ಐಎಂಎ: ಹೆಚ್ಚುವರಿ ಪೊಲೀಸ್‌ ಆಯುಕ್ತರ ವಿಚಾರಣೆ


Team Udayavani, Sep 24, 2019, 3:10 AM IST

hechcuvari

ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣ ಸಂಬಂಧ ಬೆಂಗಳೂರು ನಗರ ಪೊಲೀಸ್‌ ಆಯುಕ್ತರ ಕಚೇರಿ ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತ ಹೇಮಂತ್‌ ನಿಂಬಾಳ್ಕರ್‌ ಅವರನ್ನು ಭಾನುವಾರ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಗಂಗಾನಗರದಲ್ಲಿರುವ ಸಿಬಿಐ ಕಚೇರಿಗೆ ಆಗಮಿಸಿದ ಹೇಮಂತ್‌ ನಿಂಬಾಳ್ಕರ್‌ ಅವರನ್ನು ಸುಮಾರು ಮೂರುವರೆ ಗಂಟೆಗಳ ಕಾಲ ವಿಚಾರಣೆ ನಡೆಸಿದ್ದು, ಹೆಚ್ಚುವರಿ ವಿಚಾರಣೆ ಅಗತ್ಯವಿದ್ದು, ಮತ್ತೊಮ್ಮೆ ಕರೆದಾಗ ವಿಚಾರಣೆಗೆ ಬರುವಂತೆ ಸಿಬಿಐ ತನಿಖಾಧಿಕಾರಿಗಳು ಸೂಚಿರುವುದಾಗಿ ಮೂಲಗಳು ತಿಳಿಸಿವೆ.

ಐಎಂಎ ಸಮೂಹ ಸಂಸ್ಥೆಯ ಬಹುಕೋಟಿ ಹಗರಣ ಬೆಳಕಿಗೆ ಬರುವ ಮೊದಲೇ ಆ ಸಂಸ್ಥೆ ವಿರುದ್ಧ ಆರ್‌ಬಿಐ ಪ್ರಧಾನ ವ್ಯವಸ್ಥಾಪಕಿ ಕೆ.ಎಸ್‌. ಜೋಸ್ನಾ ಅವರು ನೀಡಿದ ದೂರಿನ ಆಧಾರದ ಮೇರೆಗೆ ತನಿಖೆ ನಡೆಸಿದ ಸಿಐಡಿಯ ಆರ್ಥಿಕ ಅಪರಾಧ ವಿಭಾಗಗಳ ಅಂದಿನ ಐಜಿಪಿ ಹೇಮಂತ್‌ ನಿಂಬಾಳ್ಕರ್‌ ಆರೋಪಿತ ಸಂಸ್ಥೆಯ ಪರವಾಗಿ ವರದಿ ನೀಡಿದ್ದರು. ತಮ್ಮ ಪರವಾಗಿ ವರದಿ ನೀಡಲು ಪ್ರಮುಖ ಆರೋಪಿ ಮನ್ಸೂರ್‌ ಖಾನ್‌ನಿಂದ ಲಂಚ ಪಡೆದಿದ್ದಾರೆ ಎಂಬ ಆರೋಪಗಳು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐ ವಿಚಾರಣೆ ನಡೆಸಿದೆ.

ಕೆ.ಎಸ್‌.ಜೋಸ್ನಾ ಅವರು 2017ರಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ, ಕಂದಾಯ ಇಲಾಖೆಗೆ ಪತ್ರ ಬರೆದು, ಐಎಂಎ ಸಮೂಹ ಸಂಸ್ಥೆಯು ನಿಯಮ ಮೀರಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದೆ. ಈ ಬಗ್ಗೆ ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ಪ್ರಕರಣವನ್ನು ಸಿಐಡಿಯ ಆರ್ಥಿಕ ಅಪರಾಧಗಳ ವಿಭಾಗದ ಐಜಿಪಿ ಹೇಮಂತ್‌ ನಿಂಬಾಳ್ಕರ್‌ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿತ್ತು. ತನಿಖೆ ನಡೆಸಿದ ಅಧಿಕಾರಿಗಳು, ದೂರುದಾರರು, ಮನ್ಸೂರ್‌ ಖಾನ್‌, ಕಂಪನಿಯ ಲೆಕ್ಕಪರಿಶೋಧಕರು ಸೇರಿದಂತೆ ಹತ್ತಾರು ಮಂದಿಯನ್ನು ವಿಚಾರಣೆ ನಡೆಸಿದ್ದರು.

