾರೆ, ದಿಲ್ಲಿಯಲ್ಲಿ ಹೇಗೆ ಹೇಳಿರಬೇಡ. ಇನ್ನು ಪ್ರಧಾನಿ ಮೋದಿ ಎದುರು ಏನು ಹೇಳಿರಬೇಕು? ಸಂತ್ರಸ್ತರಿಗೆ ಕೇಂದ್ರ ಸರ್ಕಾರದ ಅನುದಾನ ಬೇಕಿಲ್ಲ ಎಂದು ಹಗುರವಾಗಿ ಮಾತನಾಡಿದ್ದಾರೆ. ಸಂತ್ರಸ್ತರ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡಿರುವ ತೇಜಸ್ವಿ ಸೂರ್ಯ ಕನ್ನಡಿಗರಿಗೆ ಅಗೌರವ ತೋರಿದ್ದಾರೆ.
ಕರ್ನಾಟಕದ ಬಗ್ಗೆ ಎಷ್ಟು ಕಾಳಜಿ ಇದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದರು. ಕರ್ನಾಟಕ ನೆರೆ ಹಾವಳಿಗೆ ತತ್ತರಿದರೂ ಸಂತ್ರಸ್ತರ ಸಂಕಷ್ಟ ಕೇಳಲು ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡದಿರುವುದಕ್ಕೆ ತೇಜಸ್ವಿ ಸೂರ್ಯ ಅವರೇ ನೇರ ಕಾರಣ. ರಾಜ್ಯದ ಸ್ವಪಕ್ಷೀಯ ಸಂಸದ ನೆರೆ ಸಂತ್ರಸ್ತರ ಕುರಿತು ಪ್ರಧಾನಿ ಮೋದಿ ಅವರಿಗೆ ತಪ್ಪು ಮಾಹಿತಿ ನೀಡಿ ದಿಕ್ಕು ತಪ್ಪಿಸಿದ್ದಾರೆ. ಇದರಿಂದಾಗಿ ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.