ಕಾನೂನು ದುರ್ಬಳಕೆಯಾಗಬಾರದು: ಡಾ| ಸುಮನ್‌ ಪೆನ್ನೇಕರ್‌

ಕಾನೂನು ಮಾಹಿತಿ ಉಪನ್ಯಾಸ

Team Udayavani, Sep 27, 2019, 5:54 AM IST

Z-UPANYASA-2

ಮಡಿಕೇರಿ: ಮಹಿಳೆಯರು ಕಾನೂನಿನ ಬಗ್ಗೆ ತಮ್ಮನ್ನು ತಾವು ಜಾಗೃತಿಗೊಳಿಸಿಕೊಂಡರೆ ಯಾವುದೇ ಸಮಸ್ಯೆಗಳು ಉದ್ಭವಿಸುವುದಿಲ್ಲವೆಂದು ಅಭಿಪ್ರಾಯಪಟ್ಟಿರುವ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಸುಮನ್‌ ಡಿ. ಪೆನ್ನೇಕರ್‌ ಕಾನೂನು ದುರ್ಬಳಕೆಯಾಗಬಾರದು ಎಂದು ತಿಳಿಸಿದ್ದಾರೆ.

ಫೀಲ್ಡ್‌ ಮಾರ್ಷಲ್‌ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಬುಧವಾರ ನಡೆದ ಭಾರತದಲ್ಲಿ ಜಾರಿಯಲ್ಲಿರುವ ಮಹಿಳೆಯರ ಹಿತಕಾಗಿ ಸಿವಿಲ್‌ ಮತ್ತು ಕ್ರಿಮಿನಲ್‌ ಶಾಸನಗಳಿಗೆ ಸಂಬಂಧಿಸಿದಂತೆ ಹಿರಿಯ ವಕೀಲರಾದ ದಿವಂಗತ ಕೆ.ಎಂ.ಪೊನ್ನಪ್ಪ ಅವರ ಸ್ಮರಣಾರ್ಥ ಕಾನೂನು ಉಪನ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಹಿಳೆಯರಿಗಾಗಿ ರೂಪಿತವಾಗಿರುವ ವಿಶೇಷ ಕಾನೂನಿನ ಬಗ್ಗೆ ತಿಳಿದುಕೊಂಡು ಮಹಿಳೆಯರು ಸಮಸ್ಯೆ ಬಂದಾಗ ಕಾನೂ ನನ್ನು ಬಳಸಿಕೊಳ್ಳಬೇಕು. ಕಾನೂನಿನಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ವಿಶೇಷ ವಾದ ಸವಲತ್ತುಗಳು ಇದ್ದು, ಕಾನೂನನ್ನು ದುರ್ಬಳಕೆ ಮಾಡಿಕೊಳ್ಳದೆ, ಅವಶ್ಯವಿದ್ದಾಗ ಸದುಪಯೋಗ ಪಡಿಸಿ ಕೊಂಡು ಉತ್ತಮ ಜೀವನ ನಡೆಸುವಂತಾಗಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅವರು ಸಲಹೆ ಮಾಡಿದರು.

ಪೊಲೀಸ್‌ ಠಾಣೆಗಳಲ್ಲಿ ಮಹಿಳೆಯರು ಹಾಗೂ ಮಕ್ಕಳ ದೂರುಗಳಿಗೆ ಸಂಬಂಧಿಸಿದಂತೆ ವಿಶೇಷ ಘಟಕ ತೆರೆಯಲಾಗಿದ್ದು, ತೊಂದರೆಗೊಳಗಾದ ಸಂದರ್ಭಗಳಲ್ಲಿ ಇದನ್ನು ಬಳಸಿಕೊಳ್ಳಬಹುದಾಗಿದೆ ಎಂದರು. ವಕೀಲರಾದ ಕೆ.ಎಂ.ಮೀನಕುಮಾರಿ ಅವರು ಮಾತನಾಡಿ ಕಾನೂನು ನಿಂತ ನೀರಲ, ಬದಲಿಗೆ ಹರಿಯುವ ನೀರಿನ ತರಹ ಕಾಲಕಾಲಕ್ಕೆ ಬದಲಾವಣೆಗಳೂ ಆಗುತ್ತಿರುತ್ತವೆ. ಜ್ಞಾನ ಮತ್ತು ಧೈರ್ಯ ಪ್ರತಿಯೊಬ್ಬರಿಗೂ ಮುಖ್ಯ ಎಂದರು.