ಈ ವೇಳೆ “ಕಂಪನಿಯು ಹಣಕಾಸಿನ ಸಂಸ್ಥೆಯಾಗಿರುವುದಿಲ್ಲ. ಹಣಕಾಸು ಸಂಸ್ಥೆಯಂದು ಯಾವುದೇ ಹೊಡಿಕೆದಾರರು ಹಣ ಹೂಡಿಕೆ ಮಾಡಿರುವುದಿಲ್ಲ. ಕಂಪನಿಯ ಸಾರ್ವಜನಿಕರನ್ನು ನಂಬಿಸಿ ಬಡ್ಡಿ, ಹೆಚ್ಚು ಲಾಭ ನೀಡುತ್ತೇನೆಂದು ಸಾರ್ವಜನಿಕರಿಂದ ಹಣವನ್ನು ಠೇವಣಿ ರೂಪದಲ್ಲಿ ಸಂಗ್ರಹಿಸಿ ಮೋಸ ಮಾಡಿರುವ ಬಗ್ಗೆ ಯಾವುದೇ ಪೂರಕ ಸಾಕ್ಷ್ಯಗಳು ಇಲ್ಲದ ಕಾರಣ ಮತ್ತು ಸಂಸ್ಥೆ ಹಾಗೂ

ಸಹಭಾಗಿತ್ವದ ಸಂಸ್ಥೆಗಳು ವರ್ಷವಾರು ಆದಾಯ ಇಲಾಖೆಗೆ ಸಲ್ಲಿಸಿದ ಅಯವ್ಯಯ ಮಾಹಿತಿ ದಾಖಲೆಗಳು ಹಾಗೂ ಕಂಪನಿಯ ಪಾಲುದಾರ ಹಾಗೂ ಮುಖ್ಯಸ್ಥ ಮನ್ಸೂರ್‌ ಖಾನ್‌ ವೈಯಕ್ತಿಕ ಅಯವ್ಯಯ 2011ರಿಂದ 2018ರವರೆಗೆ ಪರಿಶೀಲಿಸಲಾಗಿದೆ. ಅಲ್ಲಿಯೂ ಯಾವುದೇ ನ್ಯೂನ್ಯತೆಗಳು ವಿಚಾರಣೆ ವೇಳೆ ಕಂಡು ಬಂದಿಲ್ಲ. ಅಲ್ಲದೆ, ವೈಯಕ್ತಿಕವಾಗಿ ಠೇವಣಿ ನೀಡಿ ಮೋಸ ಹೋಗಿರುವುದಾಗಿ ಯಾರು ಹೇಳಿಕೆ ನೀಡಲು ಮುಂದೆ ಬಂದಿಲ್ಲ. ಹೀಗಾಗಿ ಕಂಪನಿಯ ವಿರುದ್ಧ ಯಾವುದೇ ಕಾನೂನು ಕ್ರಮಕೈಗೊಳ್ಳಲು ಸಾಧ್ಯವಿಲ್ಲ’ ಎಂದು ವರದಿ ನೀಡಿದ್ದರು.

