ಸೌಕರ್ಯ ಇಲ್ಲದೇ ಪಿಯು ವಿದ್ಯಾರ್ಥಿಗಳ ಪರದಾಟ
ವ್ಯಾಸಂಗಕ್ಕಿಲ್ಲ ಪೂರಕ ವ್ಯವಸ್ಥೆ ಸೋರುತ್ತಿದೆ ಕಾಲೇಜು ಕಟ್ಟಡ ಛಾವಣಿ
Team Udayavani, Sep 25, 2019, 3:27 PM IST
ಗೋಪಾಲರಾವ್ ಕುಲಕರ್ಣಿ
ಹುಣಸಗಿ: ಪಟ್ಟಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಸಾಕಷ್ಟು ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದರೂ ನುರಿತ ಮತ್ತು ತಜ್ಞ ಉಪನ್ಯಾಸಕರ ಕೊರತೆಯಿಂದ ಇಲ್ಲಿನ ವಿದ್ಯಾರ್ಥಿಗಳು ಪರದಾಡುವಂತಾಗಿದೆ.
ಹೌದು, ಹುಣಸಗಿ ಪಟ್ಟಣದಲ್ಲಿ ಕಳೆದ 1992-93ನೇ ಸಾಲಿನಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜನ್ನು ಅಂದಿನ ಸರಕಾರ ಆರಂಭಿಸಿ ಕಲಾ ವಿಭಾಗಕ್ಕೆ ಅನುಮತಿ ನೀಡಿತ್ತು. ಬಳಿಕ ಮುಂದುವರಿದು 1999-2000ದಲ್ಲಿ ವಾಣಿಜ್ಯ ಮತ್ತು 2010-11ರಲ್ಲಿ ವಿಜ್ಞಾನ ವಿಭಾಗ ಆರಂಭಿಸಲಾಗಿತ್ತು. ಇದರಿಂದ ಹೆಚ್ಚಿನ ವ್ಯಾಸಂಗಕ್ಕಾಗಿ ಹುಣಸಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳು ಸುರಪುರ ಮತ್ತು ತಾಳಿಕೋಟೆಗೆ ಹೋಗುವುದು ತಪ್ಪಿತು ಎಂದು
ಪಾಲಕರು ಸಂತಸದಲ್ಲಿದ್ದರು. ಆದರೆ ಈ ಸಂತಸ ಹುಸಿಯಾಗಿದೆ.
ಈ ಕಾಲೇಜಿನಲ್ಲಿ ಪ್ರಾಂಶುಪಾಲರು, ಉಪನ್ಯಾಸಕರು ಸೇರಿದಂತೆ ಒಟ್ಟು 12 ಹುದ್ದೆ
ಮಂಜೂರಾಗಿದ್ದು, ಪ್ರಸ್ತುತ ಪ್ರಾಂಶುಪಾಲರು ಮತ್ತು ಇಬ್ಬರು ಉಪನ್ಯಾಸಕರು ಮಾತ್ರ ಕಾಯಂ ಇದ್ದು, ಉಳಿದವರನ್ನು ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಪ್ರಾಚಾರ್ಯ ಪ್ರಕಾಶ ಚೌಧರಿ ತಿಳಿಸಿದ್ದಾರೆ.
ಪ್ರಥಮ ವರ್ಷದ ಕಲಾ ವಿಭಾಗದಲ್ಲಿ 214 ಸೇರಿದಂತೆ ವಾಣಿಜ್ಯ ಮತ್ತು ವಿಜ್ಞಾನ ವಿಭಾಗಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಅಂದಾಜು 398 ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಆದರೆ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪ್ರಯೋಗಾಲಯ ಸಮಸ್ಯೆಯಿಂದ ಪರದಾಡುವಂತಾಗಿದೆ ಎಂದು ವಿದ್ಯಾರ್ಥಿಗಳಾದ ಕಿರಣಕುಮಾರ ರಾಠೊಡ,
ಕಿರಣ ಚವ್ಹಾಣ, ಶ್ರೀದೇವಿ, ಸಾವಿತ್ರಿ ಭಪ್ಪರಗಿ, ಭಾಗ್ಯಶ್ರೀ, ನಿರ್ಮಲಾ ಗೋಗಿ, ಭೀಮರಾಯ
ಹಾದಿಮನಿ ದೂರಿದ್ದಾರೆ.
ಗ್ರಂಥಾಲಯದಲ್ಲಿ ಸೌಕರ್ಯಗಳ ಅವಶ್ಯಕತೆ ಇದೆ. ಈಗಾಗಲೇ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಕಳೆದ ವರ್ಷ ಅಂದಾಜು 50 ಲಕ್ಷ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡ ನಿರ್ಮಿಸಲಾಗಿದೆ. ಆದರೆ ಕಾಮಗಾರಿ ಸಮರ್ಪಕ ನಿರ್ವಹಿಸದೇ ಇದ್ದುದರಿಂದಾಗಿ ಮತ್ತು ಸಂಬಂಧಿಸಿದ ಗುತ್ತಿಗೆದಾರರ ನಿಷ್ಕಾಳಜಿಯಿಂದಾಗಿ ಮಳೆ ನೀರು ಛಾವಣಿ ಮೇಲೆ ಸಂಗ್ರಹವಾಗುತ್ತಿದ್ದು, ಆ ನೀರು ಕಟ್ಟಡದ ಒಳಗಡೆ ಬರುತ್ತಿದೆ.
ಅಲ್ಲದೇ ಪ್ರಯೋಗಾಲದಲ್ಲಿ ಸೂಕ್ತ ವಿದ್ಯುತ್ ಮತ್ತು ನೀರಿನ ವ್ಯವಸ್ಥೆ ಇಲ್ಲ. ಸೂಕ್ತ ಉಪಕರಣ ವ್ಯವಸ್ಥೆವೂ ಇಲ್ಲ. ಇದರಿಂದಾಗಿ ಎಲ್ಲ ಸಮಸ್ಯೆ ಪರಿಹರಿಸಿ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಪೂರಕ ವ್ಯವಸ್ಥೆ ಕಲ್ಪಿಸಲು ಶಿಕ್ಷಣ ಇಲಾಖೆ ಮತ್ತು ಅಧಿಕಾರಿಗಳು ಮುಂದಾಗುತ್ತಾರೆ ಎಂದು ಕಾಯ್ದು ನೋಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.