ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ಪ್ರತಿಭಟನೆ

Team Udayavani, Sep 24, 2019, 12:35 PM IST

kopala-tdy-2

ಕೊಪ್ಪಳ: ಅಕ್ಕಮಹಾದೇವಿ ವಿಶ್ವವಿದ್ಯಾಲಯವು ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿದ್ದನ್ನು ಖಂಡಿಸಿ ಎಸ್‌ ಎಫ್‌ಐ ಜಿಲ್ಲಾ ಸಮಿತಿಯಿಂದ ನಗರದ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿ ಪ್ರಾಚಾರ್ಯರಿಗೆ ಮನವಿ ಸಲ್ಲಿಸಲಾಯಿತು. ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವು ಅಕ್ಟೋಬರ್‌ ನವೆಂಬರ್‌ ನಡೆಯುವ ಪದವಿ ವಿದ್ಯಾರ್ಥಿನಿಯರ ಬಿಎ, ಬಿಕಾಂ, ಪ್ರಥಮ ತೃತೀಯ ಹಾಗೂ 5ನೇ ಸೆಮಿಸ್ಟರ್‌ನ ಪರೀಕ್ಷಾ ಶುಲ್ಕವನ್ನು 980 ರೂ. ನಿಗ ದಿ ಮಾಡಿದೆ. ಹಾಗೂ ಬಿಎಸ್ಸಿ ಪ್ರಥಮ, ತೃತೀಯ, 5ನೇ ಸೆಮಿಸ್ಟರ್‌ ವಿದ್ಯಾರ್ಥಿನಿಯರ ಶುಲ್ಕವನ್ನು 1050 ರೂ.ಗೆ ನಿಗ ದಿ ಮಾಡಿದೆ. ಇದು ಅತ್ಯಂತ ಖಂಡನೀಯ ಎಂದು ವಿದ್ಯಾರ್ಥಿ ಸಂಘಟನೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೇ ಅಂತಿಮ ವರ್ಷದ ವಿದ್ಯಾರ್ಥಿನಿಯರಿಗೆ ಘಟಿಕೋತ್ಸವ ಶುಲ್ಕ 550 ರೂ. ನಿಗದಿ  ಮಾಡಲಾಗಿದೆ. ಇದು ವಿದ್ಯಾರ್ಥಿನಿಯರ ವಿರೋಧಿ ನೀತಿಯಾಗಿದೆ. ಕೂಡಲೇ ವಿವಿಯು ನಿಗ ದಿ ಮಾಡಿದ ಶುಲ್ಕವನ್ನು ಕಡಿಮೆ ಮಾಡಬೇಕು. ಪರೀಕ್ಷೆ ಶುಲ್ಕವನ್ನು 120ರಿಂದ 150 ರೂ. ವರೆಗೆ ಇಳಿಸಬೇಕು. ಘಟಿಕೋತ್ಸವದ ಶುಲ್ಕವನ್ನು ಕಡ್ಡಾಯ ಮಾಡಬಾರದು. ಇಲ್ಲವೇ 200 ರೂ. ಮಾಡಬೇಕು. ಬೇರೆ ಬೇರೆ ವಿಶ್ವವಿದ್ಯಾಲಯಗಳಲ್ಲಿ ಕಡಿಮೆ ಪರೀಕ್ಷಾ ಶುಲ್ಕ ಪಡೆಯಲಾಗುತ್ತದೆ. ಆದರೆ ಈ ವಿವಿಯಲ್ಲಿ ಶುಲ್ಕ ಹೆಚ್ಚಳ ಮಾಡಿದ್ದು ಸರಿಯಲ್ಲ ಎಂದು ಸಂಘಟನೆ ಮುಖಂಡರು ತಮ್ಮ ಅಸಮಾಧಾನ ಹೊರ ಹಾಕಿದರು.

ಸರ್ಕಾರ ಎಸ್ಸಿ, ಎಸ್‌ಟಿ ಅಲ್ಪಸಂಖ್ಯಾತರ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕೊಟ್ಟಿರುವ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ಕೊಡುತ್ತದೆ. ಆದರೆ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಸರಕಾರದ ನಿಯಮ ಉಲ್ಲಂಘನೆ ಮಾಡಿ ವಿದ್ಯಾರ್ಥಿನಿಯರಿಂದ ಸಂಪೂರ್ಣ ಶುಲ್ಕ ಪಡೆಯಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ, ಕಾಲೇಜು ಮುಂದೆ ಪ್ರತಿಭಟನೆ ನಡೆಸಿ ಕಾಲೇಜು ಪ್ರಾಚಾರ್ಯರ ಮೂಲಕ ವಿವಿ ಕುಲಪತಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯ ವೇಳೆ ಸಂಘಟನೆ ಮುಖಂಡರಾದ ಸುಭಾನ್‌ ಸೈಯದ್‌, ಶಿವಕುಮಾರ್‌ ವಾಲಿಕಾರ,ಯಮನೂರಪ್ಪ ಎಚ್‌., ಶರಣಪ್ಪ ಹೋಮಿನಾಳ, ಕೃಷ್ಣ, ಗೌಸುಸಾಬ್‌, ಸೈಯದ್‌ ವಿದಾರ್ಥಿನಿಯರಾದ ಐಶ್ವರ್ಯ, ಸುಸ್ಮಿತಾ, ಮೇಘಾ, ದಿವ್ಯಾ, ನಂದಿನಿ, ಶೋಭಾ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

5-belthangady

Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರಿಗೆ ಬೆಂಕಿ…

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಕುಟುಂಬ ಸದಸ್ಯರಿಗೆ ಆಘಾತ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

5-belthangady

Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

‌Max Movie: ಬಿಗ್‌ ಬಾಸ್‌ ವೇದಿಕೆಯಲ್ಲಿ  ʼಮ್ಯಾಕ್ಸ್‌ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್

‌Max Movie: ಬಿಗ್‌ ಬಾಸ್‌ ವೇದಿಕೆಯಲ್ಲಿ ʼಮ್ಯಾಕ್ಸ್‌ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.