ಬಿಬಿಎಂಪಿ ವಿರುದ್ಧ ಹೈಕೋರ್ಟ್‌ ಚಾಟಿ


Team Udayavani, Sep 26, 2019, 3:04 AM IST

highcourt2

ಬೆಂಗಳೂರು: ನಗರ ವ್ಯಾಪ್ತಿಯಲ್ಲಿ ಎಲ್ಲ ಬಗೆಯ ಜಾಹೀರಾತು ನಿಷೇಧಿಸುವ ದಿಸೆಯಲ್ಲಿ ಅನುಮೋದಿಸಿರುವ “ಹೊರಾಂಗಣ ಜಾಹೀರಾತು ಮತ್ತು ಸಾರ್ವಜನಿಕ ಸಂದೇಶ ಬೈಲಾ-2018′ ಅನ್ನು ಕನ್ನಡ ಭಾಷೆಯಲ್ಲಿ ಗೆಜೆಟ್‌ ಅಧಿಸೂಚನೆ ಹೊರಡಿಸುವುದಕ್ಕೆ ವಿಳಂಬವಾಗಲು ಕಾರಣರಾದ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಆರೋಪದಡಿ ಕ್ರಮ ಜರುಗಿಸಲು ಹೈಕೋರ್ಟ್‌ ಇಂಗಿತ ವ್ಯಕ್ತಪಡಿಸಿದೆ.

ಅಕ್ರಮ ಜಾಹೀರಾತುಗಳ ಹಾವಳಿ ತಡೆಯಲು ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ವಿವಿಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾ ಹಾಗೂ ನಾ.ಎಸ್‌.ಆರ್‌.ಕೃಷ್ಣಕುಮಾರ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ಈ ವೇಳೆ ಬಿಬಿಎಂಪಿ ಪರ ವಕೀಲರು, ಭಾಷಾಂತರಕಾರರ ಅಲಭ್ಯತೆಯಿಂದ ಕನ್ನಡದಲ್ಲಿನ ಬೈಲಾ ಅನ್ನು ಗೆಜೆಟ್‌ ಅಧಿಸೂಚನೆ ಹೊರಡಿಸಲು ಸರ್ಕಾರಕ್ಕೆ ಕಳುಹಿಸಿಕೊಟ್ಟಿಲ್ಲ. ಅದಕ್ಕಾಗಿ ಕಾಲಾವಕಾಶ ನೀಡಬೇಕೆಂದು ಕೋರಿದರು.

ಇದಕ್ಕೆ ಆಕ್ಷೇಪಿಸಿದ ಅರ್ಜಿದಾರ ಪರ ವಕೀಲ ಜಿ.ಆರ್‌.ಮೋಹನ್‌, ಕೆಎಂಸಿ ಕಾಯ್ದೆಯ ಸೆಕ್ಷನ್‌ 428ರ ಪ್ರಕಾರ ಬೈಲಾ ಅನುಮೋದಿಸಿ ಏಕಕಾಲದಲ್ಲಿ ಕನ್ನಡ ಹಾಗೂ ಇಂಗ್ಲಿಷ್‌ ಭಾಷೆಯಲ್ಲಿ ಗೆಜೆಟ್‌ ಅಧಿಸೂಚನೆ ಹೊರಡಿಸಬೇಕಿದೆ. ಅದಕ್ಕಾಗಿ ಎರಡೂ ಭಾಷೆಯಲ್ಲಿನ ಬೈಲಾ ಪ್ರತಿಯನ್ನು ಬಿಬಿಎಂಪಿ ಸರ್ಕಾರಕ್ಕೆ ಕಳುಹಿಸಿಕೊಡಬೇಕಿತ್ತು. ಕನ್ನಡದಲ್ಲಿ ಗೆಜೆಟ್‌ ಅಧಿಸೂಚನೆ ಹೊರಡಿಸದ ಹೊರತು ಬೈಲಾ ಅನುಷ್ಠಾನಕ್ಕೆ ಬರುವುದಿಲ್ಲ ಎಂದು ದೂರಿದರು.