ವಕೀಲ ಎಂ.ಎನ್‌.ನಿರಂಜನ್‌ ಅವರು ಮಾತನಾಡಿ ಪ್ರತಿಯೊಬ್ಬರೂ ಕಾನೂನಿನ ಉದ್ದೇಶವನ್ನು ಅರ್ಥಮಾಡಿಕೊಳ್ಳಬೇಕು. ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿಭಾಯಿಸುವುದರ ಜೊತೆಗೆ ಪ್ರಜ್ಞಾವಂತಿಕೆ, ಸಾಮಾಜಿಕ ಕಳಕಳಿ ಇವುಗಳನ್ನು ತಿಳಿದು ನಡೆದರೆ ಯಾವುದೇ ಸಮಸ್ಯೆಗಳು ಉದ್ಭವಿಸುವುದಿಲ್ಲ ಎಂದರು.

ವಕೀಲರ ಸಂಘದ ಅಧ್ಯಕ್ಷರಾದ ಕೆ.ಎಸ್‌. ಕವನ್‌ ಅವರು ಮಾತನಾಡಿ ದಿ| ಕೆ.ಎಂ. ಪೊನ್ನಪ್ಪ ಅವರು 1959ರಿಂದ 2004 ವರೆಗೆ ವಕೀಲರಾಗಿ ಸುದೀರ್ಘ‌ ಕಾನೂನು ಸೇವೆ ಸಲ್ಲಿಸುವುದರ ಜೊತೆಗೆ ಹಲವು ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿಯಾಗಿ ಮಹಿಳೆಯರ ಹಕ್ಕುಗಳು ಹಾಗೂ ಕಾನೂನಿಗೆ ಸಂಬಂಧಿಸಿ ಶೋಷಣೆಗೆ ಒಳಗಾದ ಮಹಿಳೆಯರ ಪರವಾಗಿ ನ್ಯಾಯ ದೊರಕಿಸಿ ಕೊಟ್ಟಿರುತ್ತಾರೆ ಎಂದು ಅವರು ತಿಳಿಸಿದರು.

ಜಿಲ್ಲಾ ವಕೀಲರ ಸಂಘಕ್ಕೆ ಸವಲತ್ತುಗಳನ್ನು ನೀಡಿದ್ದು ಅವಿಸ್ಮರಣೀಯ. ಹಲವು ಉತ್ತಮ ವಕೀಲ ರನ್ನು ರೂಪಿಸಿದಂತಹ ಧೀಮಂತ ವ್ಯಕ್ತಿತ್ವ ಕೆ.ಎಂ. ಪೊನ್ನಪ್ಪ ಅವರದು. ಅವರ ಸ್ಮರಣಾರ್ಥ ನಡೆಸುತ್ತಿರುವ ಕಾರ್ಯಕ್ರಮವೂ ಮಹಿಳೆಯರಿಗೆ ಉಪಯುಕ್ತವಾದದ್ದು ಹಾಗೂ ವಿಶೇಷ ಕಾನೂನು ಸವಲತ್ತುಗಳನ್ನು ಬಳಸಿಕೊಳ್ಳುವಂತೆ ತಿಳಿಸಿದರು.

ಪ್ರಾಂಶುಪಾಲ ಡಾ| ಜಗತ್‌ ತಿಮ್ಮಯ್ಯ ಅವರು ಮಾತನಾಡಿ ಮಹಿಳೆಯರ ರಕ್ಷಣೆಗೆ ಹಾಗೂ ಮಹಿಳೆಯರ ಸಬಲೀಕರಣಕ್ಕಾಗಿ ಇರುವಂತಹ ಕಾನೂನಿನ ಕುರಿತು ಅರಿವು ಮೂಡಿಸುತ್ತಿರುವ ಕಾರ್ಯಕ್ರಮವು ಪ್ರತಿಯೊಬ್ಬರಿಗೂ ಅನುಕೂಲವಾಗಲಿ ಎಂದರು. ಕೆ.ಎಂ. ಪೊನ್ನಪ್ಪ ಅವರ ಪತ್ನಿ ಸೌಭಾಗ್ಯ ಪೊನ್ನಪ್ಪ, ವಕೀಲರ ಸಂಘದ ಖಜಾಂಚಿ ಬಿ.ಸಿ. ದೇವಿಪ್ರಸಾದ್‌, ಕೆ.ಡಬ್ಲ್ಯು. ಬೋಪಯ್ಯ, ಶ್ರೀಧರ್‌ ನಾಯರ್‌, ಭಾನುಪ್ರಕಾಶ್‌, ಚಂದನ್‌, ದಿವ್ಯಾ, ಜನಿತಾ, ಕಾನೂನು ಸೇವಾ ಪ್ರಾಧಿಕಾರದ ಜಯಪ್ಪ, ಉಪಸ್ಥಿತರಿದ್ದರು. ಕಿಶೋರ್‌ ನಿರೂಪಿಸಿದರು. ಜ್ಯೋತಿ ಶಂಕರ್‌ ವಂದಿಸಿದರು.

