ಮತ್ತೊಮ್ಮೆ ಅವಕಾಶ ಸಿಕ್ಕರೆ ಅಭಿವೃದ್ಧಿಗೆ ಹೆಚ್ಚಿನ ಒತ್ತು : ಉಮೇಶ್ ಕತ್ತಿ
Team Udayavani, Sep 25, 2019, 6:43 PM IST
ಬೆಳಗಾವಿ: ನನಗೆ ಮುಖ್ಯಮಂತ್ರಿ ಆಗುವ ಎಲ್ಲಾ ಅರ್ಹತೆ ಇದೆ. ಎಂಟು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ ಎಂದು ಶಾಸಕ ಉಮೇಶ ಕತ್ತಿ ಹೇಳಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ಸಿಎಂ ಆದರೆ ಸಮಗ್ರ ಕರ್ನಾಟಕದ ಅಭಿವೃದ್ಧಿ ಮಾಡುತ್ತೇನೆ, ಕೃಷ್ಣ ನೀರಿನ ಉಪಯೋಗಕ್ಕೆ ಹೆಚ್ಚಿನ ಒತ್ತು ನೀಡುತ್ತೇನೆ , ನಾನು ರಾಜಕೀಯದಲ್ಲಿ 35 ವರ್ಷ ಕೆಲಸ ಮಾಡಿದ್ದೇನೆ.ಸಚಿವ ಸ್ಥಾನ ತಪ್ಪಿ ಹೋದದ್ದಕ್ಕೆ ಬೇಸರವಿಲ್ಲ. ಬದಲಾವಣೆ ಮಾಡಿ ನೋಡಲು ಹೈಕಮಾಂಡ್ ತೀರ್ಮಾನಿಸಿದೆ ನಾನು ಪಕ್ಷದ ತೀರ್ಮಾನಕ್ಕೆ ಬದ್ದನಾಗಿರುತ್ತೇನೆ ಎಂದು ಹೇಳಿದರು.ನನ್ನ ವಿರುದ್ಧ ಷಡ್ಯಂತ್ರ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಅದು ಹಣೆಬರಹದಲ್ಲಿ ಬರೆದಿರಬೇಕು ಎಂದು ಹೇಳಿದರು
ಶಾಸಕನಾಗಿ ಕ್ಷೇತ್ರದ ಕೆಲಸ ಮಾಡುತ್ತೇನೆ. ಮತ್ತೊಮ್ಮೆ ಅವಕಾಶ ಸಿಕ್ಕರೆ ಖಂಡಿತವಾಗಿಯೂ ಬೆಳಗಾವಿ ಆಭಿವೃದ್ಧಿ ಮಾಡಲು ಶ್ರಮಿಸುತ್ತೇನೆ ಎಂದರು. ಮುಖ್ಯಮಂತ್ರಿ ಆಗುವ ಸಂದರ್ಭ ಬಂದರೆ ರಾಜ್ಯ ಕಟ್ಟುತ್ತೇನೆ ಎಂದ ಅವರು ಪ್ರತ್ಯೇಕ ರಾಜ್ಯದ ಹೋರಾಟ ಹುಟ್ಟು ಹಾಕಿದ್ದು ನಾನೇ ಯಾವ ಸನ್ನುವೇಶದಲ್ಲೂ ಅನ್ಯಾಯವಾದ ಸಂದರ್ಭದಲ್ಲಿ ಧ್ವನಿ ಎತ್ತುತ್ತೇನೆ ಎಂದು ಹೇಳಿದರು.
ಉತ್ತರ ಕರ್ನಾಟಕದಲ್ಲಿ ಇನ್ನೂ ಅಭಿವೃದ್ಧಿ ಕೆಲಸ ಸಾಕಷ್ಟು ಆಗಬೇಕಿದೆ. ಪ್ರತ್ಯೇಕ ಕೂಗು ಎಬ್ಬಿಸುವ ಸಂದರ್ಭ ಬಂದರೆ ಹೋರಾಟಕ್ಕೆ ಸಿದ್ಧ.ಅನ್ಯಾಯವಾದಾಗ ಪ್ರತಿಭಟನೆ ಮಾಡುವದು ನಮ್ಮ ಜವಾಬ್ದಾರಿ ಎಂದು ಉಮೇಶ ಕತ್ತಿ ಹೇಳಿದರು. ನೆರೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಅಧಿವೇಶನ ನಡೆಸಲಾಗುತ್ತಿದೆ. ಮುಂದೆ ಬೆಳಗಾವಿಯಲ್ಲಿ ಅಧಿವೇಶನ ನಡೆಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ
Cooperation: ನಬಾರ್ಡ್ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.