ಆಗ ನ್ಯಾಯಪೀಠ ಪ್ರತಿಕ್ರಿಯಿಸಿ, ಕೋರ್ಟ್‌ ನಿರ್ದೇಶನಗಳನ್ನು ಪಾಲಿಸದ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಜರುಗಿಸಲಾಗುವುದು. ಹೀಗಾಗಿ, ತಪ್ಪಿತಸ್ಥ ಅಧಿಕಾರಿಗಳ ಹೆಸರು ತಿಳಿಸಿ ಬಿಬಿಎಂಪಿ ಪ್ರಮಾಣಪತ್ರ ಸಲ್ಲಿಸಬೇಕು. ಅದನ್ನು ಪರಿಗಣಿಸಿ ಕೋರ್ಟ್‌ ಆದೇಶ ಪಾಲಿಸದ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸುವುದಕ್ಕೆ ವಿವರಣೆ ಕೇಳಲಾಗುವುದು ಎಂದು ತಿಳಿಸಿ ವಿಚಾರಣೆಯನ್ನು ಅ.15ಕ್ಕೆ ಮುಂದೂಡಿತು.

ಹಿನ್ನೆಲೆ: ಈ ಅರ್ಜಿಯು ಸೆ.9ರಂದು ವಿಚಾರಣೆಗೆ ಬಂದಿದ್ದ ವೇಳೆ ಬಿಬಿಎಂಪಿ ಕಳುಹಿಸಿರುವ “ಹೊರಾಂಗಣ ಜಾಹೀರಾತು ಮತ್ತು ಸಾರ್ವಜನಿಕ ಸಂದೇಶ ಬೈಲಾ-2018′ ಅನ್ನು ಅನುಮೋದಿಸಿ ಗೆಜೆಟ್‌ ಅಧಿಸೂಚನೆ ಹೊರಡಿಸಲಾಗಿದೆ ಎಂದು ಹೈಕೋರ್ಟ್‌ಗೆ ತಿಳಿಸಿದ್ದ ಸರ್ಕಾರ, ಗೆಜೆಟ್‌ ಪ್ರತಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿತ್ತು. ಕೇವಲ ಇಂಗ್ಲಿಷ್‌ ಭಾಷೆಯಲ್ಲಿ ಅಧಿಸೂಚನೆ ಹೊರಡಿಸಿದ್ದನ್ನು ಗಮನಿಸಿದ್ದ ನ್ಯಾಯಪೀಠ, ಕನ್ನಡ ಭಾಷೆಯಲ್ಲೂ ಗೆಜೆಟ್‌ ಅಧಿಸೂಚನೆ ಪ್ರಕಟಿಸಿ ಅದರ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಬಿಬಿಎಂಪಿ ಹಾಗೂ ಸರ್ಕಾರಕ್ಕೆ ಸೂಚಿಸಿತ್ತು. ಅದರಂತೆ ಬಿಬಿಎಂಪಿಯು ಕನ್ನಡ ಭಾಷೆಯಲ್ಲಿನ ಬೈಲಾ ಪ್ರತಿಯನ್ನು ಸರ್ಕಾರಕ್ಕೆ ಕಳುಹಿಸಿಕೊಡಬೇಕಿತ್ತು.