ಉಚಿತ ನೆರವು
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ ಅವರು ಮಾತನಾಡಿ ಮಹಿಳೆಯರ ಹಿತಕ್ಕಾಗಿ ಇರುವಂತಹ ಸಿವಿಲ್‌ ಮತ್ತು ಕ್ರಿಮಿನಲ್‌ ಕಾನೂನಿನ ಬಗ್ಗೆ ಮಾಹಿತಿ ನೀಡಿ, ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ನೀಡಲಾಗುತ್ತಿರುವ ಉಚಿತ ಕಾನೂನು ನೆರವು ಹಾಗೂ ಲೋಕ ಅದಾಲತ್‌ ಬಳಸಿಕೊಳ್ಳುವಂತೆ ಸಲಹೆ ಮಾಡಿದರು.

ಮಹಿಳೆಯರಿಗೆ ತೊಂದರೆಗೊಳಗಾದ ಸಂದರ್ಭದಲ್ಲಿ ಕಾನೂನು ನೆರವನ್ನು ಉಚಿತವಾಗಿ ಕಾನೂನು ಸೇವಾ ಪ್ರಾಧಿಕಾರದಿಂದ ಪಡೆದುಕೊಳ್ಳಬಹುದಾಗಿದೆ ರಾಜಿ ಸಂಧಾನ, ಮಧ್ಯಸ್ಥಿಕೆಯ ಮೂಲಕ ಸಕಾಲದಲ್ಲಿ ಪರಿಹಾರ ಕಲ್ಪಿಸಿಕೊಡಲಾಗುತ್ತಿದ್ದು, ಸಾಮಾನ್ಯ ದುರ್ಬಲ ಶೋಷಣೆಗೊಳಗಾದ ಮಹಿಳೆಯರಿಗೆ ಇರುವಂತಹ ಹಕ್ಕನ್ನು ಪಡೆದುಕೊಳ್ಳಲು ಮುಂದಾಗುವಂತೆ ನೂರುನ್ನಿಸಾ ಅವರು ಹೇಳಿದರು. ಲೈಂಗಿಕ ದೌರ್ಜನ್ಯ, ವರದಕ್ಷಿಣೆ ಕಿರುಕುಳ ಹಾಗೂ ಆ್ಯಸಿಡ್‌ ದಾಳಿಗೆ ತುತ್ತಾದ ಮಹಿಳೆಯರಿಗೆ ಜಿಕಾನೂನಿನ ನೆರವಿನ ಜೊತೆಗೆ ಪರಿಹಾರ ರೂಪದಲ್ಲಿ ಆರ್ಥಿಕ ನೆರವನ್ನೂ ನೀಡಲಾಗುತ್ತಿದೆ ಎಂದರು.

ಟಾಪ್ ನ್ಯೂಸ್

Shiggavi-candidate

By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್‌ ಪಠಾಣಗೋ?

Kalinga-King-cobra

King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!

Mysuru-Nirmala

Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’

DKS–HDD-HDK

By Election: ಚನ್ನಪಟ್ಟಣದಲ್ಲಿ ಎಚ್‌.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್‌ ಮೇಕೆದಾಟು ಜಟಾಪಟಿ

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

Paper-Reader

Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Shiggavi-candidate

By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್‌ ಪಠಾಣಗೋ?

Kalinga-King-cobra

King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!

Mysuru-Nirmala

Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’

DKS–HDD-HDK

By Election: ಚನ್ನಪಟ್ಟಣದಲ್ಲಿ ಎಚ್‌.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್‌ ಮೇಕೆದಾಟು ಜಟಾಪಟಿ

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.