ಸಿದ್ದರಾಮಯ್ಯ, ಕುಮಾರಸ್ವಾಮಿ ಆರೋಪಗಳು ಇಬ್ಬರಿಗೂ ಒಳ್ಳೆಯದಲ್ಲ: ಹೊರಟ್ಟಿ
Team Udayavani, Sep 24, 2019, 3:20 PM IST
ಹುಬ್ಬಳ್ಳಿ: ಸಮ್ಮಿಶ್ರ ಸರ್ಕಾರದಲ್ಲಿ ಪಾಲುದಾರರಾಗಿದ್ದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್. ಡಿ.ಕುಮಾರಸ್ವಾಮಿ ಅವರು ಪರಸ್ಪರ ಆರೋಪ ಮಾಡುದನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ತಪ್ಪು ಸಂದೇಶ ರವಾನೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 14 ತಿಂಗಳ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷರಾದ ಇಬ್ಬರು ನಾಯಕರು ಇದೀಗ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಆರೋಪಗಳನ್ನು ಮಾಡುತ್ತಿರುವುದು ಎರಡೂ ಪಕ್ಷಗಳಿಗೂ ಒಳ್ಳೆಯದಲ್ಲ ಎಂಬುದನ್ನು ಇಬ್ಬರು ನಾಯಕರು ಅರಿಯಬೇಕು ಎಂದರು.
ಲೋಕಸಭಾ ಚುನಾವಣೆ ಫಲಿತಾಂಶ, ಸಮ್ಮಿಶ್ರ ಸರ್ಕಾರದ ಪತನ ಆಗಿ ಹೋಗಿರುವ ವಿಚಾರ. ಮ್ತತೆ ಅದನ್ನೇ ಕೆದಕಿ ಆರೋಪ ಮಾಡುವುದು ಸರಿಯಲ್ಲ. ನಿಖಿಲ್ ಕುಮಾರಸ್ವಾಮಿ ಡೈನಾಮಿಕ್ ನಾಯಕತ್ವ ಗುಣ ಹೊಂದಿದ್ದಾನೆ. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಕೆಲ ನಾಯಕರ ಹೇಳಿಕೆಗಳೇ ಸುಮಲತಾ ಪರ ಅನುಕಂಪ ಹೆಚ್ಚೆಸುವಂತೆ ಮಾಡಿತು. ಮತದಾನ ವೇಳೆ ಬೂತ್ ಗಳಿಗೆ ಏಜೆಂಟ್ ಗಳು ಸರಿಯಾಗಿ ಸಿಗದಿದ್ದರು ಸುಮಲತಾ ಗೆಲ್ಲುವಂತಾಗಲು ನಮ್ಮ ಪಕ್ಷದ ಕೆಲ ನಾಯಕರ ಹೇಳಿಕೆಗಳೇ ಕಾರಣವಾಯಿತು ಎಂದರು.
ನೆರೆ ಪರಿಹಾರದಲ್ಲಿ ರಾಜ್ಯ-ಕೇಂದ್ರ ಸರಕಾರಗಳ ವೈಫಲ್ಯ, ಆಪರೇಷನ್ ಕಮಲ ಹೀಗೆ ಅನೇಕ ವಿಷಯ ಸಮಸ್ಯೆಗಳ ಬಗ್ಗೆ ಪ್ರಸ್ತಾಪ, ಟೀಕೆ ಬಿಟ್ಟು ವಿಪಕ್ಷ ನಾಯಕರಿಬ್ಬರು ಪರಸ್ಪರ ಆರೋಪಕ್ಕಿಳಿದರೆ ಬಿಜೆಪಿಗೆ ಲಾಭ ಮಾಡಿ ಕೊಟ್ಟಂತಾಗಲಿದೆ ಎಂದರು.
ಮಾಜಿ ಸಚಿವರಾದ ಎಚ್. ವಿಶ್ವನಾಥ, ಸಾ.ರಾ.ಮಹೇಶ ವೈಯಕ್ತಿಕ ಆರೋಪಗಳಿಗೆ ಮುಂದಾಗಿರುವುದು ಇಬ್ಬರಿಗೂ ಶೋಭೆ ತರದು ಎಂದರು.
ಶಿಕ್ಷಕರಿಗೆ ದಸರಾ ಬೇಸಿಗೆ ರಜೆ ಇಲ್ಲವಾಗಿಸಿ ರಜೆ ರಹಿತವಾಗಿಸುವುದು ಸರಿಯಲ್ಲ. ಈ ಬಗ್ಗೆ ಸೆ.27ರಂದು ಶಿಕ್ಷಣ ಸೇವೆಯೊಂದಿಗೆ ನಡೆಯುವ ಸಭೆಯಲ್ಲಿ ಪ್ರಸ್ತಾಪಿಸುವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.