***

ಪ್ರಿಯ ಕೃಷ್ಣ ಸಲ್ಲಿಸಿದ್ದ ಅರ್ಜಿ ವಜಾ
ಬೆಂಗಳೂರು: 2018ರ ವಿಧಾನಸಭಾ ಚುನಾವಣೆ ವೇಳೆ ಗೋವಿಂದರಾಜನಗರ ಕ್ಷೇತ್ರದ 271ಮತಗಟ್ಟೆ ವಿವಿಪ್ಯಾಟ್‌ಗಳ ಮತ ಎಣಿಕೆಗೆ ನಿರ್ದೇಶನ ನೀಡಬೇಕೆಂದು ಕೋರಿ ಪರಾಜಿತ ಅಭ್ಯರ್ಥಿ ಪ್ರಿಯ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.ಈ ಕುರಿತು ಪ್ರಿಯ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಅಲೋಕ್‌ ಅರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠ, ಚುನಾವಣಾಧಿಕಾರಿ ತಮ್ಮ ವಿವೇಚನಾಧಿಕಾರ ಬಳಸಿಯೇ ಅರ್ಜಿದಾರರ ಮನವಿ ತಿರಸ್ಕರಿಸಿದ್ದಾರೆ. ಹೀಗಾಗಿ, ಅವರ ಆದೇಶ ರದ್ದುಗೊಳಿಸಲಾಗದು ಎಂದು ಹೇಳಿ ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ಅರ್ಜಿದಾರರ ಕೋರಿಕೆಯಂತೆ ವಿಧಾನಸಭಾ ಕ್ಷೇತ್ರದ 271 ಮತಗಟ್ಟೆಗಳಲ್ಲಿನ ವಿವಿಪ್ಯಾಟ್‌ಗಳ ಎಣಿಕೆಗೆ ಆದೇಶ ನೀಡಲಾಗದು ಎಂದೂ ನ್ಯಾಯಪೀಠ ಹೇಳಿದೆ. 2018ರ ವಿಧಾನಸಭಾ ಚುನಾವಣೆ ವೇಳೆ ಗೋವಿಂದರಾಜನಗರ ಕ್ಷೇತ್ರದ ಮತ ಎಣಿಕೆ ಮೇ 15ರಂದು ನಡೆದಿತ್ತು. ಅದೇ ದಿನ ಮತ ಎಣಿಕೆ ಮುಕ್ತಾಯದ ಬಳಿಕ ಪ್ರಿಯಾಕೃಷ್ಣ ಸುಮಾರು 24 ಮತಗಟ್ಟೆಗಳ ವಿದ್ಯುನ್ಮಾನ ಮತ ಯಂತ್ರ ತಿರುಚಲಾಗಿದೆ. ಮತಗಳ ಜೊತೆಗೆ ವಿವಿ ಪ್ಯಾಟ್‌ನ ವೋಟರ್‌ ಸ್ಲಿಪ್‌ಗಳನ್ನೂ ಎಣಿಕೆ ಮಾಡಬೇಕು ಎಂದು ಚುನಾವಣಾಧಿಕಾರಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಆ ಬಗ್ಗೆ ಪರಿಶೀಲನೆ ನಡೆಸಿದ ಚುನಾವಣಾಧಿಕಾರಿ ಪ್ರಿಯಾಕೃಷ್ಣ ಅವರ ಅರ್ಜಿ ತಿರಸ್ಕರಿಸಿದ್ದರು.

ಅದನ್ನು ಪ್ರಶ್ನಿಸಿ ಪ್ರಿಯ ಕೃಷ್ಣ, ಹೈಕೋರ್ಟ್‌ ಮೊರೆ ಹೋಗಿದ್ದರು. ಅರ್ಜಿದಾರರು ದೂರಿರುವ 24 ಮತಗಟ್ಟೆಗಳಲ್ಲಿ 15,001 ಮತ ಚಲಾವಣೆ ಆಗಿವೆ. ಆ ಪೈಕಿ ಅರ್ಜಿದಾರರು 5,615 ಮತ ಪಡೆದುಕೊಂಡಿದ್ದಾರೆ. ಉಳಿದ 9,386 ಮತ ಉಳಿದ ಅಭ್ಯರ್ಥಿ, ನೋಟಾಗೆ ಬಿದ್ದಿವೆ. ಈ ಮತಗಳ ಪ್ರಮಾಣ ಅರ್ಜಿದಾರರ ಸೋಲಿನ ಅಂತರದ ಮತಗಳಾದ 11,354 ಮತಗಳಿಗೂ ಕಡಿಮೆ ಇದೆ. ಹೀಗಾಗಿ 24 ಮತಗಟ್ಟೆಗಳ ವಿವಿ ಪ್ಯಾಟ್‌ ಚೀಟಿಗಳ ಎಣಿಕೆಗೆ ಅರ್ಥವಿಲ್ಲ ಎಂದು ಹೈಕೋರ್ಟ್‌ ಆದೇಶದಲ್ಲಿ ಹೇಳಿದೆ.

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.