ಉಪ ಚುನಾವಣೆಗೆ ತಾಲೂಕು ಆಡಳಿತ ಸಕಲ ಸಿದ್ಧ
Team Udayavani, Sep 24, 2019, 11:47 AM IST
ಹಿರೇಕೆರೂರ: ಹಿರೇಕೆರೂರ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಗೆ ತಾಲೂಕು ಆಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿ ವಿನೋದಕುಮಾರ ಹೆಗ್ಗಳಗಿ ತಿಳಿಸಿದರು.
ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಉಪಚುನಾವಣೆ ಸಿದ್ಧತೆ ಕುರಿತು ಅವರು ಮಾಹಿತಿ ನೀಡಿದರು. ಉಪಚುನಾವಣೆಗೆ ಇಂದಿನಿಂದ ಸೆ.30 ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆ ವರೆಗೆ ನಾಮಪತ್ರ ಸಲ್ಲಿಸಬಹುದು. ಅ.1 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅ.3ರಂದು ಮಧ್ಯಾಹ್ನ 3 ಗಂಟೆ ಒಳಗೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಅ.21 ರಂದು ಬೆಳಿಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ ಎಂದರು.
ಹಿರೇಕೆರೂರ ವಿಧಾನ ಕ್ಷೇತ್ರದಲ್ಲಿ ಒಟ್ಟು 1,82,815 ಮತದಾರರಿದ್ದು, 94,246 ಪುರುಷರು, 88565 ಮಹಿಳೆಯರು ಮತ್ತು 4 ಇತರ ಮತದಾರರಿದ್ದಾರೆ. 229 ಮತಗಟ್ಟೆ ಕೇಂದ್ರಗಳಿವೆ. ಹೊಲಬಿಕೊಂಡ, ಹಳ್ಳೂರು ಮತ್ತು ಕೊಡಮಗ್ಗಿ ಗ್ರಾಮಗಳಲ್ಲಿ ಚೆಕ್‌ಪೋಸ್ಟ್‌ಗಳು ಸ್ಥಾಪಿಸಲಾಗುವುದು. ಅವುಗಳಲ್ಲಿ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ವಿಡಿಯೋ ಗ್ರಾಫರ್ ನಿತ್ಯ ಮೂರು ಪಾಳಯದಲ್ಲಿ ವಾಹನ ತಪಾಸಣೆ ನಡೆಸುವರು ಎಂದರು.
26 ಸೆಕ್ಟರ್ ಆಫೀಸರನ್ನು ನೇಮಕ ಮಾಡಲಾಗಿದ್ದು, ಮತಗಟ್ಟೆ ಕೇಂದ್ರ ತಪಾಸಣೆ ಮತ್ತು ಮತಗಟ್ಟೆ ಕೇಂದ್ರದ ಸಿಬ್ಬಂದಿಗಳಿಗೆ ಸೆಕ್ಟರ್ ಆಫೀಸರ ಎರಡು ಹಂತಗಳಲ್ಲಿ ತರಬೇತಿ ನೀಡುತ್ತಾರೆ. ಹಿರೇಕೆರೂರ, ರಟ್ಟಿàಹಳ್ಳಿ ಮತ್ತು ಹಂಸಭಾವಿ ಹೋಬಳಿಗೆ ಪ್ರತ್ಯೇಕ ಪ್ಲೇಯಿಂಗ್ ಸ್ಕ್ಯಾಡ್ ತಂಡ, ಮಾದರಿ ನೀತಿ ಸಂಹಿತೆಯ ನೋಡಲ್ ಅಧಿಕಾರಿ, ಚುನಾವಣಾ ವೆಚ್ಚ ಪರಿಶೀಲನಾ ತಂಡ, ವಿಡಿಯೋ ಕಣ್ಗಾವಲು ತಂಡಗಳನ್ನು ರಚಿಸುವ ಮೂಲಕ ಉಪ ಚುನಾವಣೆಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು. ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿ, ತಹಶೀಲ್ದಾರ್ ಆರ್.ಎಚ್. ಭಾಗವಾನ್, ಎಚ್. ವೈ. ಕೊಪ್ಪದ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ
MUST WATCH
ಹೊಸ ಸೇರ್ಪಡೆ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.