ಪಿಂಚಣಿ ಬಿಡುಗಡೆಗೆ ಆಗ್ರಹ
Team Udayavani, Sep 24, 2019, 4:15 PM IST
ರಾಯಚೂರು: ಕಳೆದ ಎರಡು ವರ್ಷದಿಂದಲೂ ಎಸ್‌ಎಸ್‌ವೈ, ಒಎಪಿ ಹಾಗೂ ಡಿಡಬ್ಲೂಪಿ, ಪಿಎಚ್‌ಸಿ ಯೋಜನೆಗಳ ಫಲಾನುಭವಿಗಳಿಗೆ ಪಿಂಚಣಿ ಬಿಡುಗಡೆಯಾಗದೆ ಸಾಕಷ್ಟು ಸಮಸ್ಯೆಯಾಗಿದ್ದು, ಕೂಡಲೇ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದುಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಬಣ) ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಘೋಷಣೆ ಕೂಗಿದ ಕಾರ್ಯಕರ್ತರು, ಬಳಿಕ ಜಿಲ್ಲಾಧಿ ಕಾರಿಗೆ ಮನವಿ ಸಲ್ಲಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಹತ್ವದ ಯೋಜನೆಗಳಾದ ಸಂಧ್ಯಾ ಸುರಕ್ಷಾ, ವಿಧವಾ ವೇತನ, ಒಎಪಿ ಅಂಗವಿಕಲರ ಪಿಂಚಣಿ ಯೋಜನೆಗಳಲ್ಲಿ ಸಾಕಷ್ಟು ಸಮಸ್ಯೆಯಾಗುತ್ತಿದೆ. ಎರಡು ವರ್ಷದಿಂದ ಫಲಾನುಭವಿಗಳ ಖಾತೆಗೆ ಪಿಂಚಣಿ ಹಣವೇ ಜಮಾ ಮಾಡಿಲ್ಲ. ಆದರೆ, ಇದನ್ನೇ ನಂಬಿ ಜೀವನ ದೂಡುತ್ತಿರುವವರಿಗೆ ಇದರಿಂದ ಸಾಕಷ್ಟು ಸಮಸ್ಯೆಯಗುತ್ತಿದೆ ಎಂದು ದೂರಿದರು. ಮೊದಲಾದರೆ 2-3 ತಿಂಗಳಿಗೆ ಒಮ್ಮೆಯಾದರೂ ಪಿಂಚಣಿ ಬರುತ್ತಿತ್ತು. ಆದರೆ, ಈಗ ವರ್ಷಾನುಗಟ್ಟಲೇ ಹಣ ಬಾರದಿದ್ದರೆ ಫಲಾನುಭವಿಗಳಿಗೆ ಸಾಕಷ್ಟು ಕಷ್ಟವಾಗಲಿದೆ. ಇಲ್ಲವಾದರೆ ಅವರೆಲ್ಲ ಪರಾವಲಂಬಿಗಳಾಗಬೇಕಾಗುತ್ತದೆ. ಈ ಕುರಿತು ಖಜಾನೆ ಅಧಿಕಾರಿಗಳು ಹಾಗೂ ತಹಶೀಲ್ದಾರ್ ಕಚೇರಿ ಅ ಧಿಕಾರಿಗಳನ್ನು ಕೇಳಿದರೆ ಹಾರಿಕೆ ಉತ್ತರ ನೀಡುತ್ತಾರೆ. ಸರ್ಕಾರ ಕೂಡಲೇ ಈ ಎಲ್ಲ ಯೋಜನೆಗಳ ಫಲಾನುಭವಿಗಳಿಗೆ ಪಿಂಚಣಿ ನೀಡಲು ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಸಂಘಟನೆ ಜಿಲ್ಲಾಧ್ಯಕ್ಷ ಖಲೀಲ್ ಪಾಷಾ, ಜಿಲ್ಲಾ ಕಾರ್ಯಾಧ್ಯಕ್ಷ ಸಂಗಮೇಶ ಮಂಗಾನವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಚಯ್ಯಸ್ವಾಮಿ, ಸದಸ್ಯರಾದ ಆನಂದ, ಹಾಜಿ, ಅಂಜಿ, ಖಾಜಾ, ಮನ್ನಾನ್, ಶಾಕೀರ, ಫಯಾಜ್, ಶಾಲಂ, ಅಸ್ಲಾಂ, ಪಾಡುರಂಗ, ಮಹೆಬೂಬ್, ಬಡೇಸಾಬ್, ಮಕೂºಲ್ ಸೇರಿ ಇತರರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.