ಕುಂದಾಪುರ: ರಿಕ್ಷಾ ಚಾಲಕರಿಂದ ಬೃಹತ್ ಪ್ರತಿಭಟನೆ
Team Udayavani, Sep 26, 2019, 5:16 AM IST
ಕುಂದಾಪುರ: ದುಬಾರಿ ದಂಡ, ಕೇಂದ್ರ ಮೋಟಾರ್ ವಾಹನ ಕಾಯ್ದೆಗೆ ತಿದ್ದುಪಡಿ ವಾಸಪಾತಿ, ಆಟೋ ಚಾಲಕರಿಗೆ ಕಲ್ಯಾಣ ಯೋಜನೆ ಪ್ರಕಟಿಸಬೇಕು, ಅವ್ಯವಸ್ಥೆಯ ಆಗರವಾಗಿರುವ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೊಳಿಸಬೇಕು, ಶಾಸಿŒ ಸರ್ಕಲ್ ಫ್ಲೈಓವರ್ ಪೂರ್ಣಗೊಳಿಸಬೇಕು ಎಂದು ಆಗ್ರ ಹಿಸಿ ಇಲ್ಲಿನ ಆಟೋ ಚಾಲಕರು ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.
ಶಾಸಿŒ ಸರ್ಕಲ್‌ನಿಂದ ಮೆರವಣಿಗೆ ಮೂಲಕ ಮಿನಿ ವಿಧಾನಸೌಧಕ್ಕೆ ತೆರಳಿ ಅಲ್ಲಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಮನವಿಯಲ್ಲಿ
ದುಬಾರಿ ದಂಡ, ಕೇಂದ್ರ ಮೋಟಾರ್ ವಾಹನ ಕಾಯ್ದೆ ತಿದ್ದುಪಡಿ 2019ನ್ನು ಹಿಂಪಡೆಯಬೇಕು. 15 ವರ್ಷಕ್ಕಿಂತ ಹಳೆಯ ಅಟೋಗಳನ್ನು ರದ್ದುಪಡಿಸುತ್ತಿದ್ದು ಹಳೆ ಆಟೋಗಳಿಗೆ ಕಂಪೆನಿಗಳಿಂದ ದರ ನಿಗದಿಪಡಿಸಬೇಕು. ಸರಕಾರ ಪ್ರೋತ್ಸಾಹಧನ ವಾಗಿ 50 ಸಾವಿರ ರೂ. ನೀಡಬೇಕು. ರಾಷ್ಟ್ರೀಕೃತ ಬ್ಯಾಂಕಿನಿಂದ ಸಾಲ ಸೌಲಭ್ಯ ನೀಡಬೇಕು. ಆಟೋ ಚಾಲಕರಿಗೆ ಮನೆ, ಕಾಲನಿ ನಿರ್ಮಿಸಿಕೊಡಬೇಕು. ವಾಹನಗಳ ವಿಮಾ ಪ್ರೀಮಿಯಂ ದರ ಹೆಚ್ಚಳವನ್ನು ನಿಯಂತ್ರಿಸಬೇಕು. ಅಸಂಘಟಿತ ಕಾರ್ಮಿಕರಾದ ಅಟೋ ಚಾಲಕರಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಭವಿಷ್ಯನಿಧಿ ಜಾರಿಗೊಳಿಸಬೇಕು, ಪಿಂಚಣಿ ಯೋಜನೆ ಜಾರಿಗೊಳಿಸಬೇಕು.
ಅಸಂಘಟಿತ ಕಾರ್ಮಿಕರ ಕಲ್ಯಾಣ ಭದ್ರತಾ ಮಂಡಳಿ ರಚಿಸಬೇಕು, ಕಲ್ಯಾಣ ಕಾರ್ಯಕ್ರಮ ಜಾರಿಗೊಳಿಸಬೇಕು. ಅಟೋ ಚಾಲಕರ ಕುಟುಂಬಕ್ಕೆ ಇಎಸ್‌ಐ ಸೌಲಭ್ಯ ಜಾರಿಗೊಳಿಸಬೇಕು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಬೇಕು. ಹೊಂಡಗಳನ್ನು ಮುಚ್ಚಬೇಕು. ಶಾಸಿŒ ಸರ್ಕಲ್ ಫ್ಲೈಓವರ್ ಕಾಮಗಾರಿ ಬೇಗನೇ ಮುಗಿಸಬೇಕು ಮೊದಲಾದ ಬೇಡಿಕೆಗಳನ್ನು ಮಂಡಿಸಲಾಯಿತು.
ಪ್ರತಿಭಟನೆಯಲ್ಲಿ ಕುಂದಾಪುರ ತಾಲೂಕು ಆಟೋರಿಕ್ಷಾ, ವಾಹನ ಚಾಲಕರ ಸಂಘ (ಸಿಐಟಿಯು), ಭಾರತೀಯ ಆಟೋರಿಕ್ಷಾ ಮಜ್ದೂರ್ ಸಂಘ (ಬಿಎಂಎಸ್). ಆಟೋರಿಕ್ಷಾ, ಟ್ಯಾಕ್ಸಿ, ಮೆಟಡೋರ್ ಡ್ರೈವರ್ಸ್ ಅಸೋಸಿಯೇಶನ್ (ಇಂಟಕ್) ಹಾಗೂ ಸಮನ್ವಯ ಸಮಿತಿ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು. ಮನವಿ ಸ್ವೀಕರಿಸಿದ ತಹಶೀಲ್ದಾರ್ ತಿಪ್ಪೇಸ್ವಾಮಿ ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಕಳುಹಿಸಿಕೊಡುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.