ನಗರದ ವಿವಿಧೆಡೆ ಧಾರಾಕಾರ ಮಳೆ
Team Udayavani, Sep 25, 2019, 3:03 AM IST
ಬೆಂಗಳೂರು: ನಗರದಲ್ಲಿ ಮಂಗಳವಾರವೂ ಧಾರಾಕಾರ ಮಳೆಯಾಗಿದ್ದು, ಕುಂದಲಹಳ್ಳಿ ಗ್ರಾಮದ ಅನೇಕ ಮನೆಗಳಿಗೆ ನೀರು ನುಗ್ಗಿರುವುದು ವರದಿಯಾಗಿದೆ. ಕಳೆದ ಎರಡು ದಿನಗಳಿಂದ ನಗರದಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದ್ದು, ಮಂಗಳವಾರ ಸಂಜೆ ಸುರಿದ ಮಳೆಗೆ ದೊಡ್ಡನೆಕ್ಕುಂದಿ ವಾರ್ಡ್‌ನ ಕುಂದಲಹಳ್ಳಿಯ ತಗ್ಗು ಪ್ರದೇಶದಲ್ಲಿ ನಿರ್ಮಿಸಿದ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಸ್ಥಳೀಯರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದ ಲಿ ಮೆರಿಡಿಯನ್ ಅಂಡರ್ ಪಾಸ್ ಸೇರಿದಂತೆ ವಿವಿಧ ಅಂಡರ್ ಪಾಸ್, ಫ್ಲೈಓವರ್ ಮೇಲೆ ನೀರು ನಿಂತ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು. ಸೋಮವಾರ ರಾತ್ರಿ ಸುರಿದ ಮಳೆಗೆ ಸುಬ್ರಮಣ್ಯಪುರ,ಜೋಗುಪಾಳ್ಯ ಹಾಗೂ ವಿವೇಕನಗರದಲ್ಲಿ ತಲಾ ಒಂದು ಮರ ಧರೆಗುರುಳಿದ್ದು, ವಿವೇಕ ನಗರದಲ್ಲಿ ಒಂದು ಕಾರು ಮತ್ತು ಬೈಕ್ ಜಖಂಗೊಂಡಿವೆ. ಆದರೆ, ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಬಿಬಿಎಂಪಿಯ ಸಹಾಯವಾಣಿಯ ಸಿಬ್ಬಂದಿ ತಿಳಿಸಿದ್ದಾರೆ.
ಎಲ್ಲೆಲ್ಲಿಎಷ್ಟು ಮಳೆ?: ದಾಸನಪುರ8 .5 ಮಿ.ಮೀ, ಹುಸ್ಕೂರು 11.5 ಮಿ.ಮೀ, ಹೆಸರಘಟ್ಟ 3.5 ಮಿ.ಮೀ, ರಾಜನಕುಂಟೆ 3.5 ಮಿ.ಮೀ, ದೊಡ್ಡಜಾಲ 22.5 ಮಿ.ಮೀ, ಯಲಹಂಕ 8 ಮಿ.ಮೀ, ಕೋನೇನ ಅಗ್ರಹಾರ 2 ಮಿ.ಮೀ, ಆವಲಹಳ್ಳಿ 3 ಮಿ.ಮೀ, ಕೆ.ಆರ್‌ಪುರ31.5 ಮಿ.ಮೀ, ಬಾಣಸವಾಡಿ 9ಮಿ.ಮೀ, ಸಂಪಂಗಿರಾಮನಗರ 7ಮಿ.ಮೀ, ರಾಮಮೂರ್ತಿ ನಗರ19ಮಿ.ಮೀ, ವರ್ತೂರು 8.5 ಮಿ.ಮೀ, ಬೂದಿಗೆರೆ 5 ಮಿ.ಮೀ, ಹಲಸೂರು 8 ಮಿ.ಮೀ ಹಾಗೂ ನಗರದ ವಿವಿಧೆಡೆ ಮಳೆಯಾಗಿರುವುದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.