ದೇಶಾಭಿವೃದ್ಧಿಗೆ ಭಾವೈಕ್ಯ ಅಗತ್ಯ

ಮೌಲ್ಯಾಧಾರಿತ ಬದುಕು ಕಟ್ಟಿಕೊಳ್ಳಿಜಾತಿ ಪದ್ಧತಿ ನಿರ್ಮೂಲನೆ ಮಾಡಿ

Team Udayavani, Sep 25, 2019, 5:41 PM IST

25-Spectember-26

ಸಿಂದಗಿ: ದೇಶದ ಅಭಿವೃದ್ಧಿಗೆ ಭಾವೈಕ್ಯತೆ ಅವಶ್ಯ ಎಂದು ಕೆಪಿಸಿಸಿ ವಕ್ತಾರ ಎಸ್‌.ಎಂ. ಪಾಟೀಲ ಗಣಿಹಾರ ಹೇಳಿದರು. ಪಟ್ಟಣದ ಬಸವ ಮಂಟಪದಲ್ಲಿ ಸರ್ವಧರ್ಮ ಸೇವಾ ಸಂಸ್ಥೆ ಹಮ್ಮಿಕೊಂಡಿದ್ದ ಭಾವೈಕ್ಯ ವಿಚಾರ ಗೋಷ್ಠಿ ಹಾಗೂ ಭಾವೈಕ್ಯ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಎಲ್ಲ ಧರ್ಮ ಸ್ಥಾಪಕರು ಸಮಾಜವನ್ನು ಒಳ್ಳೆ ಮಾರ್ಗದಲ್ಲಿ ನಡೆಸಿಕೊಂಡು ಹೋಗಲು ಮೌಲ್ಯಾಧಾರಿತ ಬದುಕನ್ನು ಕಟ್ಟಿಕೊಳ್ಳಲು ಮಾರ್ಗ ಸೂಚಿಸಿದ್ದಾರೆ. ಆದರೆ ಪ್ರಸ್ತುತ ದಿನಗಳಲ್ಲಿ ಮನುಷ್ಯ-ಮನುಷ್ಯ ದ್ವೇಷಿಸುತ್ತಿದ್ದಾನೆ. ಸೂಫಿ-ಸಂತರು, ಶರಣರು ಕಟ್ಟಿದ ದೇಶವನ್ನು ಉಳಿಸಿಕೊಂಡು ಹೋಗಬೇಕಾದರೆ ಸಮಾಜದಲ್ಲಿ ಭಾವೈಕ್ಯತೆ ಮೂಡಬೇಕು. ಈ ನಿಟ್ಟಿನಲ್ಲಿ ಸರ್ವ ಧರ್ಮಸೇವಾ ಸಂಸ್ಥೆ ಹಮ್ಮಿಕೊಳ್ಳುತ್ತಿರುವ ಭಾವೈಕ್ಯ ಕಾರ್ಯಕ್ರಮ ಶ್ಲಾಘನಿಯ ಎಂದು ಹೇಳಿದರು.

ಪುರಸಭೆ ಮಾಜಿ ಸದಸ್ಯ ರಾಜಶೇಖರ ಕೂಚಬಾಳ ಮಾತನಾಡಿ, ಸಮಾಜದಲ್ಲಿನ ಜಾತಿ ಪದ್ಧತಿ ವ್ಯವಸ್ಥೆಯಲ್ಲಿ ಭಾವೈಕ್ಯತೆ ಕನಸಾಗಿದೆ. ನಿಸರ್ಗ ನಮಗೆ ನೀರು, ಗಾಳಿ, ಭೂಮಿ ಎಲ್ಲರಿಗೂ ಸರಿಸಮಾನವಾಗಿ ನೀಡಿದೆ. ಆದರೆ ನಾವು ಭಾವೈಕ್ಯತೆ ಮರೆಯುತ್ತಿದ್ದೇವೆ. ಎಲ್ಲ ಧರ್ಮಗಳ ಗ್ರಂಥಗಳನ್ನು ಅಧ್ಯಯನ ಮಾಡಿ ಅವುಗಳಲ್ಲಿರುವ ಸಾರವನ್ನು ಅರ್ಥೈಸಿಕೊಳ್ಳಿ. ಅವುಗಳ ಗುರಿ, ದಾರಿ, ತತ್ವ ಒಂದೇ ಆಗಿವೆ ಎಂದರು.

