ಆಯುಷ್ಮಾನ್ ಭಾರತ ಜಾಗೃತಿ ಮೂಡಿಸಿ:ಅಪ್ಪಚ್ಚುರಂಜನ್
Team Udayavani, Sep 26, 2019, 5:36 AM IST
ಮಡಿಕೇರಿ: ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯ ಮಹತ್ವದ ಬಗ್ಗೆ ಜಿಲ್ಲೆಯ ಜನರಿಗೆ ಉಪಯೋಗವಾಗುವ ರೀತಿಯಲ್ಲಿ ತಾಲ್ಲೂಕು ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಬೇಕು ಮತ್ತು ಜಾಗೃತಿ ಮೂಡಿಸಬೇಕು ಎಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ಸೂಚನೆ ನೀಡಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭೋದಕ ಆಸ್ಪತ್ರೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕಾನ್ಪರೆನ್ಸ್ ಹಾಲ್‌ನಲ್ಲಿ ನಡೆದ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಪಾಕ್ಷಿಕ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್‌ಗಳನ್ನು ಸಕಾಲದಲ್ಲಿ ವಿತರಿಸಬೇಕು ಮತ್ತು ಯೋಜನೆಯ ಮಾಹಿತಿಯನ್ನು ಆಶಾ ಕಾರ್ಯಕರ್ತರು ಹಾಗೂ ಆಯುಷ್ಮಾನ್ ಮಿತ್ರರಿಂದ ಮನೆ ಮನೆಗೆ ತಲುಪಿಸಬೇಕು ಎಂದು ಶಾಸಕರು ಸಲಹೆ ನೀಡಿದರು.
ಆರೋಗ್ಯ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆ ವತಿಯಿಂದ ತಾಲ್ಲೂಕು ಕೇಂದ್ರಗಳಲ್ಲಿ ಕಾರ್ಡ್‌ಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಶಿಬಿರ ನಡೆಸಬೇಕೆಂದರು.
ಶಾಸಕ ಕೆ.ಜಿ.ಬೋಪಯ್ಯ ಅವರು ಮಾತನಾಡಿ ಜಿಲ್ಲೆಯಲ್ಲಿ ಗೋಣಿಕೊಪ್ಪ ಹಾಗೂ ಕುಶಾಲನಗರದಲ್ಲಿ ಮಾತ್ರ ಜನೌಷಧಿ ಕೇಂದ್ರ ತೆರೆದಿದ್ದು, ಮಡಿಕೇರಿ ನಗರದಲ್ಲೂ ಕೇಂದ್ರ ಸ್ಥಾಪಿಸಬೇಕೆಂದು ಸಲಹೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಅವರು ಮಾತನಾಡಿ ಜಿಲ್ಲೆಯಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ವಿವಿಧ ಯೋಜನೆ ಯಶಸ್ವಿಗೊಳಿಸಲು ಆರೋಗ್ಯ ಇಲಾಖೆ ಮಹತ್ವದ ಪಾತ್ರ ವಹಿಸಬೇಕೆಂದು ತಿಳಿಸಿದರು.
ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್ ಅವರು ಮಾತನಾಡಿ ಕೆಲವು ಸಲಹೆಗಳನ್ನು ನೀಡಿದರು.ತೆಕ್ಕಡೆ ಶೋಭ ಮೋಹನ್, ಡಾ.ಕೆ.ಬಿ.ಕಾರ್ಯಪ್ಪ, ಡಾ.ಎ.ಜೆ.ಲೋಕೇಶ್, ಡಾ.ಆನಂದ್, ಡಾ.ಗೋಪಿನಾಥ್, ಡಾ.ಅಜಿತ್ ಕುಮಾರ್, ರಮೇಶ್, ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಜಿಲ್ಲಾ ಸಂಯೋಜಕರಾದ ತೇಜಸ್ ಗೌಡ ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಸಿಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.