ಮಂಗಳೂರು: ಕೆಎಂಸಿ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ಕೇಂದ್ರ ಉದ್ಘಾಟಿಸಿದ ಶಿಲ್ಪಾ ಶೆಟ್ಟಿ
ಪ್ರತಿ ಮಹಿಳೆಯರ ಜೀವನದಲ್ಲಿ ಗರ್ಭಾವಸ್ಥೆ ಒಂದು ಸುಂದರ ಪಯಣ: ಶಿಲ್ಪಾ ಶೆಟ್ಟಿ
Team Udayavani, Sep 26, 2019, 5:59 PM IST
ಮಂಗಳೂರು: ಪ್ರತಿ ಮಹಿಳೆಯರ ಜೀವನದಲ್ಲಿ ಗರ್ಭಾವಸ್ಥೆ ಒಂದು ಸುಂದರ ಪಯಣವಾಗಿರುತ್ತದೆ. ಆದರೆ ಇದೇ ಸಂದರ್ಭದಲ್ಲಿ ಅವರಿಗೆ ತಮ್ಮ ಜೀವನವನ್ನು ಸರಳವಾಗಿಸಬಹುದಾದ ಸಮರ್ಥ ವೈದ್ಯರ ಗಮನ, ಅತ್ಯಾಧುನಿಕ ಮೂಲ ಸೌಕರ್ಯ ಮತ್ತು ನವೀನ ತಂತ್ರಜ್ಞಾನದ ಅಗತ್ಯವೂ ಇರುತ್ತದೆ. ಈ ನಿಟ್ಟಿನಲ್ಲಿ ಇಂದು ಉದ್ಘಾಟನೆಗೊಂಡ ಕೆಎಂಸಿಯ ಈ ನೂತನ ಕೇಂದ್ರವು ಗಮನಾರ್ಹ ಪರಿಣಾಮವನ್ನು ಉಂಟು ಮಾಡಲಿದೆ ಬಾಲಿವುಡ್ ತಾರೆ ಶಿಲ್ಪಾ ಶೆಟ್ಟಿ ಕುಂದ್ರಾ ಹೇಳಿದರು.
ಅವರು ಗುರುವಾರದಂದು ನಗರದ ಟಿ.ಎಂ.ಪೈ.ಸಭಾಂಗಣದಲ್ಲಿ ಕೆಎಂಸಿ ಆಸ್ಪತ್ರೆಯ ಪ್ರತ್ಯೇಕ ಮಹಿಳಾ ಮತ್ತು ಮಕ್ಕಳ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.
ಕೆಎಂಸಿಯ ಈ ನೂತನ ಕೇಂದ್ರವು ಜಿಲ್ಲೆಯ ಮಹಿಳೆಯರಿಗೆ ಆರೋಗ್ಯ ಶುಶ್ರೂಷೆ ಸುಲಭವಾಗಿ ಲಭ್ಯವಾಗುವಂತೆ ಮಾಡಲಿದೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ನ ಉಪಕುಲಪತಿ ಡಾ. ಎಚ್.ಎಸ್.ಬಲ್ಲಾಳ್, ವೈದ್ಯಕೀಯ ಸೇವೆಗಳ ಪ್ರಾದೇಶಿಕ ಮುಖ್ಯಸ್ಥರಾದ ಡಾ.ಆನಂದ್ ವೇಣುಗೋಪಾಲ್, ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಯ ಪ್ರಾದೇಶಿಕ ಮುಖ್ಯ ಕಾರ್ಯಚರಣೆ ಅಧಿಕಾರಿ ಸಗೀರ್ ಸಿದ್ದಿಕಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
ಮಂಗಳೂರಿಗೆ ವಾಟರ್ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ
Mangaluru: ಕರಾವಳಿಯ ವೃತ್ತಿಪರರಿಗೆ ವಿಶ್ವದೆಲ್ಲೆಡೆ ಮನ್ನಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.