ಸಾನ್ನಿಧ್ಯ ವಹಿಸಿದ್ದ ಆಲಮೇಲದ ಜಗದೇವ ಮಲ್ಲಿಬೊಮ್ಮ ಸ್ವಾಮೀಜಿ, ಕಾರ್ಯಕ್ರಮ ಉದ್ಘಾಟಿಸಿದ ವಿಜಯಪುರದ ಹಿರಿಯ ಸಾಹಿತಿ ವಿ.ಸಿ. ನಾಗಠಾಣ, ಮಕ್ಕಳ ಸಾಹಿತಿ ರಾ.ಸಿ. ವಾಡೆದ, ಅಧ್ಯಕ್ಷತೆ ವಹಿಸಿದ್ದ ರಾಷ್ಟ್ರೀಯ ಸೌಹಾರ್ದ ವೇದಿಕೆಯ ಮಹಿಬೂಬ ಮುಲ್ಲಾ ಮಾತನಾಡಿದರು.

ಇದೇ ಸಂದರ್ಭದಲ್ಲಿ ಮುರುಗೇಶ ಸಂಗಮ, ಅನ್ವರ್‌ ಜಮಾದಾರ ಅವರನ್ನು ಸನ್ಮಾನಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮುದ್ದೇಬಿಹಾಳದ ಬಸವರಾಜ ಗುರೂಜಿ, ವಿಜಯಪುರದ ಶ್ರೀಧರ ಕಾಂಬಳೆ, ತಾಳಿಕೋಟೆಯ ರೇಣುಕಾ ಭೂಸಾಕಿ, ಬೀಳಗಿಯ ಸಾಬೇರಾ ಪಠಾಣ, ಮುರಡಿಯ ಶರಣಗೌಡ ಜೇವರ್ಗಿ, ಸಿಂದಗಿಯ ಹನುಮಂತ ಸುಣಗಾರ, ಎನ್‌.ಎಂ. ಚಪ್ಪರಬಂದ, ಮಹಾಂತೇಶ ನೂಲಾನವರ, ಜಗದೇವಪ್ಪ ಸಿಂಗೆ, ಶರಣು ಸಿಂಧೆ, ನವೀನ ಶಳ್ಳಗಿ, ಶರಣಪ್ಪ ಮೇತ್ರಿ, ರಾಮಚಂದ್ರ ಮಣೂರ, ನಾಗಪ್ಪ ತಮದಡ್ಡಿ, ಕಲ್ಲಪ್ಪ ನಂದರಗಿ, ಅನ್ವರ್‌ ಬಾಗವಾನ ಅವರಿಗೆ ಭಾವೈಕ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬಸವದಳ ಅಧ್ಯಕ್ಷ ಶಿವಾನಂದ ಕಲಬುರ್ಗಿ, ಸರ್ವಧರ್ಮ ಸೇವಾ ಸಂಸ್ಥೆ ಅಧ್ಯಕ್ಷ ಜಿಲಾನಿ ಮುಲ್ಲಾ, ಕಾರ್ಯದರ್ಶಿ ಅಹ್ಮದ್‌ ಸಿಂಧೆ, ಸದ್ಯಸರಾದ ಚಂದ್ರಕಾಂತ ಸಂಗಮ, ಗಂಗಯ್ಯ ಪಟೇದ, ಅಬ್ದುಲ್‌ ಗಪೂರ ಮರತೂರ್‌, ತೊಹಿದ್‌ ಮಳ್ಳಿಕರ ಇದ್ದರು.

ಟಾಪ್ ನ್ಯೂಸ್

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.