“ಖಾತ್ರಿ’ಯಲ್ಲಿ ವೈಯಕ್ತಿಕ ಕಾಮಗಾರಿಗೆ ಅವಕಾಶ

ಬಜತ್ತೂರು ಗ್ರಾ.ಪಂ.: ಸಾಮಾಜಿಕ ಪರಿಶೋಧನೆ ವಿಶೇಷ ಗ್ರಾಮಸಭೆ

Team Udayavani, Sep 26, 2019, 5:40 AM IST

2509UPG2

ಉಪ್ಪಿನಂಗಡಿ: ಬಜತ್ತೂರು ಗ್ರಾ.ಪಂ.ನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2019-20ನೇ ಸಾಲಿನ ಪ್ರಥಮ ಹಂತದ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ ಬಜತ್ತೂರು ಗ್ರಾ.ಪಂ. ಸಭಾಭವನದಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸುರೇಶ್‌ ಕುಮಾರ್‌ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯಡಿ ವೈಯಕ್ತಿಕ ಹಾಗೂ ಸಾರ್ವಜನಿಕ ಕಾಮಗಾರಿ ನಿರ್ವಹಣೆ ಸಾಧ್ಯವಿದೆ. ರಸ್ತೆ, ಜಲ ಮರುಪೂರಣ, ಶಾಲೆಗಳಿಗೆ ಆವರಣ ಗೋಡೆ ರಚನೆ, ಕಟ್ಟಡ, ಕೈತೋಟ ರಚನೆಯೂ ಉದ್ಯೋಗ ಖಾತ್ರಿ ಯೋಜನೆಯಡಿ ಮಾಡಲು ಸಾಧ್ಯವಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು. ವೈಯಕ್ತಿಕ ಅಭಿವೃದ್ಧಿಯೊಂದಿಗೆ ಗ್ರಾಮದ ಅಭಿವೃದ್ಧಿಗೆ ಉದ್ಯೋಗ ಖಾತರಿ ಯೋಜನೆಯನ್ನು ಹೆಚ್ಚಾಗಿ ಬಳಸಿಕೊಳ್ಳಬೇಕೆಂದು ಹೇಳಿದರು.

ಗ್ರಾ.ಪಂ. ಅಧ್ಯಕ್ಷ ಸಂತೋಷ್‌ ಕುಮಾರ್‌ ಮಾತನಾಡಿ, ಗ್ರಾ.ಪಂ.ಗೆ ಸರಕಾರದಿಂದ ಹೆಚ್ಚಿನ ಅನುದಾನ ಬರುತ್ತಿಲ್ಲ. ಉದ್ಯೋಗ ಖಾತ್ರಿ ಯೋಜನೆಯಡಿ ಅತೀ ಹೆಚ್ಚಿನ ಅಭಿವೃದ್ಧಿ ಕಾಮಗಾರಿ ಮಾಡಲು ಸಾಧ್ಯವಿದೆ. 2019-20ನೇ ಸಾಲಿನ ಪ್ರಥಮ ಹಂತದಲ್ಲಿ ಗ್ರಾಮಸ್ಥರ ಸಹಕಾರದಿಂದ 31 ಲಕ್ಷ ರೂ. ಮೊತ್ತದ ಕಾಮಗಾರಿ ನಡೆದಿದೆ. ಗ್ರಾ.ಪಂ.ಗೆ 5 ಕಿಂಡಿ ಅಣೆಕಟ್ಟು ನಿರ್ಮಾಣದ ಟಾರ್ಗೆಟ್‌ ನೀಡಲಾಗಿತ್ತು. ಆದರೆ 1 ಕಿಂಡಿ ಅಣೆಕಟ್ಟು ಮಾತ್ರ ನಿರ್ಮಾಣ ಸಾಧ್ಯವಾಗಿದೆ. ಕಿಂಡಿ ಅಣೆಕಟ್ಟು ರಚನೆಗೆ ನರೇಗಾ ಯೋಜನೆಯ ಫ‌ಲಾನುಭವಿಗಳು ಒತ್ತು ನೀಡಬೇಕು. ನರೇಗಾ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಸೇವಾ ಕೇಂದ್ರ ಕಟ್ಟಡದ ಕಾಮಗಾರಿ ಅಂತಿಮ ಹಂತದಲ್ಲಿದ್ದು ಮುಂದೆ ಹಿಂದೂ ರುದ್ರಭೂಮಿಯ ಕಟ್ಟಡ ಕಾಮಗಾರಿ ಮಾಡಲಾಗುವುದು ಎಂದರು.

ಗ್ರಾ.ಪಂ. ಉಪಾಧ್ಯಕ್ಷೆ ಸುಜಾತಾ ಎನ್‌. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪಿಡಿಒ ಪ್ರವೀಣ್‌ ಕುಮಾರ್‌ ಸ್ವಾಗತಿಸಿ, ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಸಂಪನ್ಮೂಲ ವ್ಯಕ್ತಿ ರಮೇಶ್‌ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸದಸ್ಯರಾದ ಪ್ರಸಿಲ್ಲಾ ಡಿ’ಸೋಜಾ, ಶಶಿತಾ, ಲೀಲಾವತಿ, ಮಾಧವ ಪೂಜಾರಿ, ಗಣೇಶ್‌ ಕೆ., ತೇಜಕುಮಾರಿ, ರಾಜೇಶ್‌ ಕುಮಾರ್‌, ಆನಂದ ಕೆ.ಎಸ್‌., ಯೋಜನೆಯ ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಜಯಮಣಿ, ಸುಪ್ರಿಯಾ, ಶ್ವೇತಾಕ್ಷಿ ಸಭೆಯಲ್ಲಿ ಉಪಸ್ಥಿತರಿದ್ದರು. ಸಿಬಂದಿ ರಮೇಶ, ವಿ.ಕೆ. ಮಹಮ್ಮದ್‌, ಮಮತಾ, ಮೀನಾಕ್ಷಿ ಸಹಕರಿಸಿದರು.

31 ಲಕ್ಷ ರೂ. ಖರ್ಚು
2018ರ ಅ. 1ರಿಂದ 2019ರ ಮಾ. 31ರ ತನಕದ ಪ್ರಥಮ ಹಂತದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾ.ಪಂ.ನಲ್ಲಿ ಒಟ್ಟು 31,00,573 ರೂ. ವೆಚ್ಚ ಮಾಡಲಾಗಿದೆ. ಒಟ್ಟು 104 ಕಾಮಗಾರಿಗಳು ಅನುಷ್ಠಾನಗೊಂಡಿದ್ದು, 16,57,842 ರೂ. ಕೂಲಿ ಮೊತ್ತ ಹಾಗೂ 14,42,731 ರೂ. ಸಾಮಗ್ರಿ ಮೊತ್ತ ಪಾವತಿಯಾಗಿದೆ. 146 ಕುಟುಂಬಗಳ 281 ಮಂದಿ ಕೆಲಸ ಮಾಡಿದ್ದು, 6,658 ಮಾನವ ದಿನ ಸೃಜನೆಯಾಗಿದೆ ಎಂದು ಲೆಕ್ಕ ಪರಿಶೋಧನೆ ನಡೆಸಿದ ಗ್ರಾಮ ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

Police-logo

CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್‌ ಪೊಲೀಸ್‌ ಠಾಣೆ ಬಂಟ್ವಾಳಕ್ಕೆ

aane

Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.