ಈ ಸಂಬಂಧ ಭಾನುವಾರ ನಿಂಬಾಳ್ಕರ್‌ ಅವರನ್ನು ಸತತ ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿರುವ ಸಿಬಿಐ ಅಧಿಕಾರಿಗಳು, ಆರ್‌ಬಿಐ ಅಧಿಕಾರಿಗಳು ಆರೋಪಿತ ಸಂಸ್ಥೆ ವಿರುದ್ಧ ಗಂಭೀರ ಆರೋಪ ಮಾಡಿದರೂ ಸಂಸ್ಥೆ ಹಾಗೂ ಆರೋಪಿಗಳಿಗೆ ಕ್ಲೀನ್‌ಚೀಟ್‌ ಕೊಡಲು ಕಾರಣವೇನು? ತಮ್ಮ ವರದಿಯಲ್ಲಿ ಹಣಕಾಸಿನ ಸಂಸ್ಥೆಯಾಗಿರುವುದಿಲ್ಲ ಎಂದು ಉಲ್ಲೇಖೀಸಿದ್ದಿರಿ? ಆದರೆ, ಹಣಕಾಸಿನ ಸಂಸ್ಥೆ ಅಲ್ಲದಿದ್ದರೇ ಹೇಗೆ ಸಾವಿರಾರು ಮಂದಿಯಿಂದ ಸಾವಿರಾರು ಕೋಟಿ ರೂ. ಸಂಗ್ರಹ ಮಾಡುತ್ತಾರೆ? ವಂಚನೆ ಬಗ್ಗೆ ಯಾವುದೇ ಸೂಕ್ತ ಸಾಕ್ಷ್ಯಗಳು ಇಲ್ಲ ಎಂದು ಹೇಳುತ್ತಿರಿ?

ಹಾಗಾದರೆ ಯಾವ ಉದ್ದೇಶಕ್ಕೆ ಸಂಸ್ಥೆ ಸಾರ್ವಜನಿಕರಿಂದ ಹಣ ಸಂಗ್ರಹ ಮಾಡುತ್ತಿತ್ತು? ನಂತರ ಅದನ್ನು ಹೇಗೆ ಹಿಂದಿರುಗಿಸುತ್ತಿತ್ತು? ಎಂಬುದು ತಮ್ಮ ತನಿಖೆಯಿಂದ ತಿಳಿದು ಬಂದಿರಲಿಲ್ಲವೇ?, ವಂಚಕ ಸಂಸ್ಥೆಯಲ್ಲಿ ನ್ಯೂನ್ಯತೆಗಳಿಲ್ಲ ಎನ್ನುವುದಾದರೇ ಇಷ್ಟೊಂದು ದೊಡ್ಡ ಮಟ್ಟದಲ್ಲಿ ವಂಚನೆ ಆಗಲು ಹೇಗೆ ಸಾಧ್ಯ? ಸಂಸ್ಥೆಯ ಪರವಾಗಿ ವರದಿ ನೀಡಲು ಲಂಚ ಪಡೆದಿದ್ದಿರಾ ಎಂಬ ಆರೋಪ ಕುರಿತ ಪ್ರತಿಕ್ರಿಯೆ ಏನು? ಸೇರಿದಂತೆ ಸುಮಾರು 25ಕ್ಕೂ ಅಧಿಕ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಐಪಿಎಸ್‌ ಅಧಿಕಾರಿ ಅಜಯ್‌ ಹಿಲೋರಿ ವಿಚಾರಣೆ ಸಾಧ್ಯತೆ: ಈ ನಡುವೆ 2017ರಲ್ಲಿ ಐಎಂಎ ವಂಚನೆ ಪ್ರಕರಣ ಬೆಳಕಿಗೆ ಬಂದಾಗ ಪೂರ್ವವಿಭಾಗದ ಡಿಸಿಪಿಯಾಗಿ ಐಪಿಎಸ್‌ ಅಧಿಕಾರಿ ಅಜಯ್‌ ಹಿಲೋರಿ ಕರ್ತವ್ಯ ನಿರ್ವಹಿಸುತ್ತಿದ್ದರು. ಹೀಗಾಗಿ ಈ ಮೊದಲು ತನಿಖೆ ನಡೆಸಿದ್ದ ಎಸ್‌ಐಟಿ ಅಧಿಕಾರಿಗಳು ಅಜಯ್‌ ಹಿಲೋರಿ ಅವರನ್ನು ವಿಚಾರಣೆಗೊಳಪಡಿಸಿ ಹೇಳಿಕೆ ದಾಖಲಿಸಿಕೊಂಡಿದ್ದರು. ಈ ಸಂಂಬಧ ಎಸ್‌ಐಟಿಗೆ ನೀಡಿರುವ ಹೇಳಿಕೆಯನ್ನಾಧರಿಸಿ ಸದ್ಯದಲ್ಲೇ ಅಜಯ್‌ ಹಿಲೋರಿ ಅವರನ್ನು ಸಹ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.